ಕುಶಾಲನಗರ, ಜೂ. ೧೭: ಕುಶಾಲನಗರ ಗೊಂದಿಬಸವನಹಳ್ಳಿ ಗ್ರಾಮದಲ್ಲಿ ವಿವಾಹಿತ ಮಹಿಳೆಯೋರ್ವರು ನೇಣಿಗೆ ಶರಣಾದ ಘಟನೆ ನಡೆದಿದೆ.

ಗ್ರಾಮದ ನಿವಾಸಿ ಮಹೇಶ್ ಎಂಬವರ ಪತ್ನಿ ತೇಜ (೨೭) ಮಂಗಳವಾರ ರಾತ್ರಿ ಪತಿ ಮನೆಯಿಂದ ಹೊರಗೆ ತೆರಳಿದ ಸಂದರ್ಭ ಮನೆಯ ಸ್ನಾನ ಗೃಹದ ಛಾವಣಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ಕುಶಾಲನಗರ ಗ್ರಾಮಾಂತರ ಪೊಲೀಸ್ ಠಾಣೆಯ ಅಧಿಕಾರಿ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಮಹಜರು ನಡೆಸಿ ಕ್ರಮ ಕೈಗೊಂಡಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಪೊಲೀಸರು ವಿಚಾರಣೆ ಕೈಗೊಂಡಿದ್ದಾರೆ. ಮೃತ ಮಹಿಳೆ ಪತಿ ಮತ್ತು ಈರ್ವರು ಪುತ್ರಿಯರನ್ನು ಅಗಲಿದ್ದಾರೆ.