ಮಡಿಕೇರಿ, ಜೂ. ೨೦: ಕೆ. ನಿಡುಗಣೆ ಗ್ರಾಮ ಪಂಚಾಯಿತಿಯ ಭಗವತಿ ನಗರ ಹಾಗೂ ಭಾಗಮಂಡಲ ಗ್ರಾಮ ಪಂಚಾಯಿತಿಗೆ ಸಂಬAಧಿಸಿದ ತಾವೂರು ಗ್ರಾಮದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಅರಿವು ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಪ್ರಭಾರ ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಮೇಪಾಡಂಡ ಸವಿತಾ ಕೀರ್ತನ್ ಅವರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಜಿಲ್ಲಾದ್ಯಂತ ಗ್ರಾಮ ಪಂಚಾಯಿತಿವಾರು ‘ಬೇಟಿ ಬಚಾವೋ ಬೇಟಿ ಪಡಾವೋ’ ಕಾರ್ಯಕ್ರಮ, ಇಲಾಖೆಯ ಯೋಜನೆಗಳ ಅರಿವು ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುತ್ತಿದ್ದು ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು ಪಾಲ್ಗೊಂಡು ಮಾಹಿತಿ ಪಡೆದುಕೊಳ್ಳಲು ಕರೆ ನೀಡಿದರು. ಇಲಾಖೆಯ ಇತರ ಯೋಜನೆಗಳಾದ, ಅಕ್ಕಪಡೆ, ಭಾಗ್ಯಲಕ್ಷಿö್ಮ, ಮಾತೃ ವಂದನ, ಗೃಹಲಕ್ಷಿö್ಮ ಯೋಜನೆಗಳ ಬಗ್ಗೆ ಮಾಹಿತಿ ನೀಡಿದರು. ನಂತರ ೩೬ ವರ್ಷ ಸೇವೆ ಸಲ್ಲಿಸಿ ನಿವೃತ್ತಗೊಂಡಿರುವ ತಾವೂರು ಅಂಗನವಾಡಿ ಕಾರ್ಯಕರ್ತೆ ಹೇಮಾವತಿ ಹೆಚ್ ಆರ್, ೨೨ ವರ್ಷ ಸೇವೆ ಸಲ್ಲಿಸಿ ನಿವೃತ್ತಗೊಂಡ ತಣ್ಣಿಮಾನಿ ಕೇಂದ್ರದ ಸಹಾಯಕಿ ಮೋಹಿನಿ ಎಂ.ಸಿ, ೨೮ ವರ್ಷಗಳ ಕಾಲ ಸೇವೆ ಸಲ್ಲಿಸಿ ನಿವೃತ್ತಗೊಂಡಿರುವ ಮಡೆಕಾನ ಕೇಂದ್ರದ ಸಹಾಯಕಿ ದಮಯಂತಿ ಕೆ.ಆರ್ ಅವರಿಗೆ ಬೀಳ್ಕೊಡುಗೆ ಸಮಾರಂಭವನ್ನು ನಡೆಸಲಾಯಿತು. ನಂತರ ಮಹಿಳಾ ಸಬಲೀಕರಣ ಘಟಕದ ಜಿಲ್ಲಾ ಸಂಯೋಜಕರಾದ ಮಮತಾ ಮಾತನಾಡಿ, ಸಖಿ ಒನ್ ಸ್ಟಾಪ್ ಸೆಂಟರ್ ಬಗ್ಗೆ ಮಾಹಿತಿ ನೀಡಿದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮತ್ತು ವಿವಿಧ ಇಲಾಖೆಗಳಲ್ಲಿ ಮಹಿಳೆಯರಿಗಾಗಿ ಸಿಗುವ ಸೌಲಭ್ಯಗಳ ಬಗ್ಗೆ ಮಾಹಿತಿಯನ್ನು ಅರಿಯಲು ಎಲ್ಲಾ ಮಹಿಳೆಯರು ಇಲಾಖೆಯ ೦೮೨೭೨೨೨೮೦೧೦ ದೂರವಾಣಿ ಸಂಖ್ಯೆ ಅಥವಾ ಜಿಲ್ಲಾ ಮಹಿಳಾ ಸಬಲೀಕರಣ ಘಟಕ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕರ ಕಚೇರಿ-ಮಡಿಕೇರಿ ಇಲ್ಲಿ ಸಂಪರ್ಕಿಸಲು ತಿಳಿಸಿದರು.
ಕಾರ್ಯಕ್ರಮದಲ್ಲಿ ಸ್ವಾಗತವನ್ನು ಅಂಗನವಾಡಿ ಕಾರ್ಯಕರ್ತೆ ಸುಶಿ, ನಿರೂಪಣೆಯನ್ನು ಕೋಡಿಮೊಟ್ಟೆ ಅಂಗನವಾಡಿ ಕಾರ್ಯಕರ್ತೆ ಮಾಲತಿ, ವಂದನಾರ್ಪಣೆ ತಾವೂರು ಅಂಗನವಾಡಿ ಕಾರ್ಯಕರ್ತೆ ಗೀತಾ ಅವರು ನಡೆಸಿದರು.