ಕೂಡಿಗೆ, ಜೂ. ೨೨: ಕುಶಾಲನಗರದ ರಥಬೀದಿಯಲ್ಲಿರುವ ಶ್ರೀ ರಾಮಲಿಂಗ ಚೌಡೇಶ್ವರಿ ಅಮ್ಮನವರ ವಾರ್ಷಿಕೋತ್ಸವ ತಾ. ೨೭ ರಂದು ವಿವಿಧ ಧಾರ್ಮಿಕ ವಿಧಿವಿಧಾನಗಳೊಂದಿಗೆ ನಡೆಯಲಿದೆ.

ಬೆಳಿಗ್ಗೆ ೫ ಗಂಟೆಗೆ ಗಣಪತಿ ಹೋಮ, ೬ ಗಂಟೆಗೆ ಧ್ವಜಾರೋಹಣ ನೆರವೇರಲಿದೆ. ಬಳಿಕ ಕಾವೇರಿ ನದಿಯಲ್ಲಿ ಕಳಸ ಪೂಜೆ ನಡೆಸಿ, ಕಳಸವನ್ನು ಹೊತ್ತು ಜಾನಪದ ವೀರಗಾಸೆ ನೃತ್ಯ ಹಾಗೂ ಮಂಗಳವಾದ್ಯದೊAದಿಗೆ ನಗರದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಮೂಲಕ ದೇವಸ್ಥಾನಕ್ಕೆ ತರಲಾಗುವುದು. ದೇವಾಲಯದಲ್ಲಿ ದೇವಿಗೆ ವಿಶೇಷ ಪೂಜಾ ಕೈಂಕರ್ಯಗಳು, ಮಹಾಮಂಗಳಾರತಿ ಹಾಗೂ ಭಕ್ತರಿಗೆ ಪ್ರಸಾದ ವಿನಿಯೋಗ ನಡೆಯಲಿದೆ.

ಸಂಜೆ ೬ ಗಂಟೆಗೆ ವಿದ್ಯುತ್ ದೀಪಾಲಂಕಾರದಿAದ ಸಿಂಗರಿಸಲಾದ ಭವ್ಯ ಮಂಟಪದಲ್ಲಿ ದೇವಿಯ ಉತ್ಸವ ಮೂರ್ತಿಗೆ ವಿಶೇಷ ಪೂಜೆ ಸಲ್ಲಿಸಿದ ಬಳಿಕ, ವೀರಗಾಸೆ ನೃತ್ಯ, ಮದ್ದುಗುಂಡುಗಳ ಪ್ರದರ್ಶನ ಹಾಗೂ ದೇವಿಯ ಉತ್ಸವ ಮೂರ್ತಿಯ ಭವ್ಯ ಮೆರವಣಿಗೆ ನಗರದ ಪ್ರಮುಖ ಬೀದಿಗಳಲ್ಲಿ ಸಾಗಲಿದೆ ಎಂದು ಶ್ರೀ ಚೌಡೇಶ್ವರಿ ದೇವಾಲಯ ಸಮಿತಿ ಅಧ್ಯಕ್ಷ ರಾಜೇಶ್ ತಿಳಿಸಿದ್ದಾರೆ.