ಕುಶಾಲನಗರ, ಜೂ. ೧೬: ಕುಶಾಲನಗರದಿಂದ ಕೆಲವು ದಿನಗಳ ಕಾಲ ನಾಪತ್ತೆಯಾಗಿದ್ದ ಮಹಿಳೆ ಮತ್ತು ಆಕೆಯ ಅಪ್ರಾಪ್ತ ಮಗನನ್ನು ಮತಾಂತರ ಮಾಡಿರುವ ಘಟನೆ ಬಗ್ಗೆ ಉನ್ನತ ಮಟ್ಟದ ತನಿಖೆ ನಡೆಸುವಂತೆ ಕುಶಾಲನಗರ ಹಿಂದೂ ಹಿತರಕ್ಷಣಾ ಸಮಿತಿ ಪ್ರಮುಖರು ಆಗ್ರಹಿಸಿದ್ದಾರೆ.

ಕುಶಾಲನಗರ ಪಟ್ಟಣ ಸುತ್ತಮುತ್ತ ವ್ಯಾಪ್ತಿಯಲ್ಲಿ ದೊಡ್ಡ ಪ್ರಮಾಣದಲ್ಲಿ ಲವ್ ಜಿಹಾದ್ ಹೆಸರಿನಲ್ಲಿ ಮಹಿಳೆಯರನ್ನು ಮತಾಂತರ ಮಾಡುವ ಪ್ರಕರಣಗಳು ಬೆಳಕಿಗೆ ಬಂದಿದ್ದು ಈ ಹಿನ್ನೆಲೆಯಲ್ಲಿ ಕುಶಾಲನಗರ ಪೊಲೀಸರು ಇಬ್ಬರು ಯುವಕರನ್ನು ಪತ್ತೆ ಹಚ್ಚಿ ಕ್ರಮ ಕೈಗೊಂಡಿದ್ದಾರೆ. ಪ್ರಕರಣದ ಗಂಭೀರತೆಯನ್ನು ಪರಿಗಣಿಸಿ ಕಾನೂನು ಪ್ರಕಾರ ಕ್ರಮ ಕೈಗೊಳ್ಳುವಂತೆ ಸಮಿತಿಯ ಪ್ರಮುಖರಾದ ಭರತ್ ಮಾಚಯ್ಯ ಆಗ್ರಹಿಸಿದ್ದಾರೆ

ಕುಶಾಲನಗರ ಪತ್ರಕರ್ತರ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ಮಾತನಾಡಿದ ಅವರು ಕುಶಾಲನಗರ ಸಮೀಪದ ನಿಸರ್ಗಧಾಮ ಬಳಿಯ ಅಂಗಡಿ ಮಳಿಗೆಯಲ್ಲಿ ಕೆಲಸಕ್ಕಿದ್ದ ಮಹಿಳೆಯೊಬ್ಬಳನ್ನು ಮತಾಂತರ ಮಾಡಿರುವುದು ಹಾಗೂ ಆಕೆಯ ಅಪ್ರಾಪ್ತ ಮಗನನ್ನು ಶಸ್ತçಚಿಕಿತ್ಸೆ ಮೂಲಕ ಸುನ್ನತ್ ಮಾಡಿರುವುದು ಕಾನೂನು ಬಾಹಿರ ಕೃತ್ಯವಾಗಿದೆ ಎಂದು ಹೇಳಿದ್ದಾರೆ.

ಈ ಕೃತ್ಯದಲ್ಲಿ ಪಾಲ್ಗೊಂಡಿರುವ ಜಲೀಲ್ ಎಂಬಾತನನ್ನು ತಕ್ಷಣ ಗಡಿಪಾರು ಮಾಡಲು ಜಿಲ್ಲಾಡಳಿತ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ. ಸಮಿತಿಯ ಪ್ರಮುಖರಾದ ಅಮೃತರಾಜ್ ಮಾತನಾಡಿ, ಪೊಲೀಸರು ವಿಷಯವನ್ನು ಗಂಭೀರವಾಗಿ ಪರಿಗಣಿಸುವುದು ಮತ್ತು ಈ ಪ್ರಕರಣದ ವಿರುದ್ಧ ಹಿಂದೂ ಸಂಘಟನೆಗಳು ಈಗಾಗಲೇ ಸಭೆ ನಡೆಸಿ ಪ್ರತಿರೋಧ ವ್ಯಕ್ತಪಡಿಸಿದ್ದಾರೆ. ಹೋರಾಟದ ರೂಪುರೇಷೆಗಳನ್ನು ಸಿದ್ಧಪಡಿಸಲಾಗುತ್ತಿದೆ ಎಂದರು. ೪ಐದನೇ ಪುಟಕ್ಕೆ

(ಮೊದಲ ಪುಟದಿಂದ) ಇಂಥ ಪ್ರಕರಣಗಳು ಮರುಕಳಿಸದಂತೆ ಪೊಲೀಸರು ಕ್ರಮ ಕೈಗೊಳ್ಳಬೇಕು. ನಿಸರ್ಗಧಾಮ ವ್ಯಾಪ್ತಿಯಲ್ಲಿ ಕೆಲವು ಪ್ರಕರಣಗಳು ಮರುಕಳಿಸುತ್ತಿದ್ದು ಈ ಬಗ್ಗೆ ಪೊಲೀಸರು ಸಂಪೂರ್ಣ ಮಾಹಿತಿ ಸಂಗ್ರಹ ಮಾಡಿ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು. ಹಿಂದೂ ಹೆಣ್ಣುಮಕ್ಕಳ ರಕ್ಷಣೆಗೆ ಬೀದಿಗಿಳಿದು ಹೋರಾಟ ಮಾಡುವ ಅಗತ್ಯತೆ ಬಂದಿದೆ ಎಂದು ಅವರು ಹೇಳಿದರು.

ಕೇರಳ ಸಮಾಜದ ಪ್ರಮುಖರಾದ ವರದ ಅವರು ಮಾತನಾಡಿ ತಮ್ಮ ಸಮುದಾಯದ ಮಹಿಳೆ ಮತ್ತು ಅಪ್ರಾಪ್ತ ಬಾಲಕನಿಗೆ ಆಗಿರುವ ಅನ್ಯಾಯದ ಬಗ್ಗೆ ಖಂಡಿಸಿ ಈ ಬಗ್ಗೆ ಪೊಲೀಸರು ತಕ್ಷಣ ಉನ್ನತ ಮಟ್ಟದ ತನಿಖೆ ನಡೆಸಿ ಕಾನೂನು ಪ್ರಕಾರ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು. ಸಮಾಜದಲ್ಲಿ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಸದ್ಯದಲ್ಲಿಯೇ ಬೃಹತ್ ಜಾಗೃತಿ ಜಾಥಾ ಹಮ್ಮಿಕೊಳ್ಳಲಾಗುವುದು ಎಂದು ಹೇಳಿದರು. ಗೋಷ್ಠಿಯಲ್ಲಿ ಕುಶಾಲನಗರ ಗೌಡ ಸಮಾಜದ ಅಧ್ಯಕ್ಷರಾದ ಚಿಲ್ಲನ ಗಣಿ ಪ್ರಸಾದ್ ಇದ್ದರು.