ವೀರಾಜಪೇಟೆ, ಜೂ. ೧೭: ವಿದ್ಯಾರ್ಥಿಗಳು ಸಮಯವನ್ನು ಸದುಪಯೋಗಪಡಿಸಿಕೊಂಡು ಶ್ರಮ, ಶಿಸ್ತು ಹಾಗೂ ದೃಢ ಸಂಕಲ್ಪದಿAದ ವಿದ್ಯಾಭ್ಯಾಸ ಮಾಡಿದರೆ ಜೀವನದಲ್ಲಿ ಉನ್ನತ ಗುರಿ ಸಾಧಿಸಲು ಸಾಧ್ಯ ಎಂದು ನವದೆಹಲಿಯ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ ಪ್ರೊಫೆಸರ್ ಡಾ. ಎಂ. ನರಸಿಂಹ ಮೂರ್ತಿ ಹೇಳಿದರು.

ಪಟ್ಟಣದ ಪ್ರಗತಿ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿಗಳಿಗಾಗಿ ಆಯೋಜಿಸಿದ್ದ ಶೈಕ್ಷಣಿಕ ಶ್ರೇಷ್ಠತೆಯೊಂದಿಗೆ ಸ್ಪರ್ಧಾತ್ಮಕ ಪರೀಕ್ಷೆಗಳ ಸಿದ್ಧತೆ ಕುರಿತ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದ ಅವರು, ಜೆಇಇ, ಸಿಇಟಿ, ನೀಟ್ ಸೇರಿದಂತೆ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳ ಸಿದ್ಧತೆಯನ್ನು ಪ್ರೌಢಶಾಲಾ ಹಂತದಿAದಲೇ ಆರಂಭಿಸಿದರೆ ಉನ್ನತ ಶಿಕ್ಷಣದ ಹಾದಿ ಸುಗಮವಾಗುತ್ತದೆ. ಪೋಷಕರು ಮಕ್ಕಳ ಮೇಲೆ ಒಮ್ಮೆಲೇ ಹೆಚ್ಚಿನ ಒತ್ತಡ ಹೇರುವ ಬದಲು ಪ್ರತಿದಿನ ಸ್ವಲ್ಪಸ್ವಲ್ಪವಾಗಿ ಶಿಕ್ಷಣದ ಮಹತ್ವವನ್ನು ತಿಳಿಸಿಕೊಟ್ಟರೆ ಅದು ಮಕ್ಕಳ ಮನಸ್ಸಿನಲ್ಲಿ ಶಾಶ್ವತವಾಗಿ ಉಳಿಯುತ್ತದೆ. ವಿಭಿನ್ನವಾಗಿ ಯೋಚಿಸುವ ಮನೋಭಾವ ಬೆಳೆಸಿಕೊಂಡ ವಿದ್ಯಾರ್ಥಿಗಳೇ ಜೀವನದಲ್ಲಿ ಯಶಸ್ಸು ಸಾಧಿಸುತ್ತಾರೆ. ಪಠ್ಯಪುಸ್ತಕದ ಜ್ಞಾನ ಮಾತ್ರವಲ್ಲದೆ ಗುರು-ಹಿರಿಯರ ಅನುಭವದಿಂದಲೂ ಜೀವನ ಮೌಲ್ಯಗಳನ್ನು ಕಲಿಯಬೇಕು ಎಂದು ಸಲಹೆ ನೀಡಿದರು.

ಬೆಂಗಳೂರಿನ ವೇದಾನ್ಸ್ ಅಕಾಡೆಮಿ ಸಂಸ್ಥಾಪಕ ನಿರ್ದೇಶಕ ಎಂ.ಎಸ್.ಸಿ. ಕೆ.ಆರ್. ನವೀನ್ ಮಾತನಾಡಿ, ವಿದ್ಯಾರ್ಥಿಗಳಿಗೆ ಶಿಸ್ತು ಮತ್ತು ನಿರಂತರ ಪ್ರಯತ್ನ ಅತ್ಯಗತ್ಯ. ವೈದ್ಯಕೀಯ ಮತ್ತು ಇಂಜಿನಿಯರಿAಗ್ ಕ್ಷೇತ್ರಗಳ ಜೊತೆಗೆ ವಿವಿಧ ಉನ್ನತ ಹುದ್ದೆಗಳತ್ತವೂ ಗಮನಹರಿಸಿ, ದೃಢ ಛಲದಿಂದ ಸಿದ್ಧತೆ ನಡೆಸಿದರೆ ಯಶಸ್ಸು ಸಾಧ್ಯ ಎಂದು ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಪ್ರಗತಿ ಶಾಲೆಯ ವ್ಯವಸ್ಥಾಪಕ ಮಾದಂಡ ತಿಮ್ಮಯ್ಯ ಮಾತನಾಡಿ, ವಿದ್ಯಾರ್ಥಿಗಳಿಗೆ ಸರಿಯಾದ ಮಾರ್ಗದರ್ಶನ ನೀಡುವ ಉದ್ದೇಶದಿಂದ ಕಾರ್ಯಾಗಾರವನ್ನು ಆಯೋಜಿಸಲಾಗಿದ್ದು, ಇದರ ಸದುಪಯೋಗ ಪಡೆದು ಭವಿಷ್ಯ ರೂಪಿಸಿಕೊಳ್ಳಬೇಕು ಎಂದು ಕರೆ ನೀಡಿದರು. ವೇದಿಕೆಯಲ್ಲಿ ಪ್ರಗತಿ ಶಾಲೆಯ ಪ್ರಮುಖರಾದ ಸುಶ್ಮ ತಿಮ್ಮಯ್ಯ, ಬೆಂಗಳೂರಿನ ಭರತ್ ಸೇರಿದಂತೆ ಇತರ ಗಣ್ಯರು ಉಪಸ್ಥಿತರಿದ್ದರು. ಕಾರ್ಯಾಗಾರದಲ್ಲಿ ವಿದ್ಯಾರ್ಥಿಗಳು ಹಾಗೂ ಪೋಷಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.