ಮಡಿಕೇರಿ, ಜೂ. ೧೭: ಕರ್ನಾಟಕ ಕ್ರಿಶ್ಚಿಯನ್ ಸಮುದಾಯ ಅಭಿವೃದ್ದಿ ನಿಗಮ ವತಿಯಿಂದ ೨೦೨೬-೨೭ನೇ ಸಾಲಿನ ಕ್ರಿಶ್ಚಿಯನ್ ಜನಾಂಗದವರಿಗೆ ಅರಿವು ಯೋಜನೆಯಡಿ ವಿದ್ಯಾಭ್ಯಾಸ ಸಾಲ ಪಡೆಯಲು ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ನಿಗಮದ ವೆಬ್ಸೈಟ್: hಣಣಠಿs://ಞಛಿಛಿಜಛಿಟoಟಿಟiಟಿe.ಞಚಿಡಿಟಿಚಿಣಚಿಞಚಿ.gov.iಟಿ ಮೂಲಕ ಆನ್ಲೈನ್ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗೆ ಜಿಲ್ಲಾ ವ್ಯವಸ್ಥಾಪಕರ ಕಚೇರಿ, ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ, ಮೌಲಾನಾ ಆಜಾದ್ ಭವನ, ಗ್ರಾಮಾಂತರ ಪೊಲೀಸ್ ಠಾಣೆ ಹತ್ತಿರ, ಎಫ್ಎಂಸಿ ಕಾಲೇಜು ರಸ್ತೆ, ಮಡಿಕೇರಿ ಇಲ್ಲಗೆ ಭೇಟಿ ನೀಡಬಹುದು ಹಾಗೂ ದೂ.ಸಂ. ೦೮೨೭೨-೨೦೧೪೪೯ ನ್ನು ಸಂಪರ್ಕಿಸಬಹುದು ಎಂದು ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.