ಶನಿವಾರಸಂತೆ, ಜೂ. ೧೭: ಪಟ್ಟಣದ ತ್ಯಾಗರಾಜ ಕಾಲೋನಿಯಲ್ಲಿರುವ ಶ್ರೀ ಚಾಮುಂಡೇಶ್ವರಿ ದೇವಿ ಹಾಗೂ ಗುಳಿಗ ದೈವದ ಬನದಲ್ಲಿ ಸೋಮವಾರ ಮಾಸಿಕ ಸಂಕ್ರಮಣ ವಿಶೇಷ ಪೂಜಾ ಕೈಂಕರ್ಯ ಶ್ರದ್ಧಾಭಕ್ತಿಯಿಂದ ಜರುಗಿತು.

ದೇವಿ ಹಾಗೂ ದೈವಕ್ಕೆ ಹಾಲಿನ ಅಭಿಷೇಕ ಮಾಡಿ, ವಿವಿಧ ಬಗೆಯ ಹೂವುಗಳಿಂದ ಅಲಂಕರಿಸಿ, ಮಡ್ಲಕ್ಕಿ, ಹಣ್ಣುಕಾಯಿ, ನೈವೇದ್ಯ ಸಮರ್ಪಿಸಲಾಯಿತು. ಮಹಾಮಂಗಳಾರತಿಯಾಗಿ ತೀರ್ಥ-ಪ್ರಸಾದ ವಿನಿಯೋಗವಾಯಿತು.

ಅರ್ಚಕ ಪ್ರಕಾಶ್ಚಂದ್ರ ಸುವರ್ಣ ಪೂಜಾ ವಿಧಿ-ವಿಧಾನ ನೆರವೇರಿಸಿದರು. ಪಟ್ಟಣ, ತ್ಯಾಗರಾಜ ಕಾಲೋನಿಯ ಭಕ್ತರು ಶ್ರದ್ಧಾಭಕ್ತಿಯಿಂದ ಪೂಜಾ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.