*ಗೋಣಿಕೊಪ್ಪ, ಜೂ. ೨೦: ತಿತಿಮತಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು ಪರಿಸರ ದಿನಾಚರಣೆಯ ಕುರಿತು ಎಲೆಗಳನ್ನು ಗುರುತಿಸುವುದು, ಪ್ರಬಂಧ, ಚಿತ್ರಕಲೆ ಸ್ಪರ್ಧೆಗಳಲ್ಲಿ ಭಾಗವಹಿಸಿ ಬಹುಮಾನ ಪಡೆದುಕೊಂಡರು.

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ಆಯೋಜಿಸಿದ್ದ ಕಾರ್ಯಕ್ರಮಕ್ಕೆ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆ ಜಿಲ್ಲಾ ನಿರ್ದೇಶಕ ವಿಠಲ್ ಶಿವಪ್ಪ ಸಾಲಿಯಾನ್ ಗಿಡಕ್ಕೆ ನೀರು ಹಾಕಿ ಚಾಲನೆ ನೀಡಿದರು.

ಶಾಲೆಯ ಮುಖ್ಯ ಶಿಕ್ಷಕಿ ಪಾರ್ವತಿ, ಒಕ್ಕೂಟದ ಅಧ್ಯಕ್ಷ ಶೇಖರ್, ತಿತಿಮತಿ ಗ್ರಾಮ ಪಂಚಾಯಿತಿ ಸದಸ್ಯ ಅನೂಪ್ ಕುಮಾರ್, ಸೇವಾ ಪ್ರತಿನಿಧಿ ಸರೋಜಾ, ವಲಯ ಮೇಲ್ವಿಚಾರಕಿ ಗೀತಾ, ಕೃಷಿ ಮೇಲ್ವಿಚಾರಕ ವಸಂತ್, ಶಾಲೆಯ ಶಿಕ್ಷಕರು ವಿದ್ಯಾರ್ಥಿಗಳು ಇದ್ದರು.