ನಾಪೋಕ್ಲು, ಜೂ. ೧೬: ಮೂರ್ನಾಡು ಪದವಿ ಪೂರ್ವ ಕಾಲೇಜಿನ ಪೋಷಕರ ಉಪನ್ಯಾಸಕರ ಸಭೆ ನಡೆಯಿತು. ವಿದ್ಯಾರ್ಥಿಗಳ ಸರ್ವಾಂಗೀಣ ಬೆಳವಣಿಗೆಯಲ್ಲಿ ಉಪನ್ಯಾಸಕರೊಂದಿಗೆ ಪೋಷಕರು ಸಹ ಕೈಜೋಡಿಸಬೇಕೆಂದು ಮೂರ್ನಾಡು ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಪಿ.ಎಂ. ದೇವಕಿ ಕರೆ ನೀಡಿದರು.
ವಿದ್ಯಾಸಂಸ್ಥೆ ಅಧ್ಯಕ್ಷ ಡಾ. ಜಗತ್ ತಿಮ್ಮಯ್ಯ ಅಧ್ಯಕ್ಷತೆ ವಹಿಸಿ ಮಾತನಾಡಿ, ವಿದ್ಯಾರ್ಥಿಗಳು ಶಿಸ್ತನ್ನು ಅಳವಡಿಸಿಕೊಂಡರೆ ಉತ್ತಮ ಸಾಧನೆಯನ್ನು ಮಾಡಬಹುದು ಎಂದು ಸಲಹೆ ನೀಡಿದರು.
ವಿದ್ಯಾಸಂಸ್ಥೆಯ ಕಾರ್ಯದರ್ಶಿ ವೇಣು ಅಪ್ಪಣ್ಣ ಮಾತನಾಡಿ, ಪೋಷಕರು ತಮ್ಮ ಮಕ್ಕಳೊಂದಿಗೆ ಉತ್ತಮ ಬಾಂಧವ್ಯವನ್ನು ಬೆಳೆಸಿಕೊಳ್ಳಬೇಕು ಎಂದರು.
ಖಜಾಂಚಿ ಯತೀಶ್ ಮಾತನಾಡಿ, ವಿದ್ಯಾರ್ಥಿಗಳು ಪಠ್ಯದೊಂದಿಗೆ ಕ್ರೀಡೆಯಲ್ಲಿ ಕೂಡ ತೊಡಗಿಸಿಕೊಳ್ಳಲು ಕರೆ ನೀಡಿದರು. ಸಭೆಯಲ್ಲಿ ವಿದ್ಯಾ ಸಂಸ್ಥೆಯ ನಿರ್ದೇಶಕ ಹರೀಶ್ ದೇವಯ್ಯ, ಉಪನ್ಯಾಸಕರು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು. ಸಭೆಯಲ್ಲಿ ೨೦೨೫-೨೬ನೇ ಸಾಲಿನಲ್ಲಿ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ ೧೬ ವಿದ್ಯಾರ್ಥಿಗಳನ್ನು ಸಂಸ್ಥೆಯ ವತಿಯಿಂದ ಸನ್ಮಾನಿಸಲಾಯಿತು.
ಸರೋಜಿನಿ ಸ್ವಾಗತಿಸಿ, ರೋಹಿಣಿ ನಿರೂಪಿಸಿ, ಸೌಮಿನಿ ವಂದಿಸಿದರು.