ಸಿದ್ದಾಪುರ, ಜೂ. ೧೬: ಸಿದ್ದಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸಂಭವನೀಯ ಪ್ರವಾಹ ಪೀಡಿತ ಪ್ರದೇಶಗಳಾದ ಕರಡಿಗೋಡು ಗ್ರಾಮದ ನದಿ ತೀರಕ್ಕೆ ಎನ್.ಡಿ.ಆರ್.ಎಫ್. ತಂಡದ ಅಧಿಕಾರಿಗಳು ಹಾಗೂ ಸಿಬ್ಬಂದಿ ಭೇಟಿ ನೀಡಿ ಮುಂಜಾಗ್ರತಾ ಕ್ರಮದ ಬಗ್ಗೆ ಚರ್ಚಿಸಿದರು. ಜಿಲ್ಲಾಧಿಕಾರಿಗಳ ಆದೇಶದ ಮೇರೆಗೆ ಪ್ರವಾಹ ಪೀಡಿತ ಪ್ರದೇಶಕ್ಕೆ ಅಧಿಕಾರಿಗಳಾದ ಅನನ್ಯ ವಾಸುದೇವ ಮತ್ತು ರಾಮ್ ಬೋಜ್ ಸೇರಿದಂತೆ ೩೦ ಮಂದಿಯ ತಂಡ ಆಗಮಿಸಿ ಪರಿಶೀಲನೆ ನಡೆಸಿತು. ಈ ಸಂದರ್ಭ ವೀರಾಜಪೇಟೆ ತಹಶೀಲ್ದಾರ್ ಪ್ರವೀಣ್ ಕುಮಾರ್ ಮಾರ್ಗದರ್ಶನದಲ್ಲಿ ಅಮ್ಮತ್ತಿ ಹೋಬಳಿ ಕಂದಾಯ ಪರಿವೀಕ್ಷಕ ಅನಿಲ್ ಕುಮಾರ್, ಗ್ರಾಮ ಆಡಳಿತ ಅಧಿಕಾರಿಗಳಾದ ಸಚಿನ್ ಕುಲಕರ್ಣಿ, ಓಮಪ್ಪ ಬಣಕರ್, ಅನೀಶ್ ಹಾಗೂ ಕಂದಾಯ ಇಲಾಖೆ ಸಿಬ್ಬಂದಿ ಹಾಜರಿದ್ದರು.