ಶನಿವಾರಸಂತೆ, ಜೂ.೨೩: ಪಟ್ಟಣದ ಪತಂಜಲಿ ಯೋಗ ಬಂಧುಗಳ ವತಿಯಿಂದ ವಿಶ್ವ ಯೋಗ ದಿನಾಚರಣೆಯನ್ನು ಸಹಕಾರ ಬ್ಯಾಂಕಿನ ಸಭಾಂಗಣದಲ್ಲಿ ಆಚರಿಸಲಾಯಿತು.

ಯೋಗ ಗುರು ಎ.ಡಿ ಮೋಹನ್ ಕುಮಾರ್ ಅವರು ಯೋಗ ಸಂಘದ ಸದಸ್ಯರಿಗೆ ವಿವಿಧ ಯೋಗಾಸನಗಳು, ಪ್ರಾಣಾಯಾಮ ಮತ್ತು ಧ್ಯಾನಭ್ಯಾಸಗಳನ್ನು ನಡೆಸಿ ಯೋಗ ಮಹತ್ವದ ಬಗ್ಗೆ ಜಾಗೃತಿ ಮೂಡಿಸಿದರು.

ಯೋಗ ದಿನದ ಅಂಗವಾಗಿ ವಿದ್ಯಾರ್ಥಿನಿಯರಾದ ಸಂಸ್ಕೃತಿ ಪ್ರತಾಪ್ ಹಾಗೂ ಸಮನ್ವಿತಾ ಹರೀಶ್ ಭರತನಾಟ್ಯ ಪ್ರದರ್ಶಿಸಿದರು.

ವೀರಾಜಪೇಟೆ, ಜೂ.೨೩: ಕೊಡಗು ಹಿಂದೂ ಮಲಯಾಳಿ ಮಹಿಳಾ ಅಸೋಸಿಯೇಷನ್ ವೀರಾಜಪೇಟೆ ತಾಲೂಕು ವತಿಯಿಂದ ಅಂತರರಾಷ್ಟಿçÃಯ ಯೋಗ ದಿನಾಚರಣೆ ಅಂಗವಾಗಿ ಪಟ್ಟಣದ ಪುರಭವನದಲ್ಲಿ ಯೋಗ ಪ್ರದರ್ಶನ ನಡೆಯಿತು.

ಕೊಡಗು ಹಿಂದೂ ಮಲಯಾಳಿ ಮಹಿಳಾ ಅಸೋಸಿಯೇಷನ್ ವೀರಾಜಪೇಟೆಯ ಅಧ್ಯಕ್ಷೆ ಶೀಭಾ ಪ್ರಥ್ವಿನಾಥ್ ಸೇರಿದಂತೆ ಅಸೋಸಿಯೇಷನ್ ಪದಾಧಿಕಾರಿಗಳು, ಯೋಗಪಟುಗಳು ಉಪಸ್ಥಿತರಿದ್ದರು.

ಚೆಯ್ಯಂಡಾಣೆ, ಜೂ.೨೩: ಸಮೀಪದ ಹೆಗ್ಗಳ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಗಿಡ ನೆಡುವ ಕಾರ್ಯಕ್ರಮ ಹಾಗೂ ಯೋಗ ದಿನದ ಆಚರಣೆಯ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಪದಾಧಿಕಾರಿಗಳು, ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಶಾಲಾ ಆವರಣದಲ್ಲಿ ಹಣ್ಣಿನ ಗಿಡಗಳನ್ನು ನೆಟ್ಟರು. ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಅರಣ್ಯ ಇಲಾಖೆಯ ಅಧಿಕಾರಿಗಳಾದ ಲೋಕೇಶ್ ಹಾಗೂ ನಂದೀಶ್ ಅವರು ಶಾಲಾ ಮಕ್ಕಳಿಗೆ ಪರಿಸರದ ಸಂರಕ್ಷಣೆಯ ಮಹತ್ವವನ್ನು, ಗಿಡ ನೆಡುವುದರ ಮಹತ್ವವನ್ನು ಹಾಗೂ ಅರಣ್ಯ ಸಂರಕ್ಷಣೆಯಲ್ಲಿ ವಿದ್ಯಾರ್ಥಿಗಳ ಪಾತ್ರದ ಕುರಿತು ಉದಾಹರಣೆಗಳ ಮೂಲಕ ವಿವರಿಸಿದರು.

ಶೌರ್ಯ ವಿಪತ್ತು ತಂಡದ ಸಂಯೋಜಕರಾದ ಜಯಪ್ರಕಾಶ್ ಅವರು ಶಾಲಾ ಮಕ್ಕಳಿಗೆ ಯೋಗಭ್ಯಾಸವನ್ನು ಮಾಡಿಸಿದರು. ಸೂರ್ಯ ನಮಸ್ಕಾರ, ಪ್ರಾಣಾಯಾಮ, ವಜ್ರಾಸನ, ಏಕ ಪಾದಾಸನ ಮುಂತಾದ ಆಸನಗಳನ್ನು ಮಾಡಿಸಿದರು. ಶಾಲಾ ಮಕ್ಕಳು ಉತ್ಸಾಹದಿಂದ ಯೋಗಾಭ್ಯಾಸವನ್ನು ಮಾಡಿದರು.

ಈ ಸಂದರ್ಭದಲ್ಲಿ ಶಾಲಾ ಮುಖ್ಯ ಶಿಕ್ಷಕಿ ಸುಜಾತಾ, ಎಸ್.ಡಿ.ಎಂ.ಸಿ ಅಧ್ಯಕ್ಷೆ ರೋಹಿಣಿ, ಹಿರಿಯ ಶಿಕ್ಷಕಿ ಹೇಮಲತ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮೇಲ್ವಿಚಾರಕರಾದ ಶಿವಕುಮಾರ್, ಕೃಷಿ ಅಧಿಕಾರಿ ವಸಂತ್, ಎಸ್.ಡಿ.ಎಂ.ಸಿಯ ಸದಸ್ಯರುಗಳು, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಪದಾಧಿಕಾರಿಗಳು, ಶಿಕ್ಷಕರು ಹಾಗೂ ಶಾಲಾ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.ಶನಿವಾರಸಂತೆ, ಜೂ. ೨೩: ಸಮೀಪದ ಕೊಡ್ಲಿಪೇಟೆ ವಿದ್ಯಾಸಂಸ್ಥೆಯ ಪ್ರೌಢಶಾಲಾ ವಿಭಾಗದಲ್ಲಿ ವಿಶ್ವ ಯೋಗ ದಿನಾಚರಣೆಯನ್ನು ಆಚರಿಸಲಾಯಿತು. ಸಂಸ್ಥೆಯ ನಿರ್ದೇಶಕ ಬಿ.ಕೆ ಯತೀಶ್ ಯೋಗ ಹಾಗೂ ಧ್ಯಾನದ ಬಗ್ಗೆ ಮಾಹಿತಿ ನೀಡಿ ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸಿದರು. ದೈಹಿಕ ಶಿಕ್ಷಣ ಶಿಕ್ಷಕ ಎ.ಪಿ ಸುನೀಲ್ ಹಾಗೂ ಶಿಕ್ಷಕ ಕೆ.ಎನ್ ಕಿರಣ್ ಕುಮಾರ್ ಮಾರ್ಗದರ್ಶನದಲ್ಲಿ ವಿದ್ಯಾರ್ಥಿಗಳು ವಿವಿಧ ರೀತಿಯ ಯೋಗಾಸನಗಳನ್ನು, ಪ್ರಾಣಾಯಾಮವನ್ನು ಮಾಡಿದರು. ಹಿರಿಯ ಶಿಕ್ಷಕ ಚಂದ್ರಶೇಖರ್ ಅಡ್ಮನಿ, ಸಹಶಿಕ್ಷಕರಾದ ಯು.ಡಿ ಮಂಜುನಾಥ್, ಎಂ.ಪಿ ಶಿವಕುಮಾರಿ, ಬಿ.ವಿ ಸುಮಾ, ಎನ್.ಎಸ್ ಪವನ್ ಕುಮಾರ್ ಹಾಜರಿದ್ದರು.

ಮಡಿಕೇರಿ, ಜೂ.೨೩: ಪೊನ್ನಂಪೇಟೆಯ ಸಂತ ಅಂತೋಣಿ ವಿದ್ಯಾಸಂಸ್ಥೆಯಲ್ಲಿ ಅಂತರರಾಷ್ಟಿçÃಯ ಯೋಗ ದಿನಾಚರಣೆ ಪ್ರಯುಕ್ತ ವಿದ್ಯಾರ್ಥಿಗಳಿಗೆ ೧೫ ಆಸನಗಳನ್ನು ಅಭ್ಯಾಸ ಮಾಡಿಸಲಾಯಿತು.

ವಿದ್ಯಾರ್ಥಿಗಳಿಗೆ ಯೋಗದ ಕುರಿತು ಪೋಸ್ಟರ್ ತಯಾರಿಕೆ ಮತ್ತು ಚಿತ್ರ ಬಿಡಿಸುವ ಚಟುವಟಿಕೆಯನ್ನು ನಡೆಸಲಾಯಿತು.

ಈ ಕಾರ್ಯಕ್ರಮದಲ್ಲಿ ಶಾಲಾ ಸಂಚಾಲಕರಾದ ರೆ.ಫಾ ಮ್ಯಾನುವಲ್ ಡಿಸೋಜ, ಪ್ರಾಂಶುಪಾಲರಾದ ಶಂಭು ಕಾರ್ಯಪ್ಪ, ಮುಖ್ಯ ಶಿಕ್ಷಕಿ ರಜನಿ, ಶಿಕ್ಷಕರು, ವಿದ್ಯಾರ್ಥಿಗಳು ಭಾಗವಹಿಸಿದ್ದರು. ಯೋಗಾಭ್ಯಾಸವು ರಶ್ಮಿ ಮತ್ತು ವಿನೋದ್ ಅವರ ಮಾರ್ಗದರ್ಶನದಲ್ಲಿ ನಡೆಯಿತು.