ಕುಶಾಲನಗರ, ಜೂ. ೧೭: ಕುಶಾಲನಗರದ ಪಟ್ಟಣ ವ್ಯಾಪ್ತಿಯ ವಾಣಿಜ್ಯ ಕಟ್ಟಡಗಳಿಂದ ಚರಂಡಿ ಮೂಲಕ ಶೌಚಾಲಯದ ತ್ಯಾಜ್ಯ ಹರಿಸಿ ಕಾವೇರಿ ನದಿ ಸೇರುತ್ತಿರುವ ಬಗ್ಗೆ ಕೂಡಲೇ ಕ್ರಮ ಕೈಗೊಳ್ಳುವಂತೆ ವಿವಿಧ ಸಂಘ ಸಂಸ್ಥೆಗಳ ಪ್ರಮುಖರು ಕುಶಾಲನಗರ ಪುರಸಭೆ ಮುಖ್ಯಾಧಿಕಾರಿಗೆ ಮನವಿ ಸಲ್ಲಿಸಿದರು. ದಿನನಿತ್ಯ ರಾತ್ರಿ ವೇಳೆ ಗಣಪತಿ ದೇವಸ್ಥಾನದ ಬಳಿ ಕೆಲವು ಕಟ್ಟಡಗಳಿಂದ ಚರಂಡಿಗೆ ಶೌಚಾಲಯದ ನೀರು ಹರಿಸುತ್ತಿರುವ ಕಾರಣ ಇಡೀ ವಾತಾವರಣ ದುರ್ವಾಸನೆ ಕೂಡಿರುತ್ತದೆ ಎಂದು ಪುರಸಭೆಯ ಮುಖ್ಯಾಧಿಕಾರಿ ಗಿರೀಶ್ ಅವರಿಗೆ ಚೇಂಬರ್ ಆಫ್ ಕಾಮರ್ಸ್ ಅಧ್ಯಕ್ಷ ಕೆ.ಎಸ್.ನಾಗೇಶ್ ನೇತೃತ್ವದಲ್ಲಿ ಮನವಿ ಸಲ್ಲಿಸಿ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಲಾಯಿತು.

ಚೇಂಬರ್ ಆಫ್ ಕಾಮರ್ಸ್ ಅಧ್ಯಕ್ಷ ಕೆ.ಎಸ್.ನಾಗೇಶ್ ಮಾತನಾಡಿ, ಶೌಚಾಲಯದ ನೀರನ್ನು ಚರಂಡಿ ಮೂಲಕ ಕಾವೇರಿ ನದಿಗೆ ಹರಿಸುತ್ತಿರುವ ವ್ಯಕ್ತಿಗಳನ್ನು ಪತ್ತೆಹಚ್ಚಿ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಮುಖ್ಯಾಧಿಕಾರಿ ಗಿರೀಶ್ ಮನವಿ ಸ್ವೀಕರಿಸಿ, ತಕ್ಷಣವೇ ಸಂಬAಧಪಟ್ಟವರಿಗೆ ನೋಟಿಸ್ ನೀಡಲಾಗುವುದು. ಎಚ್ಚೆತ್ತುಕೊಳ್ಳದಿದ್ದರೆ ಕೋರ್ಟ್ ಮೂಲಕ ದೊಡ್ಡ ಮಟ್ಟದ ದಂಡ ವಿಧಿಸುವ ಕ್ರಮಕ್ಕೆ ಮುಂದಾಗುವುದಾಗಿ ತಿಳಿಸಿದರು. ಕರ್ನಾಟಕ ರಕ್ಷಣಾ ಪಡೆ ಜಿಲ್ಲಾಧ್ಯಕ್ಷರಾದ ದೀಪಕ್, ದಿನೇಶ್ ಕಾವಲು ಪಡೆಯ ಜಿಲ್ಲಾಧ್ಯಕ್ಷ ಎಂ ಕೃಷ್ಣ, ಕಾಂಗ್ರೆಸ್ ಮುಖಂಡ ಹೆಚ್.ಕೆ.ನಟೇಶ್ ಗೌಡ, ಪುರಸಭೆ ಮಾಜಿ ಸದಸ್ಯರಾದ ಎಂ.ಕೆ. ದಿನೇಶ್, ಪ್ರಕಾಶ್, ಪ್ರಮುಖರಾದ ಎಂ.ಡಿ.ಕೃಷ್ಣಪ್ಪ, ಆನಂದ್, ಪುರಸಭೆಯ ಆರೋಗ್ಯಾಧಿಕಾರಿ ಉದಯ್ ಮತ್ತಿತರರು ಇದ್ದರು.