ಕುಶಾಲನಗರ, ಜೂ. ೧೬: ಕುಶಾಲನಗರ ಪಟ್ಟಣ ಸುತ್ತಮುತ್ತ ವ್ಯಾಪ್ತಿಯಲ್ಲಿ ಶಾಲಾ ಮಕ್ಕಳನ್ನು ಸಾಗಿಸುವ ಖಾಸಗಿ ವಾಹನಗಳನ್ನು ತಪಾಸಣೆ ನಡೆಸಿದ ಕುಶಾಲನಗರ ಸಂಚಾರಿ ಪೊಲೀಸರು ಡ್ರಿಂಕ್ ಅಂಡ್ ಡ್ರೆöÊವ್ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ವಿದ್ಯಾರ್ಥಿಗಳನ್ನು ಕರೆದೊಯ್ಯುವ ವಾಹನಗಳ ಚಾಲಕರು ಮದ್ಯಪಾನ ಮಾಡಿ ವಾಹನ ಚಲಾಯಿಸುವ ಬಗ್ಗೆ ಸಾರ್ವಜನಿಕರಿಂದ ದೂರುಗಳು ಬಂದ ಹಿನ್ನೆಲೆಯಲ್ಲಿ ಸಂಚಾರಿ ಪೊಲೀಸ್ ಠಾಣಾಧಿಕಾರಿ ಗಣೇಶ್ ನೇತೃತ್ವದಲ್ಲಿ ತಪಾಸಣೆ ನಡೆಸಲಾಯಿತು.

ಫಾತಿಮಾ ಕಾನ್ವೆಂಟ್ ಮುಂಭಾಗ ಶಾಲೆ ಬಿಡುವ ಸಮಯದಲ್ಲಿ ಆಟೋ, ಟಿಟಿ, ಮಿನಿ ವ್ಯಾನ್‌ಗಳನ್ನು ಪರಿಶೀಲನೆ ನಡೆಸಲಾಯಿತು. ಮದ್ಯ ಸೇವಿಸಿ ವಾಹನ ಚಲಾಯಿಸುತ್ತಿದ್ದ ಇಬ್ಬರ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.