ಗೋಣಿಕೊಪ್ಪಲು, ಜೂ. ೧೫: ಕೊಡಗು ಜಿಲ್ಲೆಯಲ್ಲಿ ಮೊದಲ ಬಾರಿಗೆ ರಾಷ್ಟಿçÃಯ ಮಟ್ಟದ ಕ್ರೀಡಾ ಸೌಲಭ್ಯಗಳನ್ನು ಒದಗಿಸುವ ಉದ್ದೇಶದಿಂದ ವೀರಾಜಪೇಟೆ ವಿಧಾನಸಭಾ ಕ್ಷೇತ್ರದ ವಿ.ಬಾಡಗ ಗ್ರಾಮದಲ್ಲಿ ೪೫ ಕೋಟಿ ರೂ. ವೆಚ್ಚದ ಕ್ರೀಡಾ ಸಂಕೀರ್ಣ ನಿರ್ಮಾಣ ಕಾಮಗಾರಿ ಆರಂಭಗೊAಡಿದ್ದು, ಶಾಸಕ ಎ.ಎಸ್. ಪೊನ್ನಣ್ಣ ಅವರು ಸೋಮವಾರ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಸುಮಾರು ೧೧.೫೦ ಎಕರೆ ಸರ್ಕಾರಿ ಜಾಗದಲ್ಲಿ ನಿರ್ಮಾಣವಾಗುತ್ತಿರುವ ಈ ಕ್ರೀಡಾ ಸಂಕೀರ್ಣದಲ್ಲಿ ಅಂತರರಾಷ್ಟಿçÃಯ ಮಟ್ಟದ ಈಜುಕೊಳ, ಕೃತಕ ಹುಲ್ಲಿನ ಹಾಕಿ ಮೈದಾನ, ಬ್ಯಾಡ್ಮಿಂಟನ್ ಕೋರ್ಟ್, ಟೆನ್ನಿಸ್ ಕೋರ್ಟ್, ಶೂಟಿಂಗ್ ರೇಂಜ್, ಫುಟ್ಬಾಲ್ ಮೈದಾನ, ಕ್ರಿಕೆಟ್ ಪಿಚ್, ಸುಸಜ್ಜಿತ ಜಿಮ್ ಹಾಗೂ ವಿವಿಧ ಒಳಾಂಗಣ ಕ್ರೀಡೆಗಳಿಗೆ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಲಾಗುತ್ತಿದೆ. ಕಾಮಗಾರಿ ಪರಿಶೀಲನೆಯ ಬಳಿಕ ಮಾಧ್ಯಮದೊಂದಿಗೆ ಮಾತನಾಡಿದ ಶಾಸಕ ಎ.ಎಸ್. ಪೊನ್ನಣ್ಣ, ಕ್ರೀಡೆಯ ತವರೂರು ಎಂದೇ ಗುರುತಿಸಿಕೊಂಡಿರುವ ಕೊಡಗು ಜಿಲ್ಲೆಗೆ ಇದು ಅತ್ಯಂತ ಮಹತ್ವದ ಯೋಜನೆಯಾಗಿದ್ದು, ಯುವ ಪ್ರತಿಭೆಗಳಿಗೆ ರಾಷ್ಟಿçÃಯ ಹಾಗೂ ಅಂತರರಾಷ್ಟಿçÃಯ ಮಟ್ಟದಲ್ಲಿ ಸಾಧನೆ ಮಾಡಲು ಅಗತ್ಯ ಮೂಲಸೌಕರ್ಯ ಕಲ್ಪಿಸುವ ಉದ್ದೇಶದಿಂದ ಯೋಜನೆ ರೂಪಿಸಲಾಗಿದೆ. ಸಾವಿರಾರು ಕ್ರೀಡಾಪಟುಗಳಿಗೆ ಕೇಂದ್ರದಲ್ಲಿ ತರಬೇತಿ ಪಡೆಯಲು ಯೋಜನೆ ರೂಪಿಸಲಾಗಿದೆ. ಅಲ್ಲದೆ ಯುವಕ ಯುವತಿಯರಿಗಾಗಿ ಪ್ರತ್ಯೇಕ ಹಾಸ್ಟೆಲ್ ವ್ಯವಸ್ಥೆಗಳನ್ನು ಮಾಡಲಾಗುತ್ತದೆ ಎಂದು ತಿಳಿಸಿದರು.
ರಾಜ್ಯಸಭಾ ಸದಸ್ಯ ಅಜಯ್ ಮಾಕನ್ ಅವರು ತಮ್ಮ ಆರು ವರ್ಷದ ಸ್ಥಳೀಯ ಪ್ರದೇಶಾಭಿವೃದ್ಧಿ ನಿಧಿಯನ್ನು ಈ ಯೋಜನೆಗೆ ಮೀಸಲಿಡಲು ಮುಂದಾಗಿದ್ದು, ಹಂತಹAತವಾಗಿ ಬಿಡುಗಡೆಯಾಗುವ ಅನುದಾನವನ್ನು ಕ್ರೀಡಾ ಸಂಕೀರ್ಣ ನಿರ್ಮಾಣಕ್ಕೆ ಬಳಸಿಕೊಳ್ಳಲಾಗುತ್ತಿದೆ. ಇದಲ್ಲದೆ, ಕರ್ನಾಟಕ ಸರ್ಕಾರವೂ ಪ್ರಸಕ್ತ ಬಜೆಟ್‌ನಲ್ಲಿ ವಿಶೇಷ ಅನುದಾನವನ್ನು ಮಂಜೂರು ಮಾಡಿದೆ ಎಂದು ಹೇಳಿದರು. ೨೦೨೮ರ ಅಂತ್ಯದ ವೇಳೆಗೆ ಮೊದಲ ಹಂತದ ಕಾಮಗಾರಿ ಪೂರ್ಣಗೊಳ್ಳುವ ನಿರೀಕ್ಷೆ ಇದ್ದು, ಭವಿಷ್ಯದಲ್ಲಿ ಈ ಸಂಕೀರ್ಣವನ್ನು ರಾಷ್ಟಿçÃಯ ಮಟ್ಟದ ತರಬೇತಿ ಕೇಂದ್ರವಾಗಿ ಅಭಿವೃದ್ಧಿಪಡಿಸುವ ಗುರಿ ಹೊಂದಲಾಗಿದೆ. ಸಾವಿರಾರು ವಿದ್ಯಾರ್ಥಿಗಳಿಗೆ ತರಬೇತಿ ನೀಡುವ ವ್ಯವಸ್ಥೆಯೊಂದಿಗೆ ೪ಐದನೇ ಪುಟಕ್ಕೆ
(ಮೊದಲ ಪುಟದಿಂದ) ಯುವಕ-ಯುವತಿಯರಿಗೆ ಪ್ರತ್ಯೇಕ ವಸತಿ ನಿಲಯಗಳನ್ನೂ ನಿರ್ಮಿಸಲಾಗುವುದು ಎಂದು ತಿಳಿಸಿದರು. ಕ್ರೀಡಾ ಸಂಕೀರ್ಣ ನಿರ್ಮಾಣಕ್ಕಾಗಿ ಅಗತ್ಯವಿದ್ದ ೧೧.೫೦ ಎಕರೆ ಸರ್ಕಾರಿ ಜಾಗವನ್ನು ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆಯ ಹೆಸರಿಗೆ ವರ್ಗಾವಣೆ ಮಾಡಲಾಗಿದೆ. ಗ್ರಾಮದ ಅಭಿವೃದ್ಧಿಯ ಹಿತದೃಷ್ಟಿಯಿಂದ ಸರ್ಕಾರಿ ಜಾಗವನ್ನು ಒತ್ತುವರಿ ಮಾಡಿಕೊಂಡಿದ್ದ ಕೆಲವರು ಸ್ವಯಂಪ್ರೇರಿತವಾಗಿ ತೆರವುಗೊಳಿಸಿ ಸಹಕರಿಸಿರುವುದು ಶ್ಲಾಘನೀಯ. ೨೦೨೮ರ ಅಂತ್ಯದಲ್ಲಿ ಈ ಯೋಜನೆಯ ಒಂದು ಹಂತದ ಕಾಮಗಾರಿ ಮುಗಿಯುವ ವಿಶ್ವಾಸವಿದೆ ಎಂದು ಪೊನ್ನಣ್ಣ ಹೇಳಿದರು.
ಪ್ರಸ್ತುತ ಸ್ಥಳ ಸಮತಟ್ಟು ಮಾಡುವ ಕಾಮಗಾರಿ ಪೂರ್ಣಗೊಂಡಿದ್ದು, ಕೊಳವೆಬಾವಿ ಕೊರೆಯುವ ಮೂಲಕ ನೀರಿನ ವ್ಯವಸ್ಥೆಯನ್ನೂ ಕಲ್ಪಿಸಲಾಗಿದೆ. ಕಟ್ಟಡ ನಿರ್ಮಾಣ ಕಾರ್ಯ ಭರದಿಂದ ಸಾಗುತ್ತಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು. ವಿ.ಬಾಡಗದಲ್ಲಿ ನಿರ್ಮಾಣವಾಗುತ್ತಿರುವ ಕ್ರೀಡಾ ಸಂಕೀರ್ಣದಿAದ ಗ್ರಾಮೀಣ ಪ್ರತಿಭೆಗಳಿಗೆ ರಾಷ್ಟಿçÃÃಯ ಹಾಗೂ ಅಂತರರಾಷ್ಟಿçÃಯ ಮಟ್ಟದಲ್ಲಿ ಸಾಧನೆ ಮಾಡಲು ಉತ್ತಮ ಅವಕಾಶ ದೊರೆಯಲಿದೆ. ಶಾಸಕ ಎ.ಎಸ್. ಪೊನ್ನಣ್ಣ ಅವರ ವಿಶೇಷ ಪ್ರಯತ್ನದಿಂದ ಈ ಮಹತ್ವಾಕಾಂಕ್ಷಿ ಯೋಜನೆ ಸಾಕಾರವಾಗುತ್ತಿದ್ದು, ನಾಲ್ಕು ವರ್ಷಗಳಲ್ಲಿ ವಿವಿಧ ಕ್ರೀಡೆಗಳ ತರಬೇತಿ ಕೇಂದ್ರವಾಗಿ ರೂಪುಗೊಳ್ಳಲಿದೆ. ಈ ಕ್ರೀಡಾ ಸಂಕೀರ್ಣ ರಾಷ್ಟçಮಟ್ಟದಲ್ಲಿ ಗುರುತಿಸಿಕೊಳ್ಳುವುದರ ಜೊತೆಗೆ ನಮ್ಮ ಗ್ರಾಮೀಣ ಪ್ರದೇಶದ ಸಮಗ್ರ ಅಭಿವೃದ್ಧಿಗೂ ಹೊಸ ದಿಕ್ಕು ನೀಡಲಿದೆ ಎಂದು ಬಿ.ಶೆಟ್ಟಿಗೇರಿ ಗ್ರಾ.ಪಂ. ಮಾಜಿ ಅಧ್ಯಕ್ಷ ಕೊಲ್ಲೀರ ಬೋಪಣ್ಣ ತಿಳಿಸಿದರು.
ಈ ಸಂದರ್ಭ ವೀರಾಜಪೇಟೆ ತಾಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಉಮೇಶ್ ಕೇಚಮ್ಮಯ್ಯ, ಸ್ಥಳೀಯ ಮುಖಂಡರಾದ ಕಂಜಿತAಡ ಗಿಣಿ ಮೊಣ್ಣಪ್ಪ, ಕಂಜಿತAಡ ಪೂವಣ್ಣ, ಕೊಂಗAಡ ಕಾಶಿ ಕಾವೇರಪ್ಪ, ಕೋಲತಂಡ ರಘು ಮಾಚಯ್ಯ, ಕಾಳಿಮಾಡ ಪ್ರಶಾಂತ್, ಸೂರಜ್ ಹೊಸೂರು, ಬಟ್ಟಕಾಳಂಡ ರಾಜ, ಕೇಚಮಾಡ ಸಿದ್ದು ನಾಚಪ್ಪ, ಮಂಜುನಾಥ್, ಸುಂದರ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.
- ಹೆಚ್.ಕೆ. ಜಗದೀಶ್