ಕುಶಾಲನಗರ, ಜೂ. ೧೬: ಕುಶಾಲನಗರ ಪುರಸಭೆಯ ಆವರಣದಲ್ಲಿ ಮಾಜಿ ಮುಖ್ಯಮಂತ್ರಿ ಆರ್ ಗುಂಡೂರಾವ್ ಅವರ ಪ್ರತಿಮೆ ನಿರ್ಮಾಣ ಸೇರಿದಂತೆ ಕೆಲವು ವಿಷಯಗಳ ಬಗ್ಗೆ ಚರ್ಚಿಸಲು ಸಾರ್ವಜನಿಕ ಸಭೆ ನಡೆಯಿತು.
ಪುರಸಭೆಯ ಮುಖ್ಯ ಅಧಿಕಾರಿ ಗಿರೀಶ್ ಅಧ್ಯಕ್ಷತೆಯಲ್ಲಿ ಪುರಸಭಾ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ವಿವಿಧ ಸಂಘ ಸಂಸ್ಥೆಗಳ ಪ್ರಮುಖರು ಪಾಲ್ಗೊಂಡಿದ್ದರು.
ಕೆಲವು ವರ್ಷಗಳ ಹಿಂದೆ ಪಟ್ಟಣ ಪಂಚಾಯಿತಿ ಆಡಳಿತ ಮಂಡಳಿ ಸಭೆಯಲ್ಲಿ ನಿರ್ಣಯ ಕೈಗೊಂಡAತೆ ಸಂವಿಧಾನ ಶಿಲ್ಪಿ ಡಾ ಅಂಬೇಡ್ಕರ್ ಅವರ ಪ್ರತಿಮೆ ಸ್ಥಾಪಿಸುವ ಬಗ್ಗೆ ಇಂದಿನ ಸಭೆಯಲ್ಲಿ ಪ್ರಸ್ತಾವನೆ ಇಲ್ಲದಿರುವ ಕುರಿತು ಮುಖ್ಯ ಅಧಿಕಾರಿಗಳನ್ನು ಸಭೆಯಲ್ಲಿ ಕೆಲವು ಸಂಘ-ಸAಸ್ಥೆಗಳ ಪ್ರಮುಖರು ತರಾಟೆಗೆ ತೆಗೆದುಕೊಂಡರು.
ಈ ಹಿನ್ನೆಲೆಯಲ್ಲಿ ಕುಶಾಲನಗರ ಐಬಿ ರಸ್ತೆಯ ಬಳಿ ಡಾ ಬಿ ಆರ್ ಅಂಬೇಡ್ಕರ್ ಪ್ರತಿಮೆ ನಿರ್ಮಾಣದ ಬಗ್ಗೆ ನಿರ್ಣಯ ಕೈಗೊಳ್ಳಲಾಯಿತು. ಪುರಸಭೆಯ ಆವರಣದಲ್ಲಿ ಮಾಜಿ ಮುಖ್ಯಮಂತ್ರಿ ಆರ್ ಗುಂಡೂರಾವ್ ಪ್ರತಿಮೆ ನಿರ್ಮಿಸುವುದು, ಮೈಸೂರು ರಸ್ತೆಯ ವ್ಯಾಪ್ತಿಯಲ್ಲಿ ಮಾಜಿ ಉಪ ಪ್ರಧಾನಿ ಬಾಬು ಜಗಜೀವನ್ ರಾಮ್ ಅವರ ವೃತ್ತ ನಿರ್ಮಾಣ ಮತ್ತು ಕಲಾ ಭವನ ತೆರಳುವ ರಸ್ತೆಗೆ ತ್ರಿಭಾಷಾ ಕವಿ ನಿವೃತ್ತ ಪ್ರಾಂಶುಪಾಲ ವಿ ಎಸ್ ರಾಮಕೃಷ್ಣ ಅವರ ಹೆಸರನ್ನು ನಾಮಕರಣ ಮಾಡುವ ವಿಷಯದ ಬಗ್ಗೆ ಚರ್ಚೆ ನಡೆದು ಸಲಹೆ ಸೂಚನೆಗಳನ್ನು ನೀಡಲಾಯಿತು.
ಸಭೆಯಲ್ಲಿ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷ ವಿ. ಪಿ. ಶಶಿಧರ್, ವಕೀಲರ ಸಂಘದ ಅಧ್ಯಕ್ಷ ಆರ್.ಕೆ. ನಾಗೇಂದ್ರ ಬಾಬು ಮತ್ತು ಪುರಸಭೆ ಅಧಿಕಾರಿಗಳು, ಮಾಜಿ ಜನ ಪ್ರತಿನಿಧಿಗಳು, ವಿವಿಧ ಸಂಘ-ಸAಸ್ಥೆಗಳ ಪ್ರಮುಖರು ಇದ್ದರು.