ಕುಶಾಲನಗರ: ಕುಶಾಲನಗರ ತಾಲೂಕು ಹೆಬ್ಬಾಲೆ ಸಂಯುಕ್ತ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಗೆ ಕುಶಾಲನಗರ ಶ್ರೀನಿವಾಸ ಕಲ್ಯಾಣೋತ್ಸವ ಸಮಿತಿ ವತಿಯಿಂದ ನೋಟ್ ಪುಸ್ತಕ ವಿತರಣಾ ಕಾರ್ಯಕ್ರಮ ನಡೆಯಿತು.
ಸಮಿತಿ ಅಧ್ಯಕ್ಷ ಉದ್ಯಮಿ ಎಸ್.ಕೆ. ಸತೀಶ್ ಮತ್ತು ಸಮಿತಿ ಪದಾಧಿಕಾರಿಗಳು ನೋಟ್ ಬುಕ್‌ಗಳನ್ನು ವಿತರಣೆ ಮಾಡಿದರು.
ಈ ಸಂದರ್ಭ ಮಾತನಾಡಿದ ಎಸ್.ಕೆ. ಸತೀಶ್ ಗ್ರಾಮೀಣ ಪ್ರದೇಶದಲ್ಲಿ ಅತಿ ಹೆಚ್ಚು ಅಂಕಗಳನ್ನು ಪಡೆಯುವ ಮೂಲಕ ವಿದ್ಯಾರ್ಥಿಗಳು ಸಾಧನೆ ಮಾಡುತ್ತಿರುವುದು ಸಂತಸದ ವಿಷಯವಾಗಿದ್ದು, ಬಡ ಮಕ್ಕಳ ಶಾಲಾ ಶುಲ್ಕವನ್ನು ಭರಿಸುವ ಭರವಸೆ ವ್ಯಕ್ತಪಡಿಸಿದರು.
ಶಾಲಾ ಹಳೆ ವಿದ್ಯಾರ್ಥಿ ಸಮಿತಿಯ ಅಧ್ಯಕ್ಷರಾದ ಹೆಚ್.ವಿ. ಶಿವಪ್ಪ ಅವರ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು.
ಸಭೆಯಲ್ಲಿ ಕುಶಾಲನಗರ ಸಮಸ್ತ ಮಹಿಳಾ ಭಜನಾ ಮಂಡಳಿ ಪ್ರಮುಖರಾದ ಪದ್ಮ ಪುರುಷೋತ್ತಮ್, ರಮಾ ವಿಜಯೇಂದ್ರ, ಉದ್ಯಮಿ ರಾಮದಾಸ್ ಭಜನಾ ಮಂಡಳಿ ಪ್ರಮುಖರು ಹಾಗೂ ಶಾಲಾ ಮುಖ್ಯೋಪಾಧ್ಯಾಯರು ಶಿಕ್ಷಕ ವರ್ಗ ಉಪಸ್ಥಿತರಿದ್ದರು.