ಮಡಿಕೇರಿ, ಜೂ. ೨೧: ಮಕ್ಕಂದೂರು ಸರ್ಕಾರಿ ಪ್ರೌಢಶಾಲಾ ಮಕ್ಕಳಿಗೆ ಮಲೇರಿಯಾ ವಿರೋಧ ಮಾಸಾಚಾರಣೆ ಹಾಗೂ ಮಳೆಗಾಲದಲ್ಲಿ ಹರಡುವ ಸಾಂಕ್ರಾಮಿಕ ರೋಗಗಳ ಮುಂಜಾಗ್ರತಾ ಕ್ರಮಗಳ ಕುರಿತು ಶನಿವಾರ ಆರೋಗ್ಯ ಅರಿವು ಮೂಡಿಸಲಾಯಿತು.
ತಾಲೂಕು ಆರೋಗ್ಯಾಧಿಕಾರಿಗಳ ಕಚೇರಿಯಿಂದ ತಾಲೂಕು ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಜಿ.ವಿ. ಶ್ರೀನಾಥ್ ಅವರು ಶಾಲೆಗೆ ಭೇಟಿ ನೀಡಿ ಮಕ್ಕಳಿಗೆ ಮಾಹಿತಿ ನೀಡುತ್ತಾ ಮಲೇರಿಯಾ, ಡೆಂಗ್ಯೂ ಜ್ವರ ಸೇರಿದಂತೆ ಸಾಂಕ್ರಾಮಿಕ ರೋಗಗಳ ಮುನ್ನೆಚ್ಚರಿಕೆ ಕುರಿತು ತಿಳಿಸಿ ರೋಗ ಲಕ್ಷಣಗಳು ಮತ್ತು ಮಹತ್ವದ ಬಗ್ಗೆ ಸಂಪೂರ್ಣವಾದ ಮಾಹಿತಿ ನೀಡಲಾಯಿತು
ಹಾಗೆಯೇ ಶಾಲಾ ಅಡುಗೆ ಕೊಠಡಿ ಪರಿಸರ, ಪರಿಕರಗಳ ಸ್ವಚ್ಚತೆ, ಅಯೋಡಿನ್ ಯುಕ್ತ ಉಪ್ಪಿನ ಮಹತ್ವ ಬಗ್ಗೆ ಶಿಕ್ಷಣ ನೀಡಿದರು. ಮಕ್ಕಳಿಗೆ ಮನೆ ಮತ್ತು ಶಾಲೆ ಆವರಣದಲ್ಲಿ ತ್ಯಾಜ್ಯ ವಸ್ತುಗಳಲ್ಲಿ ನೀರು ನಿಲ್ಲದಂತೆ ಎಚ್ಚರವಹಿಸಿ ಮೂಲದಲ್ಲಿ ಲಾರ್ವಾ ನಿರ್ಮೂಲನೆ ಮಾಡುವ ಮೂಲಕ ಡೆಂಗ್ಯೂ ಜ್ವರ ನಿಯಂತ್ರಿಸಲು ಮುಂದಾಗುವAತೆ ಹಾಗೂ ಮನೆಯಲ್ಲಿ ಶೇಖರಿಸುವ ನೀರಿನ ತೊಟ್ಟಿ ಡ್ರಮ್ಗಳನ್ನು ವಾರಕ್ಕೆ ಎರಡು ಬಾರಿ ಸ್ವಚ್ಚಗೊಳಿಸಿ ಒಣಗಿಸಿ ನೀರು ತುಂಬಿಸುವುದು ಮತ್ತು ಮುಚ್ಚಳದಿಂದ ಮುಚ್ಚುವಂತೆ ತಿಳಿಸಿದರು. ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಟಿ.ಎನ್. ಪಾಲಾಕ್ಷ ಮಾತನಾಡಿ ೧೪ ವರ್ಷದಿಂದ ೧೫ ವರ್ಷ ಒಳಪಟ್ಟ ಹೆಣ್ಣುಮಕ್ಕಳಿಗೆ ಗರ್ಭಕಂಠದ ಕ್ಯಾನ್ಸರ್ ತಪ್ಪಿಸಲು ಎಚ್ಪಿವಿ ವ್ಯಾಕ್ಸಿನೇಷನ್ ನೀಡಿಸುವಂತೆ ಪೋಷಕರಿಗೆ ಮನವೊಲಿಸಲು ತಿಳಿಸಿದರು.
೧೦೦ ಡೇಸ್ ಟಿಬಿ ಕ್ಯಾಂಪೇನ್ನ ಬಗ್ಗೆ ಮತ್ತು ನಶಾಮುಕ್ತ ಭಾರತ ಅಭಿಯಾನದ ಮಹತ್ವದ ಹಾಗೂ ಇದೇ ತಿಂಗಳ ೨೮ ರಂದು ನಡೆಯುವ ರಾಷ್ಟಿçÃಯ ಪಲ್ಸ್ ಪೋಲಿಯೋ ನಿರ್ಮೂಲನಾ ಕಾರ್ಯಕ್ರಮದಲ್ಲಿ ೦-೫ ವರ್ಷದ ಎಲ್ಲಾ ಮಕ್ಕಳಿಗೆ ತಪ್ಪದೇ ಲಸಿಕೆ ಹಾಕಿಸುವಂತೆ ಆರೋಗ್ಯ ಮಾಹಿತಿ ನೀಡಿದರು.ಶಾಲಾ ಮುಖ್ಯ ಶಿಕ್ಷಕರಾದ ಹರಿಣಾಕ್ಷಿ ಪಿ. ಅವರು ಮಾತನಾಡಿದರು. ಶಾಲಾ ಶಿಕ್ಷಕರಾದ ವನಜಾಕ್ಷಿ, ಪೂರ್ಣಿಮಾ ಮತ್ತು ರತಿ ಕುಮಾರಿ, ಸಹನ ಎಂ. ಅವರು ಹಾಜರಿದ್ದರು. ಸುಂಟಿಕೊಪ್ಪ, ಜೂ. ೨೧: ಚೆಟ್ಟಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಮಲೇರಿಯಾ ವಿರೋಧಿ ಮಾಸಾಚರಣೆ ಹಾಗೂ ಮಳೆಗಾಲದಲ್ಲಿ ಹರಡುವ ಸಾಂಕ್ರಾಮಿಕ ರೋಗ ಡೆಂಗ್ಯೂ ಜ್ವರದ ಬಗ್ಗೆ ಆರೋಗ್ಯ ಅರಿವು ಮಾಹಿತಿ ಕಾರ್ಯಕ್ರಮವನ್ನು ನಡೆಸಲಾಯಿತು.
ತಾಲೂಕು ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿಗಳಾದ ವಿಶ್ವಜ್ಞ ಅವರು ಮಾತನಾಡಿ, ಗ್ರಾಮದಲ್ಲಿ ಕಾರ್ಯನಿರ್ವಹಿಸುತ್ತಿರುವ ಆಶಾ ಕಾರ್ಯಕರ್ತೆಯರು ಹಾಗೂ ಸಾರ್ವಜನಿಕರಿಗೆ ಮಲೇರಿಯಾ ವಿರೋಧಿ ಮಾಸಾಚರಣೆಯ ಮಹತ್ವದ ಬಗ್ಗೆ, ರೋಗ ಲಕ್ಷಣಗಳ ಬಗ್ಗೆ, ಚಿಕಿತ್ಸಾ ವಿಧಾನಗಳ ಬಗ್ಗೆ ಸಂಪೂರ್ಣವಾದ ಮಾಹಿತಿಯನ್ನು ನೀಡಿದರು.
ಡೆಂಗ್ಯೂ ಜ್ವರದ ಬಗ್ಗೆ ಮಾಹಿತಿಯನ್ನು ನೀಡಲಾಯಿತು. ಡೆಂಗ್ಯೂ ಜ್ವರದ ಲಕ್ಷಣಗಳ ಬಗ್ಗೆ, ಮಹತ್ವದ ಬಗ್ಗೆ, ಚಿಕಿತ್ಸಾ ವಿಧಾನಗಳ ಬಗ್ಗೆ ಸಂಪೂರ್ಣವಾದ ಮಾಹಿತಿಯನ್ನು ನೀಡಲಾಯಿತು. ಎಚ್ಪಿವಿ ವ್ಯಾಕ್ಸಿನೇಷನ್ ಮಹತ್ವದ ಬಗ್ಗೆ ತಿಳಿಸಿ ವ್ಯಾಕ್ಸಿನೇಷನ್ ಮಾಡಿಸಿಕೊಳ್ಳುವಂತೆ ಕರೆ ನೀಡಿದರು.
ಆರೋಗ್ಯ ನಿರೀಕ್ಷಣಾಧಿಕಾರಿಗಳಾದ ಶಿವಪ್ಪ ಅವರು ಮಾತನಾಡಿ, ಮಳೆಗಾಲದಲ್ಲಿ ಹರಡುವ ಸಾಂಕ್ರಾಮಿಕ ರೋಗಗಳ ಬಗ್ಗೆ ‘೧೦೦ ಡೇಸ್ ಟಿ.ಬಿ’ ಕ್ಯಾಂಪೇನ್ನ ಬಗ್ಗೆ, ನಶಮುಕ್ತ ಭಾರತ ಅಭಿಯಾನದ ಮಹತ್ವದ ಬಗ್ಗೆ ಹಾಗೂ ರಾಷ್ಟಿçÃಯ ಪಲ್ಸ್ ಪೋಲಿಯೋ ನಿರ್ಮೂಲನಾ ಕಾರ್ಯಕ್ರಮದ ಬಗ್ಗೆ ಮಾಹಿತಿಯನ್ನು ನೀಡಲಾಯಿತು.
ಕಾರ್ಯಕ್ರಮದಲ್ಲಿ ಪ್ರಾಥಮಿಕ ಆರೋಗ್ಯ ಸುರಕ್ಷತಾಧಿಕಾರಿಗಳಾದ ಲಕ್ಷಿö್ಮ, ಸಮುದಾಯ ಆರೋಗ್ಯ ಅಧಿಕಾರಿಗಳಾದ ಹರ್ಷಿತಾ, ಭುವನ, ಆಶಾ ಕಾರ್ಯಕರ್ತೆಯರು ಮತ್ತು ಸಿಬ್ಬಂದಿ ವರ್ಗದವರು ಹಾಜರಿದ್ದರು.