ಸಿದ್ದಾಪುರ, ಜೂ. ೧೫: ಚೆನ್ನಂಗಿ ಸರಕಾರಿ ಶಾಲೆಯ ಸಮೀಪ ಕಾಡುಕೋಣ ಪ್ರತ್ಯಕ್ಷಗೊಂಡು ಆತಂಕ ಸೃಷ್ಟಿಸಿತು.

ವಿಚಾರ ತಿಳಿದು ಅರಣ್ಯ ಇಲಾಖೆ ಸಿಬ್ಬಂದಿ ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದರು.

ವಿದ್ಯಾರ್ಥಿಗಳಿಗೆ ಕಾಡುಪ್ರಾಣಿಗಳಿಂದ ಯಾವುದೇ ಸಮಸ್ಯೆಗಳಾಗದಂತೆ ಸುರಕ್ಷತಾ ಕ್ರಮ ಕೈಗೊಳ್ಳಬೇಕೆಂದು ಸ್ಥಳೀಯರು ಒತ್ತಾಯಿಸಿದ್ದಾರೆ.