ಮಡಿಕೇರಿ, ಜೂ. ೧೭: ಪ್ರಸಕ್ತ ಸಾಲಿನ ಅಲ್ಪಸಂಖ್ಯಾತರ ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳಲ್ಲಿ (ಪಿಯುಸಿ, ಡಿಪ್ಲೋಮಾ ಹಾಗೂ ಐ.ಟಿ.ಐ ಕೋರ್ಸಿನ ವಿದ್ಯಾರ್ಥಿಗಳಿಗೆ ಮಾತ್ರ) ಪ್ರವೇಶಕ್ಕಾಗಿ (ರಾಜ್ಯ ವಿದ್ಯಾರ್ಥಿ ನಿಲಯ ತಂತ್ರಾAಶದ) ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

೨೦೨೬-೨೭ ನೇ ಸಾಲಿಗೆ ಕೊಡಗು ಜಿಲ್ಲೆಯ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ಮೆಟ್ರಿಕ್ ನಂತರದ ಬಾಲಕ/ಬಾಲಕಿಯರ ವಿದ್ಯಾರ್ಥಿನಿಲಯ ಮಡಿಕೇರಿ ಹಾಗೂ ಕುಶಾಲನಗರದ ವಿದ್ಯಾರ್ಥಿ ನಿಲಯಗಳಿಗೆ (ಪಿಯುಸಿ, ಡಿಪ್ಲೋಮಾ ಹಾಗೂ ಐ.ಟಿ.ಐ ಕೋರ್ಸಿನ ವಿದ್ಯಾರ್ಥಿಗಳಿಗೆ ಮಾತ್ರ) ಪ್ರವೇಶಕ್ಕಾಗಿ ಹೊಸದಾಗಿ ಪ್ರವೇಶ ಬಯಸುವ ವಿದ್ಯಾರ್ಥಿಗಳು ಆನ್‌ಲೈನ್‌ನ (ರಾಜ್ಯ ವಿದ್ಯಾರ್ಥಿನಿಲಯ ತಂತ್ರಾAಶದ) hಣಣಠಿs://shಠಿ.ಞಚಿಡಿಟಿಚಿಣಚಿಞಚಿ.gov.iಟಿ ಮೂಲಕ ಅರ್ಜಿ ಸಲ್ಲಿಸಬಹುದು.

ಅರ್ಹ ವಿದ್ಯಾರ್ಥಿಗಳು ಕೂಡಲೇ ಇದರ ಸದುಪಯೋಗಪಡಿಸಿ ಕೊಳ್ಳಲು ಕೋರಿದೆ. ಹೊಸ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ತಾ. ೩೦ ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗೆ ಕಚೇರಿ ದೂ.ಸಂ. ೦೮೨೭೨-೨೨೫೫೨೮ / ೨೨೦೨೧೪, ನಿಲಯಪಾಲಕರು ಮಡಿಕೇರಿ ೯೭೪೨೧೧೬೬೦೧, ನಿಲಯಪಾಲಕರು ಕುಶಾಲನಗರ ೯೯೪೫೯೬೦೦೦೪, ತಾಲೂಕು ಮಾಹಿತಿ ಕೇಂದ್ರ ಸೋಮವಾರಪೇಟೆ ದೂರವಾಣಿ ಸಂಖ್ಯೆ: ೮೫೪೮೦೬೮೫೧೯, ಜಿಲ್ಲಾ ಅಲ್ಪಸಂಖ್ಯಾತರ ಮಾಹಿತಿ ಕೇಂದ್ರ, ಮೌಲಾನಾ ಆಜಾದ್ ಭವನ, ಎಫ್.ಎಂ.ಸಿ. ಕಾಲೇಜು ಹತ್ತಿರ, ಮಡಿಕೇರಿ ಕೊಡಗು ಜಿಲ್ಲೆ: ೯೯೭೨೭೯೯೦೯೧ ಹಾಗೂ ತಾಲೂಕು ಮಾಹಿತಿ ಕೇಂದ್ರ ವೀರಾಜಪೇಟೆ ದೂ.ಸಂ. ೯೯೦೦೭೩೧೦೩೭ ನ್ನು ಸಂಪರ್ಕಿಸಬಹುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಬಿ.ಎಂ. ದಿವಾಕರ ತಿಳಿಸಿದ್ದಾರೆ.