ಸಿದ್ದಾಪುರ, ಜೂ. ೧೬: ಕುಶಾಲನಗರ ವಲಯ ಅರಣ್ಯ ಇಲಾಖೆಯಲ್ಲಿ ಚಾಲಕನಾಗಿ ಕರ್ತವ್ಯ ನಿರ್ವಹಿಸಿ ನಿವೃತ್ತಿ ಹೊಂದಿದ ಚಾಲಕ ವಾಸುದೇವ ಅವರಿಗೆ ಅರಣ್ಯ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ಬೀಳ್ಕೊಡುಗೆ ಕಾರ್ಯಕ್ರಮವನ್ನು ಏರ್ಪಡಿಸಿದ್ದರು. ಕಾರ್ಯಕ್ರಮದಲ್ಲಿ ಮಡಿಕೇರಿ ಉಪ ಅರಣ್ಯ ಸಂರಕ್ಷಣಾಧಿಕಾರಿ ಅಭಿಷೇಕ್, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಗೋಪಾಲ್ ಎ.ಎ. ಕುಶಾಲನಗರ ವಲಯ ಅರಣ್ಯ ಅಧಿಕಾರಿ ರಕ್ಷಿತ್ ಹಾಗೂ ಸಿಬ್ಬಂದಿ ಹಾಜರಿದ್ದರು.