ವೀರಾಜಪೇಟೆ, ಜೂ. ೨೪: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ವೀರಾಜಪೇಟೆ ವತಿಯಿಂದ ಪೊನ್ನಪ್ಪಸಂತೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪರಿಸರ ಮಾಹಿತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮವನ್ನು ವಲಯ ಅರಣ್ಯಾಧಿಕಾರಿ ರಕ್ಷಿತ್ ಉದ್ಘಾಟಿಸಿ ಮಾತನಾಡಿದರು. ಇಂದಿನ ದಿನಗಳಲ್ಲಿ ಪರಿಸರ ಮಾಲಿನ್ಯ, ಅರಣ್ಯ ನಾಶ ಮತ್ತು ಹವಾಮಾನ ವೈಪರೀತ್ಯಗಳು ಹೆಚ್ಚುತ್ತಿವೆ. ಪರಿಸರ ರಕ್ಷಣೆ ಕೇವಲ ಸರಕಾರದ ಜವಾಬ್ದಾರಿಯಲ್ಲ, ಪ್ರತಿಯೊಬ್ಬ ನಾಗರಿಕನ ಕರ್ತವ್ಯವಾಗಿದೆ. ಮರಗಳು ಮನುಷ್ಯನ ಜೀವನದ ಅವಿಭಾಜ್ಯ ಅಂಗ ಎಂದರು.
ಸರಕಾರಿ ಪ್ರೌಢಶಾಲೆಯ ನಿವೃತ್ತ ಶಿಕ್ಷಕಿ ಸುಬ್ಬಮ್ಮ ಮಾತನಾಡಿ, ಪರಿಸರ ಸಂರಕ್ಷಣೆ ಪ್ರತಿಯೊಬ್ಬ ಮನುಷ್ಯನ ಕರ್ತವ್ಯ ಎಂದು ಮಕ್ಕಳಿಗೆ ತಿಳಿಸಿದರು. ಶಾಲಾ ಎಸ್ಡಿಎಂಸಿ ಅಧ್ಯಕ್ಷೆ ಸಲೀಮಾ ಅಧ್ಯಕ್ಷತೆ ವಹಿಸಿದ್ದರು.
ಶಾಲಾ ಮುಖ್ಯೋಪಾಧ್ಯಾಯಿನಿ ಸರಸ್ವತಿ ಮಾತನಾಡಿ, ಪರಿಸರ ಮಾಹಿತಿ ಕಾರ್ಯಕ್ರಮದ ಉದ್ದೇಶದ ಬಗ್ಗೆ ಸವಿಸ್ತಾರವಾಗಿ ಮಾಹಿತಿ ನೀಡಿದರು. ಇಂತಹ ಎಲ್ಲಾ ಒಳ್ಳೆಯ ಕಾರ್ಯಕ್ರಮಗಳಿಗೆ ತಮ್ಮ ಶಾಲೆ ಸದಾ ಅವಕಾಶ ನೀಡುತ್ತದೆ ಎಂದು ಹೇಳಿದರು. ಪರಿಸರ ದಿನಾಚರಣೆಯ ಪ್ರಯುಕ್ತ ಏರ್ಪಡಿಸಲಾಗಿದ್ದ ಪ್ರಬಂಧ, ಚಿತ್ರಕಲೆ ಮತ್ತು ಎಲೆ ಗುರುತಿಸುವಿಕೆ ಸ್ಪರ್ಧೆಯಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ಕೃಷಿ ಮೇಲ್ವಿಚಾರಕ ವಸಂತ್, ಒಕ್ಕೂಟದ ಅಧ್ಯಕ್ಷೆ ಸೀನಾ, ಶಾಲೆಯ ಶಿಕ್ಷಕ ವೃಂದ ಮತ್ತು ಮುದ್ದು ಮಕ್ಕಳು ಉಪಸ್ಥಿತರಿದ್ದರು.ವೀರಾಜಪೇಟೆ, ಜೂ.೨೪: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ವೀರಾಜಪೇಟೆ ವತಿಯಿಂದ ಪೊನ್ನಂಪೇಟೆ ವಲಯದ ಶ್ರೀಮಂಗಲ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪರಿಸರ ಮಾಹಿತಿ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮವನ್ನು ಕೃಷಿ ಪ್ರಶಸ್ತಿ ವಿಜೇತೆ ಸೌಮ್ಯ ಅವರು ಸಸಿಗೆ ನೀರುಣಿಸುವ ಮೂಲಕ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಪೂಜ್ಯರು ಮತ್ತು ಮಾತೃಶ್ರೀ ಅಮ್ಮನವರ ಮಾರ್ಗದರ್ಶನದಲ್ಲಿ ನಡೆಯುವ ಈ ಕಾರ್ಯಕ್ರಮಗಳು ಅತ್ಯುತ್ತಮವಾದವು. ಪರಿಸರ ಮಾಲಿನ್ಯ, ಅರಣ್ಯ ನಾಶ ಹೆಚ್ಚಾಗುತ್ತಿರುವ ಈ ದಿನಗಳಲ್ಲಿ ಪರಿಸರ ರಕ್ಷಣೆ ಕೇವಲ ಸರಕಾರದ ಜವಾಬ್ದಾರಿಯಲ್ಲ. ಪ್ರತಿಯೊಬ್ಬ ನಾಗರಿಕನ ಕರ್ತವ್ಯವಾಗಿದೆ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಒಕ್ಕೂಟದ ಅಧ್ಯಕ್ಷೆ ಮೀನಾಕ್ಷಿ ವಹಿಸಿದ್ದರು. ಶಾಲಾ ಮುಖ್ಯೋಪಾಧ್ಯಾಯಿನಿ ಗಂಗಮ್ಮ ಮಾತನಾಡಿ, ಇಂತಹ ಒಳ್ಳೆಯ ಕಾರ್ಯಕ್ರಮಗಳಿಗೆ ತಮ್ಮ ಶಾಲೆ ಸದಾ ಅವಕಾಶ ನೀಡುತ್ತದೆ ಎಂದರು.
ಕಾರ್ಯಕ್ರಮದಲ್ಲಿ ಎಲೆ ಗುರುತಿಸುವಿಕೆ, ಪ್ರಬಂಧ, ಚಿತ್ರಕಲೆ ಸ್ಪರ್ಧೆ ಏರ್ಪಡಿಸಲಾಗಿತ್ತು. ವಿಜೇತರಿಗೆ ಒಕ್ಕೂಟದ ಅಧ್ಯಕ್ಷೆ ಮೀನಾ ಬಿ.ಡಿ. ಬಹುಮಾನ ವಿತರಿಸಿದರು. ವಲಯ ಮೇಲ್ವಿಚಾರಕಿ ಪುಷ್ಪಲತಾ, ಕೃಷಿ ಮೇಲ್ವಿಚಾರಕ ವಸಂತ್ ಕಾರ್ಯಕ್ರಮ ನಿರ್ವಹಿಸಿದರು.
ಸೇವಾ ಪ್ರತಿನಿಧಿಗಳಾದ ಸರಳ, ಗೀತಾ, ಶೌರ್ಯ ತಂಡದ ಸದಸ್ಯರಾದ ರಾಜೇಶ್, ಬಬಿತಾ ಮತ್ತು ಶಾಲಾ ಶಿಕ್ಷಕ ವೃಂದ ಹಾಜರಿದ್ದರು.