ಸಿದ್ದಾಪುರ, ಜೂ. ೧೬ : ಸಾರ್ವಜನಿಕ ರಸ್ತೆಯಲ್ಲಿ ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ಮೂವರು ಯುವಕರನ್ನು ಬಂಧಿಸುವಲ್ಲಿ ಸಿದ್ದಾಪುರ ಪೊಲೀಸರು ಯಶಸ್ವಿಯಾಗಿದ್ದಾರೆ.
ಸಿದ್ದಾಪುರ ಸಮೀಪದ ನೆಲ್ಲಿಹುದಿಕೇರಿ ಗ್ರಾಮದ ನದಿ ತೀರದ ಬಳಿ ಇರುವ ಕುಂಬಾರ ಗುಂಡಿ ರಸ್ತೆಯಲ್ಲಿ ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ಖಚಿತ ಸುಳಿವಿನ ಮೇರೆಗೆ ಸಿದ್ದಾಪುರ ಪೊಲೀಸರು ದಾಳಿ ನಡೆಸಿ ಮೂವರು ಯುವಕರನ್ನು ಬಂಧಿಸಿದ್ದಾರೆ.
ಗುಹ್ಯ ಗ್ರಾಮದ ಕೂಡುಗದ್ದೆ ನಿವಾಸಿ ಧನುಷ್ (೨೩) ಹಾಗೂ ಕರಡಿಗೋಡು ಗ್ರಾಮದ ನಿವಾಸಿ ಗೌತಮ್ (೧೯) ನೆಲ್ಲಿ ಹುದಿಕೇರಿ ಗ್ರಾಮದ ನಿವಾಸಿ ಅನ್ಸಾದ್ (೨೩) ಎಂಬವÀರುಗಳನ್ನು ಬಂಧಿಸಿ ಅವರಿಂದ ೬೧೨ ಗ್ರಾಂ ತೂಕದ ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ. ಅಲ್ಲದೆ ಆರೋಪಿಗಳು ಬಳಸುತ್ತಿದ್ದ ೩ ಐಫೋನ್ಗಳು, ನಗದು ರೂ೩೦೦ ಮತ್ತು ಮೂರು ಗಾಂಜಾ ಕವರ್ಗಳು, ಕಪ್ಪು ಮತ್ತು ಕೆಂಪು ಬಣ್ಣದಿಂದ ಕೂಡಿದ ಬ್ಯಾಗ್ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಕಾರ್ಯಾಚರಣೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿಂದು ಮಣಿ ಮತ್ತು ಮಡಿಕೇರಿ ಡಿವೈಎಸ್ಪಿ ಸೂರಜ್ ಮಾರ್ಗದರ್ಶನದಲ್ಲಿ ಮಡಿಕೇರಿ ವಿಭಾಗದ ಇನ್ಸ್ಪೆಕ್ಟರ್ ಚಂದ್ರಶೇಖರ್ ನೇತೃತ್ವದಲ್ಲಿ ಜಿಲ್ಲಾ ಅಪರಾಧ ಪತ್ತೆದಳದ ಸಿಬ್ಬಂದಿಗಳಾದ ನಿರಂಜನ್, ಯೋಗೇಶ್, ಪ್ರವೀಣ್, ಸಿದ್ದಾಪುರ ಸಹಾಯಕ ಠಾಣಾಧಿಕಾರಿ ಮಂಜುನಾಥ್, ಅಪರಾಧ ವಿಭಾಗದ ಸಿಬ್ಬಂದಿ ಪ್ರಕಾಶ್, ರಾಜೇಶ್, ಮಣಿಕಂಠ ಇನ್ನಿತರರು ಪಾಲ್ಗೊಂಡಿದ್ದರು.
-ವಾಸು ಎ.ಎನ್.