ಮಡಿಕೇರಿ, ಜೂ. ೧೯: ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆಯ ವತಿಯಿಂದ "ಕೊಡವರಿಗೆ ವಿಶೇಷ ಸ್ಥಾನಮಾನ, ಸಾಂವಿಧಾನಿಕ ಮಾರ್ಗಗಳು ಮತ್ತು ಅಂತರರಾಷ್ಟಿçÃಯ ಕಾನೂನು" ವಿಷಯದ ಕುರಿತು ತಾ. ೨೬ ರಂದು ವಿಚಾರಗೋಷ್ಠಿ ನಡೆಯಲಿದೆ ಎಂದು ಸಿಎನ್‌ಸಿ ಅಧ್ಯಕ್ಷ ಎನ್.ಯು. ನಾಚಪ್ಪ ತಿಳಿಸಿದ್ದಾರೆ.

ಮಡಿಕೇರಿ ಹೊರ ವಲಯದ ಕ್ಯಾಪಿಟಲ್ ವಿಲೇಜ್‌ನಲ್ಲಿ ಬೆಳಿಗ್ಗೆ ೧೦.೩೦ ಗಂಟೆಗೆ ವಿಚಾರಗೋಷ್ಠಿ ನಡೆಯಲಿದ್ದು, ಸುಪ್ರೀಂಕೋರ್ಟ್ನ ಹಿರಿಯ ವಕೀಲ ವಿಕ್ರಮ್ ಹೆಗಡೆ ಅವರು "ಕೊಡವ ಧಾರ್ಮಿಕ ಆಚರಣೆ, ‘ಕೋವಿ-ತೋಕ್" ವಿಧಿ ೨೫ ಮತ್ತು ೨೬ರ ಅಡಿಯಲ್ಲಿ ಅತ್ಯಗತ್ಯ ಧಾರ್ಮಿಕ ಆಚರಣೆ" ಕುರಿತು ವಿಷಯ ಮಂಡಿಸಲಿದ್ದಾರೆ.

ಸುಪ್ರೀAಕೋರ್ಟ್ ಹಾಗೂ ನ್ಯೂಯಾರ್ಕ್ನ ವಕೀಲರಾದ ಹಿಮಾ ಲಾರೆನ್ಸ್ ವಿಕ್ರಮ್ ಹೆಗಡೆ ಅವರು “ಅಂತರರಾಷ್ಟಿçÃಯ ವಿಶ್ವಸಂಸ್ಥೆಯ ಕಾನೂನಿನಡಿ ಕೊಡವಲ್ಯಾಂಡ್ ಭೂ-ರಾಜಕೀಯ ಸ್ವಾಯತ್ತತೆ, ಸ್ವಯಂ-ಆಡಳಿತ ಮತ್ತು ಅದಿಮ ಸಂಜಾತ ಕೊಡವ ಜನಾಂಗೀಯ ಗುರುತು” ವಿಷಯದ ಕುರಿತು ಮಾತನಾಡಲಿದ್ದಾರೆ.

ಈ ವಿಚಾರಗೋಷ್ಠಿಯು ಕೊಡವರ ವಿಶೇಷ ಸ್ಥಾನಮಾನಕ್ಕಾಗಿ ನಮ್ಮ ದೀರ್ಘಕಾಲದ ಆಕಾಂಕ್ಷೆಗಳ ಮೇಲೆ ಕೇಂದ್ರೀಕರಿಸುತ್ತದೆ ಮತ್ತು ಪ್ರಸ್ತುತ ಸಂದರ್ಭದಲ್ಲಿ ಸಾಂವಿಧಾನಿಕ ಗಂಭೀರತೆಯನ್ನು ಪ್ರತಿಬಿಂಬಿಸುತ್ತದೆ ಎಂದು ಎನ್.ಯು. ನಾಚಪ್ಪ ತಿಳಿಸಿದ್ದಾರೆ.