ಮಡಿಕೇರಿ, ಜೂ. ೧೮: ಶಿಶು ಅಭಿವೃದ್ಧಿ ಯೋಜನೆ ಮಡಿಕೇರಿ ತಾಲೂಕು ವ್ಯಾಪ್ತಿಗೆ ಒಳಪಟ್ಟಂತೆ ಅಂಗನವಾಡಿ ಕಾರ್ಯಕರ್ತೆ ಹುದ್ದೆ ಹಾಗೂ ಸಹಾಯಕಿ ಹುದ್ದೆಗಳಿಗೆ ಉಪ ನಿರ್ದೇಶಕರು, ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ತಾತ್ಕಾಲಿಕ ಆಯ್ಕೆಪಟ್ಟಿ ಪ್ರಕಟಿಸಲಾಗಿದೆ.
ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಶಿಶು ಅಭಿವೃದ್ಧಿ ಯೋಜನೆ, ಮಡಿಕೇರಿ ಚೈನ್‌ಗೇಟ್ ಹತ್ತಿರದಲ್ಲಿರುವ ಕಚೇರಿ ಪ್ರಕಟಣಾ ಫಲಕದಲ್ಲಿ ಪ್ರಕಟಿಸಲಾಗಿದೆ. ಈ ಬಗ್ಗೆ ಸಂಬAಧಿಸಿದವರಿಗೆ ಆಕ್ಷೇಪಣೆಗಳು ಏನಾದರೂ ಇದ್ದಲ್ಲಿ ಪೂರಕ ದಾಖಲಾತಿಯೊಂದಿಗೆ ತಾ.೨೨ ರೊಳಗೆ ಕಚೇರಿ ವೇಳೆ ಸಂಜೆ ೫.೩೦ರ ಒಳಗೆ ಈ ಕಚೇರಿಗೆ ಸಲ್ಲಿಸಬೇಕು.
ಹೆಚ್ಚಿನ ವಿವರಗಳಿಗೆ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ, ಮಡಿಕೇರಿಯಲ್ಲಿ ದೂ.ಸಂ.೦೮೨೭೨-೨೯೫೦೮೭ ಅನ್ನು ಸಂಪರ್ಕಿಸಬಹುದು ಎಂದು ಮಡಿಕೇರಿ ತಾಲೂಕು ಶಿಶು ಅಭಿವೃದ್ಧಿ ಯೋಜನಾಧಿಕಾರಿ ತಿಳಿಸಿದ್ದಾರೆ.
ಶಿಶು ಅಭಿವೃದ್ಧಿ ಯೋಜನೆಯ ಸೋಮವಾರಪೇಟೆ ಮತ್ತು ಕುಶಾಲನಗರ ತಾಲೂಕಿನಲ್ಲಿ ಖಾಲಿ ಇದ್ದ ಅಂಗನವಾಡಿ ಕಾರ್ಯಕರ್ತೆಯರ ೧೫ ಹುದ್ದೆಗೆ ಹಾಗೂ ೬೩ ಸಹಾಯಕಿಯರ ಹುದ್ದೆಗಳಿಗೆ ತಾತ್ಕಾಲಿಕವಾಗಿ ಆಯ್ಕೆಯಾದ ಅಭ್ಯರ್ಥಿಗಳ ಪಟ್ಟಿಯನ್ನು ಶಿಶು ಅಭಿವೃದ್ಧಿ ಯೋಜನಾ ಕಚೇರಿ ಸೋಮವಾರಪೇಟೆ ಮತ್ತು ಸಂಬAಧಿಸಿದ ಅಂಗನವಾಡಿ ಕೇಂದ್ರ ಹಾಗೂ ಗ್ರಾಮ ಪಂಚಾಯಿತಿಗಳಲ್ಲಿ ಪ್ರಕಟಿಸಲಾಗಿದೆ.
ಈ ಪಟ್ಟಿಗೆ ಯಾವುದಾದರು ಆಕ್ಷೇಪಣೆ ಇದ್ದಲ್ಲಿ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ, ಸೋಮವಾರಪೇಟೆ ಇಲ್ಲಿಗೆ ತಾ. ೨೨ ರ ಸಂಜೆ ೫.೩೦ ಗಂಟೆಯೊಳಗೆ ಅಭ್ಯರ್ಥಿಗಳು ಪೂರಕ ಮೂಲ ದಾಖಲಾತಿಗಳನ್ನು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಗೆ ಸಲ್ಲಿಸಬಹುದು ಎಂದು ಸೋಮವಾರಪೇಟೆ ಶಿಶು ಅಭಿವೃದ್ಧಿ ಯೋಜನಾಧಿಕಾರಿ ತಿಳಿಸಿದ್ದಾರೆ.