ಸಿದ್ದಾಪುರ, ಜೂ. ೧೬: ಅನಾರೋಗ್ಯದಿಂದ ಬಳಲುತ್ತಿದ್ದ ಖಾಸಗಿ ಶಾಲೆಯ ಶಿಕ್ಷಕಿಯೊಬ್ಬರು ತಮ್ಮ ಮನೆಯೊಳಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕರಡಿಗೋಡು ಗ್ರಾಮದಲ್ಲಿ ನಡೆದಿದೆ.

ಗ್ರಾಮದ ನಿವಾಸಿ ಶಾಜಿ ಕೆ.ಡಿ. ಎಂಬವರ ಪತ್ನಿ ಅನುಷಾ (೩೬) ಎಂಬವರು ಕರಡಿಗೋಡು ಗ್ರಾಮದ ಖಾಸಗಿ ಸಂಸ್ಥೆಗೆ ಸೇರಿದ ಶಾಲೆಯಲ್ಲಿ ಶಿಕ್ಷಕಿಯಾಗಿ ಸೇವೆ ಸಲ್ಲಿಸುತ್ತಿದ್ದರು.ಕಳೆದ ಕೆಲವು ತಿಂಗಳ ಹಿಂದೆ ಸ್ಕೂಟಿಯಿಂದ ಬಿದ್ದು ಅವರ ಕಾಲಿಗೆ ಗಂಭೀರ ಗಾಯವಾಗಿದ್ದು, ಸಾಕಷ್ಟು ಚಿಕಿತ್ಸೆ ಪಡೆದರೂ ಕೂಡ ಗುಣಮುಖವಾಗಿರಲಿಲ್ಲ. ಇದರಿಂದ ಮನನೊಂದು ಮನೆಯಲ್ಲಿ ಯಾರು ಇಲ್ಲದ ಸಂದರ್ಭ ಮನೆಯೊಳಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಮೃತ ಅನುಷಾಳ ಪತಿ ಶಾಜಿ ಸಿದ್ದಾಪುರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಪೊಲೀಸರು ಸ್ಥಳಕ್ಕೆ ತೆರಳಿ ಪ್ರಕರಣ ದಾಖಲಿಸಿ ಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ. ಮೃತರು ಪತಿ ಹಾಗೂ ಎರಡು ಮಕ್ಕಳನ್ನು ಅಗಲಿದ್ದಾರೆ.