ಸಿದ್ದಾಪುರ, ಜೂ. ೨೨: ಪಾಲಿಬೆಟ್ಟದ ಹೊಸಳ್ಳಿ ಕಾಫಿ ತೋಟದ ವಸತಿಗೃಹದಲ್ಲಿ ಕಳ್ಳತನ ಪ್ರಕರಣ ನಡೆದಿದೆ. ಟಾಟಾ ಸಂಸ್ಥೆಗೆ ಸೇರಿದ ಕಾಫಿ ತೋಟದಲ್ಲಿ ಸಹಾಯಕ ವ್ಯವಸ್ಥಾಪಕರಾಗಿ ಕೆಲಸ ಮಾಡುತ್ತಿರುವ ಭೋಜಣ್ಣ ಅವರು ಮನೆಗೆ ಬೀಗ ಹಾಕಿ ಮೈಸೂರಿಗೆ ಸಂಬAಧಿಕರ ಮನೆಗೆ ತೆರಳಿದ್ದ ಸಂದರ್ಭ ಘಟನೆ ಸಂಭವಿಸಿದೆ.
ಮೈಸೂರಿಗೆ ತೆರಳಿ ರಾತ್ರಿ ಮನೆಗೆ ಹಿಂತಿರುಗಿದಾಗ, ಕಳ್ಳರು ಮನೆಯ ಹಿಂಭಾಗದ ಬಾಗಿಲು ತೆರೆದು ಒಳನುಗ್ಗಿ, ಕೋಣೆಯಲ್ಲಿ ಇಟ್ಟಿದ್ದ ಚಿನ್ನದ ಓಲೆ ಹಾಗೂ ಬೆಳ್ಳಿಯ ಓಲೆ ಕಳ್ಳತನ ಮಾಡಿರುವುದು ಬೆಳಕಿಗೆ ಬಂದಿದೆ.
ಈ ಕುರಿತು ಭೋಜಣ್ಣ ಅವರು ಸಿದ್ದಾಪುರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಪೊಲೀಸರು ಸ್ಥಳ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.