ಸುಂಟಿಕೊಪ್ಪ, ಜೂ. ೧೬: ಸುಂಟಿಕೊಪ್ಪ ಪ್ರಾಥಮಿಕ ಆರೋಗ್ಯ ಕೆಂದ್ರದಲ್ಲಿ ಮಲೇರಿಯಾ ವಿರೋಧಿ ಮಾಸಾಚರಣೆಯನ್ನು ಹಮ್ಮಿಕೊಳ್ಳಲಾಯಿತು.
ಸುಂಟಿಕೊಪ್ಪ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಆಯೋಜಿತಗೊಂಡಿದ್ದ ಮಾಹಿತಿ ಕಾರ್ಯಾಗಾರದ ಸಭೆಯಲ್ಲಿ ಮಾತನಾಡಿದ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಶಾಂತಿ ಅವರು, ಮಲೇರಿಯಾ ಕಾಯಿಲೆ ಹರಡುವ ಬಗ್ಗೆ, ಅದರ ರೋಗ ಲಕ್ಷಣಗಳ ಬಗ್ಗೆ ಮತ್ತು ಅದಕ್ಕೆ ನೀಡುವ ಚಿಕಿತ್ಸೆ ಬಗ್ಗೆ ಮಾಹಿತಿ ನೀಡಿದರು. ಸಾರ್ವಜನಿಕರು ಮುಂಜಾಗ್ರತಾ ಕ್ರಮ ವಹಿಸಲು ಅರಿವು ಮೂಡಿಸುವ ಅಗತ್ಯತೆ ಇದೆ ಎಂದು ಆರೋಗ್ಯ ಸಿಬ್ಬಂದಿಗಳು ಹಾಗೂ ಆಶಾ ಕಾರ್ಯಕರ್ತೆಯರಿಗೆ ತಿಳಿಸಿದರು.
ಸುಂಟಿಕೊಪ್ಪ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಮೇರಾಜ್, ರೋಗ ಲಕ್ಷಣದ ಬಗ್ಗೆ ಮಾಹಿತಿ ನೀಡಿದರು.
ಈ ಸಂದರ್ಭ ಸುಂಟಿಕೊಪ್ಪ ಪ್ರಾಥಮಿಕ ಆರೋಗ್ಯ ಕೇಂದ್ರದ ಸುರಕ್ಷಾಧಿಕಾರಿ, ಸಮುದಾಯ ಆರೋಗ್ಯ ಅಧಿಕಾರಿ ಹಾಗೂ ಆಶಾ ಕಾರ್ಯಕರ್ತೆಯರು ಹಾಜರಿದ್ದರು.