ಮಡಿಕೇರಿ, ಜೂ. ೧೮: ಅಬ್ಬಿ ಜಲಪಾತ ಮತ್ತು ಮಾಂದಲ್ ಪಟ್ಟಿಗೆ ತೆರಳುವ ಮಾರ್ಗದ ಜಂಕ್ಷನ್ ಬಳಿ ಮತ್ತು ಉಡೋತ್‌ಮೊಟ್ಟೆ ಬಳಿಯ ಗಾಜಿನ ಸೇತುವೆ ಸ್ಥಳಕ್ಕೆ ಜಿಲ್ಲಾಧಿಕಾರಿ ಎಸ್.ಜೆ. ಸೋಮಶೇಖರ್ ಗುರುವಾರ ಭೇಟಿ ನೀಡಿ ಪರಿಶೀಲಿಸಿದರು.
ಮೊದಲಿಗೆ ಅಬ್ಬಿ ಜಲಪಾತ ಮತ್ತು ಮಾಂದಲ್ ಪಟ್ಟಿಗೆ ತೆರಳುವ ಮಾರ್ಗದ ಜಂಕ್ಷನ್ ಬಳಿಯ ಗಾಜಿನ ಸೇತುವೆ ವೀಕ್ಷಿಸಿದ ಜಿಲ್ಲಾಧಿಕಾರಿ ಅವರು ಗಾಜಿನ ಸೇತುವೆ ನಿರ್ಮಾಣ ಮಾಡಿರುವ ಜಾಗ, ಗಾಜಿನ ಸೇತುವೆ ನಿರ್ಮಾಣ ಮಾಡಲು ಅನುಮತಿ ಪಡೆಯಲಾಗಿದೆಯೇ, ನಿರ್ಮಾಣ ಸಂದರ್ಭದಲ್ಲಿ ಇಂಜಿನಿಯರ್‌ಗಳ ದೃಢೀಕರಣ ಪತ್ರ, ಹಾಗೆಯೇ ಪ್ರವಾಸಿಗರ ಅನುಕೂಲಕ್ಕಾಗಿ ವಾಹನ ನಿಲುಗಡೆಗೆ ಸ್ಥಳಾವಕಾಶ, ಪ್ರವಾಸಿಗರ ವೀಕ್ಷಣೆಗೆ ಎಷ್ಟು ಕಾಲಾವಕಾಶ ಮತ್ತು ಪ್ರವಾಸಿಗರಿಗೆ ನಿಗದಿ ಮಾಡಿರುವ ಶುಲ್ಕ ಇತ್ಯಾದಿ ಬಗ್ಗೆ ಮಾಹಿತಿ ಪಡೆದರು. ಪ್ರವಾಸೋದ್ಯಮ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ನಿರ್ದೇಶನ ನೀಡಿದರು. ಬಳಿಕ ಉಡೋತ್‌ಮೊಟ್ಟೆ ಬಳಿಯ ಗಾಜಿನ ಸೇತುವೆ ವೀಕ್ಷಿಸಿದ ಜಿಲ್ಲಾಧಿಕಾರಿಗಳು ಪ್ರವಾಸಿಗರ ಸುರಕ್ಷತೆಗೆ ಒತ್ತು ನೀಡಬೇಕು. ವಾಹನ ನಿಲುಗಡೆಗೆ ಜಾಗ ಇಲ್ಲದಿರುವುದರಿಂದ ಸಾಮಾನ್ಯವಾಗಿ ಓಡಾಡುವ ವಾಹನಗಳ ಸಂಚಾರಕ್ಕೆ ತೊಂದರೆಯಾಗದAತೆ ಗಮನಹರಿಸಬೇಕು. ಪ್ರವಾಸೋದ್ಯಮ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಸೂಚಿಸಿದರು.
‘ಮಳೆಗಾಲದಲ್ಲಿ ಮುನ್ನೆಚ್ಚರ ವಹಿಸುವ ಸಂಬAಧ ಈ ಎರಡು ಗಾಜಿನ ಸೇತುವೆಗಳ ವೀಕ್ಷಣೆಗೆ ಈ ಹಿಂದೆ ನಿರ್ಬಂಧ ಹೇರಲಾಗಿತ್ತು. ಈ ಬಗ್ಗೆ ಮರುಪರಿಶೀಲಿಸಿ, ಪ್ರವಾಸಿಗರು ಮತ್ತು ಎಲ್ಲರ ಹಿತಾಸಕ್ತಿ ಕಾಪಾಡುವಲ್ಲಿ ಜಿಲ್ಲಾಡಳಿತ ಅಗತ್ಯ ಕ್ರಮವಹಿಸಲಿದೆ ಎಂದು ಜಿಲ್ಲಾಧಿಕಾರಿ ಹೇಳಿದರು.’
ಅಬ್ಬಿಫಾಲ್ಸ್ ಮತ್ತು ಮಾಂದಲ್ ಪಟ್ಟಿಗೆ ತೆರಳುವ ಜಂಕ್ಷನ್ ಸ್ಥಳಕ್ಕೆ ಭೇಟಿ ನೀಡಿದ ಸಂದರ್ಭ ಅಲ್ಲಿನ ಮಾಂದಲ್ ಪಟ್ಟಿಗೆ ತೆರಳುವ ಜೀಪುಗಳ ಮಾಹಿತಿ ಪಡೆದ ಜಿಲ್ಲಾಧಿಕಾರಿ ಅವರು ಪ್ರವಾಸಿಗರಿಂದ ಬಾಡಿಗೆ ದರ ಎಷ್ಟು ಪಡೆಯಲಾಗುತ್ತಿದೆ. ವಾಹನ ಮತ್ತು ಚಾಲಕರಿಗೆ ಪರವಾನಗಿ ಇದೆಯೇ ಎಂಬಿತ್ಯಾದಿ ಬಗ್ಗೆ ಚಾಲಕರಿಂದ ಮಾಹಿತಿ ಪಡೆದರು.
ಸುರಕ್ಷತೆಗೆ ಒತ್ತು ನೀಡಬೇಕು. ಪ್ರವಾಸಿಗರಿಗೆ ಕಿರಿಕಿರಿ ಉಂಟುಮಾಡಬಾರದು. ದೂರುಗಳು ಬರದಂತೆ ಎಚ್ಚರವಹಿಸಬೇಕು ಎಂದು ನಿರ್ದೇಶನ ನೀಡಿದರು.
ಬಳಿಕ ಕಡಗದಾಳು ಬಳಿ ಹೋಂಸ್ಟೇಯೊAದಕ್ಕೆ ಅನುಮತಿ ನೀಡುವ ಸಂಬAಧ ಭೇಟಿ ನೀಡಿ ಸ್ಥಳ ಪರಿಶೀಲಿಸಿದರು. ಕೃಷಿಯೇತರ ಚಟುವಟಿಕೆಗೆ ಭೂಮಿ ಪರಿವರ್ತನೆಯಾಗಿದೆಯೇ, ಗ್ರಾಮ
೪ಐದನೇ ಪುಟಕ್ಕೆ
(ಮೊದಲ ಪುಟದಿಂದ) ಪಂಚಾಯಿತಿಯಿAದ ಹೋಂಸ್ಟೇ ನಿರ್ಮಾಣಕ್ಕೆ ಅನುಮತಿ ಪಡೆಯಲಾಗಿದೆಯೇ, ಪೊಲೀಸ್ ಇಲಾಖೆಯಿಂದ ಎನ್‌ಒಸಿ, ವಿದ್ಯುತ್ ಪೂರೈಕೆ, ಸುರಕ್ಷತೆ ಸಂಬAಧ ಸಿಸಿಟಿವಿ, ನೋಂದಣಿ ಪುಸ್ತಕ, ದೂರು ನಿರ್ವಹಣಾ ಪುಸ್ತಕ, ವಿದೇಶಿ ಪ್ರವಾಸಿಗರು ಆಗಮಿಸಿದಲ್ಲಿ ಅವರ ಪಾಸ್‌ಪೋರ್ಟ್, ವಿಮಾನ ಟಿಕೆಟ್, ಗುರುತಿನ ಚೀಟಿ, ಹಾಗೆಯೇ ವಿದೇಶಿ ಪ್ರವಾಸಿಗರ ಬಗ್ಗೆ ಸ್ಥಳೀಯ ಪೊಲೀಸ್ ಠಾಣೆಗೆ ಕಡ್ಡಾಯವಾಗಿ ಮಾಹಿತಿ ನೀಡುವುದು ಇತ್ಯಾದಿ ಬಗ್ಗೆ ಮಾಹಿತಿ ಪಡೆದರು. ಕಸ ವಿಲೇವಾರಿ ಸಂಬAಧ ಹಸಿ ಕಸ ಮತ್ತು ಒಣ ಕಸವನ್ನು ಬೇರ್ಪಡಿಸಿ ವಿಲೇವಾರಿ ಮಾಡಬೇಕು. ಶುದ್ಧ ಕುಡಿಯುವ ನೀರು ಒದಗಿಸಬೇಕು ಎಂದರು.
ಹೋಂಸ್ಟೇ, ರೆಸಾರ್ಟ್ನಲ್ಲಿ ಕರ್ತವ್ಯ ನಿರ್ವಹಿಸುವ ಸಿಬ್ಬಂದಿಗಳ ಬಗ್ಗೆಯೂ ಸಹ ಸಂಪೂರ್ಣ ಮಾಹಿತಿ ಇರಬೇಕು ಎಂದು ಜಿಲ್ಲಾಧಿಕಾರಿ ನಿರ್ದೇಶನ ನೀಡಿದರು. ಪ್ರವಾಸೋದ್ಯಮ ಇಲಾಖೆ ಉಪ ನಿರ್ದೇಶಕ ಶಶಿಧರ, ಸಮಾಲೋಚಕ ಜತಿನ್, ಗಾಜಿನ ಸೇತುವೆಯ ಮಾಲೀಕರು, ಹೋಂಸ್ಟೇ/ ರೆಸಾರ್ಟ್ ಮಾಲೀಕರು, ಕಂದಾಯ ಇಲಾಖೆ ಅಧಿಕಾರಿಗಳು ಇತರರು ಇದ್ದರು.