ಮಡಿಕೇರಿ, ಜೂ. ೨೧: ಕೊಡಗು ಜಿಲ್ಲೆಯಾದ್ಯಂತ ೧೨ನೇ ಅಂತರರಾಷ್ಟಿçÃಯ ಯೋಗ ದಿನಾಚರಣೆ ಅಂಗವಾಗಿ ಶ್ರದ್ಧೆಯಿಂದ ಯೋಗಾಭ್ಯಾಸ ಮಾಡಲಾಯಿತು.

ಜಿಲ್ಲಾ ಕೇಂದ್ರ ಮಡಿಕೇರಿಯ ಕಾವೇರಿ ಹಾಲ್‌ನಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಆಯುಷ್ ಇಲಾಖೆ, ಕೊಡಗು ಇವುಗಳ ಸಂಯುಕ್ತಾಶ್ರಯದಲ್ಲಿ "ಆರೋಗ್ಯಕರ ವಯೋವೃದ್ಧಿಗಾಗಿ ಯೋಗ" ಎಂಬ ಘೋಷವಾಕ್ಯದಡಿ ಯೋಗ ದಿನಾಚರಣೆಯನ್ನು ಆಚರಿಸಲಾಯಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ನಗರಸಭಾ ಅಧ್ಯಕ್ಷೆ ಕಲಾವತಿ ಹಾಗೂ ಉಪ ವಿಭಾಗಾಧಿಕಾರಿ ನಿತಿನ್ ಚಕ್ಕಿ ನೆರವೇರಿಸಿದರು. ಮುಖ್ಯ ಅತಿಥಿಗಳಾಗಿ ಟಿ.ಹೆಚ್.ಓ. ಡಾ. ಸನತ್ ಕುಮಾರ್, ಯೋಗ ಭಾರತಿಯ ಯೋಗ ಗುರು ಕೆ.ಕೆ. ಮಹೇಶ್ ಕುಮಾರ್, ಮಾರ್ನಿಂಗ್ ಸ್ಟಾರ್ಸ್ನ ವಕೀಲರಾದ ಕವನ್, ನೀಮಾ ಅಧ್ಯಕ್ಷÀ ಡಾ. ರಾಜಾರಾಮ್, ಜಿಲ್ಲಾ ಆಯುಷ್ ಅಧಿಕಾರಿ ಡಾ.ಶೈಲಜಾ, ಸಹಾಯಕ ಆಡಳಿತಾಧಿಕಾರಿ ಕೆ.ಟಿ.ಕಾವೇರಪ್ಪ, ಟಿಪಿಒ ಬಾಲಚಂದ್ರ, ಪತಂಜಲಿ ಯೋಗ ಶಿಕ್ಷಣ ಸಮಿತಿಯ ಲಿಂಗಪ್ಪ, ಸ್ಕೌಟ್ ಗೈಡ್ಸ್ನ ದಮಯಂತಿ ಮತ್ತಿತರರು ಪಾಲ್ಗೊಂಡಿದ್ದರು. ಆಯುಷ್ ಇಲಾಖೆಯ ಯೋಗ ತರಬೇತುದಾರರಾದ ಕೌಶಿಕ್ ಮಾರ್ಗದರ್ಶದಲ್ಲಿ ಯೋಗಾಭ್ಯಾಸ ನಡೆಯಿತು. ನಿತಿನ್ ಚಕ್ಕಿ, ಕಲಾವತಿ ಅವರುಗಳು ಕೂಡ ಯೋಗಾಭ್ಯಾಸ ಮಾಡಿದರು. ಹೆಚ್ಚುವರಿ ಜಿಲ್ಲಾಧಿಕಾರಿ ಸಹನಾ ಎಸ್.ಹಾದಿಮನಿ ಅವರು ಕಾರ್ಯಕ್ರಮಕ್ಕೆ ಆಗಮಿಸಿದ್ದರು.

ಯೋಗ ಭಾರತಿ, ಪತಂಜಲಿ ಯೋಗ ಶಿಕ್ಷಣ ಸಮಿತಿ, ಮಾರ್ನಿಂಗ್ ಸ್ಟಾರ್ಸ್ ,ಕೊಡಗು ವೈದ್ಯಕೀಯ ವಿಜ್ಞಾನಗಳ ಮಹಾವಿದ್ಯಾಲಯ, ಸ್ಕೌಟ್ಸ್ ಅಂಡ್ ಗೈಡ್ಸ್, ಎನ್.ಡಿ.ಆರ್.ಎಫ್, ಎನ್.ಸಿ.ಸಿ, ಎನ್.ಎಸ್.ಎಸ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಸಾಯಿ ಹಾಸ್ಟೆಲ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿ ಸಿಬ್ಬಂದಿ,ವಿವಿಧ ಶಾಲಾ ಕಾಲೇಜುಗಳ ವಿದ್ಯಾರ್ಥಿಗಳು ಯೋಗಾಭ್ಯಾಸದಲ್ಲಿ ಪಾಲ್ಗೊಂಡಿದ್ದರು.

ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಡಾ. ಸನತ್ ಕುಮಾರ್ ಮಕ್ಕಳಿಂದ ಹಿಡಿದು ವೃದ್ಧರವರೆಗೂ ಎಲ್ಲರೂ ಯೋಗಾಭ್ಯಾಸ ಮಾಡಬೇಕು. ಯೋಗಾಭ್ಯಾಸ ಮಾಡುವುದರಿಂದ ದೈಹಿಕ ಸದೃಢತೆ ಕಾಪಾಡಿಕೊಳ್ಳಬಹುದೆಂದ ಅವರು ಉತ್ತಮ ಆಹಾರ ಪದ್ಧತಿಯನ್ನು ಅನುಸರಿಸುವುದರಿಂದ ಆರೋಗ್ಯವನ್ನು ಕಾಪಾಡಿಕೊಳ್ಳಲು ಸಾಧ್ಯವಾಗುತ್ತದೆ ಎಂದರು.

ನಗರಸಭಾ ಅಧ್ಯಕ್ಷೆ ಕಲಾವತಿ ಮಾತನಾಡಿ, ಜಿಮ್‌ಗಿಂತಲೂ ಯೋಗಾಭ್ಯಾಸ ಮಾಡುವುದು ಆರೋಗ್ಯಕ್ಕೆ ಒಳ್ಳೆಯದು ಎಂದರಲ್ಲದೆ ಬೆಳಗ್ಗಿನ ನಡಿಗೆ ಆರೋಗ್ಯ ರಕ್ಷಣೆಗೆ ಸಹಕಾರಿ ಎಂದು ನುಡಿದರು.

ಆಯುಷ್ ಅಧಿಕಾರಿ ಡಾ. ಶೈಲಜಾ ಪ್ರಾಸ್ತಾವಿಕವಾಗಿ ಮಾತನಾಡಿ, ಯೋಗ ದಿನಾಚರಣೆ ಪ್ರಯುಕ್ತ ಯೋಗ ಜಾಥಾ,ಯೋಗದ ಬಗ್ಗೆ ಉಪನ್ಯಾಸ ಸೇರಿದಂತೆ ಹಲವಾರು ಕಾರ್ಯಕ್ರಮಗಳನ್ನು ನಡೆಸಲಾಗಿದೆ ಎಂದು ತಿಳಿಸಿದರು. ಎನ್.ಡಿ.ಆರ್.ಎಫ್. ತಂಡದ ರಾಮ್ ಹಾಗೂ ಉದ್ಘಾಟನಾ ಸಮಾರಂಭದ ಅತಿಥಿಗಳು ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಕೊಡಗು ವೈದ್ಯಕೀಯ ಮಹಾವಿದ್ಯಾಲಯ, ಜಿಲ್ಲಾ ಪೊಲೀಸ್ ಇಲಾಖೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಪದವಿಪೂರ್ವ ಶಿಕ್ಷಣ ಇಲಾಖೆ, ಎನ್.ಎಸ್.ಎಸ್. ಘಟಕ, ಎನ್.ಸಿ.ಸಿ. ಘಟಕ, ನೆಹರು ಯುವ ಕೇಂದ್ರ (ಎನ್.ವೈ.ಕೆ.ಎಸ್.), ಇಂಡಿಯನ್ ರೆಡ್‌ಕ್ರಾಸ್ ಸೊಸೈಟಿ, ಯೋಗ ಭಾರತಿ, ಭಾರತೀಯ ವಿದ್ಯಾ ಭವನ, ಮಾರ್ನಿಂಗ್ ಸ್ಟಾರ್ಸ್, ಪತಂಜಲಿ ಯೋಗ ಶಿಕ್ಷಣ ಸಮಿತಿ, ನೀಮಾ, ಸ್ಕೌಟ್ಸ್ & ಗೈಡ್ಸ್ ಇವುಗಳ ಸಹಕಾರದೊಂದಿಗೆ ಕಾರ್ಯಕ್ರಮ ಆಯೋಜನೆಗೊಂಡಿತ್ತು.

ಆಯುಷ್ ಇಲಾಖೆಯ ಡಾ.ಅರುಣ್ ನಿರೂಪಿಸಿ, ಡಾ. ಶುಭಾ ಪ್ರಾರ್ಥಿಸಿದರು. ಡಾ. ಪಲ್ಲವಿ ಸ್ವಾಗತಿಸಿ, ಡಾ. ಸರಸ್ವತಿ ವಂದಿಸಿದರು. ರಾಷ್ಟçಗೀತೆಯೊಂದಿಗೆ ಕಾರ್ಯಕ್ರಮ ಮುಕ್ತಾಯವಾಯಿತು.