ಮಡಿಕೇರಿ, ಜೂ. ೨೪: ಮುಂಗಾರು ಮಳೆ ಹಿನ್ನೆಲೆಯಲ್ಲಿ ಜಿಲ್ಲಾದ್ಯಂತ ಮರಳು ಮತ್ತು ಮರದ ದಿಮ್ಮಿಗಳ ಸಾಗಾಣಿಕೆ ಹಾಗೂ ಭಾರೀ ವಾಹನಗಳ ಸಂಚಾರವನ್ನು ನಿಷೇಧಿಸಿ ಹೊರಡಿಸಲಾಗಿದ್ದ ಆದೇಶದಲ್ಲಿ ಮಾರ್ಪಾಡು ಮಾಡಿ ಜಿಲ್ಲಾಧಿಕಾರಿ ಪ್ರಕಟಣೆ ಹೊರಡಿಸಿದ್ದಾರೆ. ಜಿಲ್ಲೆಯಲ್ಲಿ ಹವಾಮಾನ ಪರಿಸ್ಥಿತಿಯನ್ನು ಅವಲೋಕಿಸಿ ಎಲ್ಲಾ ವಿಧದ ಭಾರಿ ವಾಹನಗಳ ಸಂಚಾರಕ್ಕೆ ತಾ. ೨೫ರವರಗೆ ಅವಕಾಶ ನೀಡಲಾಗಿತ್ತು. ಇದೀಗ ಪ್ರಸ್ತುತ ಜಿಲ್ಲೆಯ ಹವಾಮಾನ ಪರಿಸ್ಥಿತಿಯನ್ನು ಅವಲೋಕಿಸಿ ವಿನಾಯಿತಿಯನ್ನು ತಾ. ೩೦ರವರೆಗೆ ವಿಸ್ತರಿಸಿ ಜಿಲ್ಲಾ ದಂಡಾಧಿಕಾರಿ ಹಾಗೂ ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಅಧ್ಯಕ್ಷರೂ ಆದ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.