ವೀರಾಜಪೇಟೆ, ಜೂ. ೨೩: ವೀರಾಜಪೇಟೆ ಶಾಸಕ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ ಅವರನ್ನು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ನೂತನ ಪದಾಧಿಕಾರಿಗಳು ಸನ್ಮಾನಿಸಿದರು.
ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ, ವೀರಾಜಪೇಟೆ ತಾಲೂಕು ಘಟಕದ ೨೦೨೬-೨೦೩೧ ರ ಅವಧಿಗೆ ಆಯ್ಕೆಯಾಗಿರುವ ನೂತನ ಪದಾಧಿಕಾರಿಗಳು ವೀರಾಜಪೇಟೆಯ ಶಾಸಕರ ಗೃಹ ಕಚೇರಿಯಲ್ಲಿ ಶಾಸಕರನ್ನು ಭೇಟಿಯಾಗಿ ಗೌರವಿಸಿದರು.
ಇದೇ ಸಂದರ್ಭ ಶಾಸಕರು ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲೂಕು ಘಟಕದ ನೂತನ ಅಧ್ಯಕ್ಷರಾದ ಪ್ರವೀಣ್, ಉಪಾಧ್ಯಕ್ಷರುಗಳಾದ ಸೀತಾ ಹಾಗೂ ರಮಾನಂದ, ಕಾರ್ಯದರ್ಶಿ ವಿಜಯ್ ಕುಮಾರ್, ಖಜಾಂಚಿ ಗೀತಾಂಜಲಿ, ಸಂಘಟನಾ ಕಾರ್ಯದರ್ಶಿ ಎಸ್. ವೆಂಕಟೇಶ್ ಅವರುಗಳಿಗೆ ಪ್ರಮಾಣ ಪತ್ರಗಳನ್ನು ವಿತರಿಸಿ ಶುಭ ಹಾರೈಸಿದರು.