ಮಡಿಕೇರಿ, ಜೂ. ೨೪ : ಜಿಲ್ಲೆಯಾದ್ಯಂತ ಇದೇ ತಾ. ೨೮ ರಿಂದ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮ ನಡೆಯಲಿದ್ದು, ಸಿದ್ಧತೆ ಬಗ್ಗೆ ಅಧಿಕಾರಿಗಳಿಂದ ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಮಾಹಿತಿ ಪಡೆದರು.
ನಗರದ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ನಡೆದ ರಾಷ್ಟಿçÃಯ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿ, ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮ ಯಶಸ್ಸಿಗೆ ಎಲ್ಲಾ ಇಲಾಖೆಗಳು, ಸಂಘ ಸಂಸ್ಥೆಗಳು ಕೈಜೋಡಿಸಬೇಕು. ಅಗತ್ಯ ಸಿಬ್ಬಂದಿಗಳು ಹಾಗೂ ವಾಹನಗಳ ನಿಯೋಜನೆ, ನಿರಂತರ ವಿದ್ಯುತ್ ಪೂರೈಕೆ, ಅಂಗನವಾಡಿ ಮತ್ತು ಶಾಲಾ- ಕಾಲೇಜುಗಳಲ್ಲಿ ಇತರ ಪ್ರದೇಶಗಳಲ್ಲಿ ಪಲ್ಸ್ ಪೋಲಿಯೋ ಲಸಿಕೆ ನೀಡಲು ವ್ಯವಸ್ಥೆ ಮಾಡುವುದು ಮತ್ತಿತರ ಬಗ್ಗೆ ಅಗತ್ಯ ಕ್ರಮವಹಿಸುವಂತೆ ನಿರ್ದೇಶನ ನೀಡಿದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸತೀಶ್ ಕುಮಾರ್ ಮಾಹಿತಿ ನೀಡಿ, ಇದೇ ಜೂನ್ ೨೮ ರಂದು ಬೆಳಿಗ್ಗೆ ೮ ರಿಂದ ಬೂತ್ ಮಟ್ಟದಲ್ಲಿ ಪೋಲಿಯೋ ಹನಿ ನೀಡಲಾಗುತ್ತದೆ. ಜಿಲ್ಲೆಗೆ ಪ್ರವಾಸಿಗರು ಆಗಮಿಸುವುದರಿಂದ ಹಾಗೂ ಸ್ಥಿರವಾಸಿತ ವಲಸೆ ಮಕ್ಕಳ ಸಂಖ್ಯೆಯೂ ಹೆಚ್ಚಿರುವುದರಿಂದ ಮೂರು ದಿನಗಳ ಕಾಲ ನಗರ, ಪಟ್ಟಣ ಪ್ರದೇಶ ಭೇಟಿ ನೀಡಿ ಪೋಲಿಯೋ ಹನಿ ನೀಡಲಾಗುತ್ತದೆ ಎಂದು ವಿವರಿಸಿದರು. ಈಗಾಗಲೇ ವಿವಿಧ ಇಲಾಖೆಗಳ ಮೂಲಕ ೫ ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ಲಸಿಕೆ ಪಡೆಯುವಂತೆ ಮಾಹಿತಿ ನೀಡಲಾಗಿದೆ. ಎಲ್ಲಾ ಅಂಗನವಾಡಿ ಕಾರ್ಯಕರ್ತೆಯರು, ಮೇಲ್ವಿಚಾರಕರು ಸ್ತಿçà ಶಕ್ತಿ ಗುಂಪುಗಳ ಪದಾಧಿಕಾರಿಗಳು ಲಸಿಕಾ ಕಾರ್ಯಕ್ರಮದಲ್ಲಿ ಸಕ್ರಿಯವಾಗಿ ಪಾಲ್ಗೊಂಡು ಶೇಕಡವಾರು ಕಾರ್ಯಕ್ರಮ ಯಶಸ್ಸಿಗೆ ಕೈಜೋಡಿಸುವಂತೆ ಮನವಿ ಮಾಡಲಾಗಿದೆ. ನಗರಾಭಿವೃದ್ಧಿ ಮತ್ತು ಪೌರಾಡಳಿತ ಇಲಾಖೆ ಮೂಲಕ ಸ್ಥಳೀಯ ನಗರ, ಪಟ್ಟಣ ವ್ಯಾಪ್ತಿಯಲ್ಲಿ ಲಸಿಕೆ ಪಡೆಯುವಂತಾಗಲು ಜನಜಾಗೃತಿ ಮೂಡಿಸಲಾಗಿದೆ. ಬ್ಯಾನರ್‌ಗಳನ್ನು ಬರೆಸಿ ಹಾಗೂ ಬಿತ್ತಿ ಪತ್ರಗಳನ್ನು ಮುದ್ರಿಸಿ ಪ್ರದರ್ಶಿಸಲು ವ್ಯವಸ್ಥೆ ಮಾಡಲಾಗಿದೆ. ಪ್ರಾದೇಶಿಕ ಸಾರಿಗೆ ಇಲಾಖೆ ಮೂಲಕ ಅಗತ್ಯ ವಾಹನಗಳ ನಿಯೋಜನೆ ಮಾಡುವುದು, ಬಸ್ ನಿಲ್ದಾಣಗಳಲ್ಲಿ ಹಾಗೂ ಇತರ ಸ್ಥಳಗಳಲ್ಲಿ ಲಸಿಕೆ ಪಡೆಯಲು ಅರಿವು ಮೂಡಿಸುವುದು, ಕಾರ್ಮಿಕ ಇಲಾಖೆ ಮೂಲಕ ತೋಟಗಳಲ್ಲಿ ಕೆಲಸ ಮಾಡುವ ಕಾರ್ಮಿಕರಿಗೆ ೫ ವರ್ಷದೊಳಗಿನ ಎಲ್ಲಾ ೪ಐದನೇ ಪುಟಕ್ಕೆ
(ಮೊದಲ ಪುಟದಿಂದ) ಮಕ್ಕಳಿಗೆ ಲಸಿಕೆ ಪಡೆಯುವಂತೆ ಜಾಗೃತಿ ಮೂಡಿಸಲು ಕ್ರಮವಹಿಸಲಾಗಿದೆ ಎಂದರು.
ವೈದ್ಯಕೀಯ ಶಿಕ್ಷಣ ಇಲಾಖೆಯು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಜೊತೆ ಕೈಜೋಡಿಸುವುದು, ವಿವಿಧ ಸಂಘ, ಸಂಸ್ಥೆಗಳು ಯಶಸ್ಸಿಗೆ ಕೈಜೋಡಿಸುವುದು, ಗ್ರಾ.ಪಂ.ಗಳ ವ್ಯಾಪ್ತಿಯಲ್ಲಿ ಇರುವ ಗ್ರಾಮಗಳು, ಲಸಿಕೆ ನೀಡುವ ಸ್ಥಳ ಹಾಗೂ ದಿನಾಂಕವನ್ನು ಕರಪತ್ರದಲ್ಲಿ ಮುದ್ರಿಸಿ ವಿತರಿಸುವುದು, ಹಾಗೆಯೇ ವಿವಿಧ ಧಾರ್ಮಿಕ ಮುಖಂಡರು ಸಹ ಲಸಿಕೆ ಮಹತ್ವದ ಬಗ್ಗೆ ಜಾಗೃತಿ ಮೂಡಿಸುವುದು. ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಸಂಚಾರಿ ಘಟಕಕ್ಕೆ ಸ್ಥಳಾವಕಾಶ ನೀಡಿ ಲಸಿಕೆ ಪಡೆಯಲು ಅವಕಾಶ ಮಾಡುವುದು. ಹೀಗೆ ವಿವಿಧ ಇಲಾಖೆಗಳ ಸಹಕಾರ ಪಡೆಯಲಾಗಿದೆ ಎಂದು ಡಾ.ಸತೀಶ್ ಕುಮಾರ್ ಹೇಳಿದರು. ಸೆಸ್ಕ್ ಇಇ ರಾಮಚಂದ್ರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ಪ್ರಸನ್ನ ಕುಮಾರ್, ಪ್ರಾದೇಶಿಕ ಸಾರಿಗೆ ಇಲಾಖೆಯ ಇನ್ಸ್ಪೆಕ್ಟರ್ ಮೋಹನ್ ಕುಮಾರ್, ಶಾಲಾ ಶಿಕ್ಷಣ ಇಲಾಖೆ ಅಧಿಕಾರಿಗಳು, ಕೆಎಸ್‌ಆರ್‌ಟಿಸಿ ಘಟಕ ವ್ಯವಸ್ಥಾಪಕ ಈರಸಪ್ಪ, ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ದೀಪಕ್, ವಿವಿಧ ಇಲಾಖೆ ಅಧಿಕಾರಿಗಳು ಇದ್ದರು.