ವೀರಾಜಪೇಟೆ, ಜೂ. ೨೫: ಬಾಲ ಕಾರ್ಮಿಕ ಪದ್ಧತಿ ಮಗುವಿನ ಭವಿಷ್ಯವನ್ನು ಕಸಿದುಕೊಳ್ಳುವ ಅಪರಾಧ. ಸಂವಿಧಾನದ ವಿಧಿ ೨೪ ರ ಪ್ರಕಾರ ೧೪ ವರ್ಷದೊಳಗಿನ ಮಕ್ಕಳನ್ನು ಕಾರ್ಖಾನೆ, ಗಣಿ ಅಥವಾ ಅಪಾಯಕಾರಿ ಉದ್ಯೋಗದಲ್ಲಿ ತೊಡಗಿಸುವುದು ಸಂಪೂರ್ಣ ನಿಷೇಧ ಆಗಬೇಕು ಎಂದು ೨ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ತಾಲೂಕು ಕಾನೂನು ಸೇವಾ ಪ್ರಾಧಿಕಾರದ ಅಧ್ಯಕ್ಷರಾದ ನ್ಯಾಯಾಧೀಶ ಎಸ್. ನಟರಾಜ್ ಹೇಳಿದರು.

ತಾಲೂಕು ಕಾನೂನು ಸೇವೆಗಳ ಪ್ರಾಧಿಕಾರ, ಕಾರ್ಮಿಕ ಇಲಾಖೆ, ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಾಲಾ ಶಿಕ್ಷಣ ಮತ್ತು ಸಾಕ್ಷಾರತಾ ಇಲಾಖೆ, ಪೊಲೀಸ್ ಇಲಾಖೆ ಹಾಗೂ ವಕೀಲರ ಸಂಘದ ಸಂಯುಕ್ತ ಆಶ್ರಯದಲ್ಲಿ ವೀರಾಜಪೇಟೆಯ ಸರಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನದ ಅಂಗವಾಗಿ ಹಮ್ಮಿಕೊಳ್ಳಲಾಗಿದ್ದ ಕಾನೂನು ಅರಿವು ಕಾರ್ಯಕ್ರಮಕ್ಕೆ ಗಿಡಕ್ಕೆ ನೀರು ಹಾಕಿ ಉದ್ಘಾಟಿಸಿ ಮಾತನಾಡಿದ ಅವರು, ಬಾಲ್ಯಾವಸ್ಥೆಯ ಹಾಗೂ ಕಿಶೋರಾವಸ್ಥೆಯ ಕಾರ್ಮಿಕ ಕಾಯ್ದೆಗಳ ಕುರಿತು ಸಾರ್ವಜನಿಕರಲ್ಲಿ ಮತ್ತು ಮಕ್ಕಳಲ್ಲಿ ಜಾಗೃತಿ ಮೂಡಿಸುವುದು ಅತ್ಯಂತ ಅಗತ್ಯವಾಗಿದೆ ಎಂದರು. “ಮಕ್ಕಳಿಗೆ ನ್ಯಾಯಯುತ ಆಟ, ವಯಸ್ಕರಿಗೆ ಯೋಗ್ಯ ಕೆಲಸ” ಎಂಬ ಧ್ಯೇಯದೊಂದಿಗೆ ಬಾಲಕಾರ್ಮಿಕ ಪದ್ಧತಿಯನ್ನು ಸಂಪೂರ್ಣವಾಗಿ ತಡೆಗಟ್ಟಲು ಎಲ್ಲರೂ ಕೈಜೋಡಿಸಬೇಕು ಎಂದು ಅವರು ಕರೆ ನೀಡಿದರು. ೪ಐದನೇ ಪುಟಕ್ಕೆ

(ಮೊದಲ ಪುಟದಿಂದ) ಕಾರ್ಯಕ್ರಮದಲ್ಲಿ ವೀರಾಜಪೇಟೆಯ ಹಿರಿಯ ಸಿವಿಲ್ ನ್ಯಾಯಾಧೀಶರಾದ ಮಂಜುನಾಥ್ ಅವರು ವಿದ್ಯಾರ್ಥಿಗಳಿಗೆ ಬಾಲಕಾರ್ಮಿಕ ಪದ್ಧತಿಯ ವಿರುದ್ಧ ಪ್ರತಿಜ್ಞಾ ವಿಧಿಯನ್ನು ಭೋಧಿಸಿದರು.

ಪ್ರಧಾನ ಸಿವಿಲ್ ನ್ಯಾಯಾಧೀಶರು ಹಾಗೂ ತಾಲೂಕು ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ವಿಶ್ವನಾಥ್ ಎ. ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಮಗುವಿನ ಕೈಯಲ್ಲಿ ಪುಸ್ತಕ ಇರಬೇಕು, ಮಕ್ಕಳನ್ನು ಕೆಲಸಕ್ಕೆ ಕಳುಹಿಸುವ ಪೋಷಕರೂ ಸಹ ಕಾನೂನಿನ ಪ್ರಕಾರ ಶಿಕ್ಷಾರ್ಹರು. ಬಾಲ ಕಾರ್ಮಿಕ ಪದ್ಧತಿ ಮುಕ್ತ ಭಾರತ ಕಟ್ಟಬೇಕಾದರೆ ಶಿಕ್ಷಣವೇ ಏಕೈಕ ಅಸ್ತç. ಪ್ರತಿ ಮಗುವನ್ನು ಶಾಲೆಗೆ ಕಳುಹಿಸಿ, ಅವರ ಬಾಲ್ಯವನ್ನು ಉಳಿಸೋಣ. ಬಾಲ ಕಾರ್ಮಿಕರ ಪುನರ್ವಸತಿಗೆ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದಿಂದ ಉಚಿತ ಕಾನೂನು ನೆರವು ಮತ್ತು ಪರಿಹಾರ ನೀಡಲಾಗುತ್ತದೆ ಎಂದರು.

ಮುಖ್ಯ ಅತಿಥಿಗಳಾಗಿ ವಕೀಲರ ಸಂಘದ ಅಧ್ಯಕ್ಷ ಸಿ.ಕೆ. ಪೂವಣ್ಣ ಮಾತನಾಡಿ ವಿದ್ಯಾರ್ಥಿಗಳೀಗೆ ಹಿತವಚನ ನೀಡಿ, ವಿದ್ಯೆಯಿಂದ ಏನನ್ನು ಬೇಕಾದರೂ ಸಾಧಿಸಬಹುದು. ಕಷ್ಟಪಟ್ಟು ವಿದ್ಯಾರ್ಜನೆ ಮಾಡಿ ಎಂದು ಸಲಹೆಯಿತ್ತರು.

ಹಿರಿಯ ಕಾರ್ಮಿಕ ನಿರೀಕ್ಷಕ ಎಂ.ಎA. ಯತ್ನಟ್ಟಿ ಮಾತನಾಡಿ ಕೊಡಗು ಜಿಲ್ಲೆಯನ್ನು ಬಾಲಕಾರ್ಮಿಕ ಮುಕ್ತ ಜಿಲ್ಲೆ ಎಂಬ ಕೀರ್ತಿಗೆ ಪಾತ್ರವಾಗಬೇಕೆಂಬ ಮಹಾತ್ಕಾಂಕ್ಷೆಯಿAದ ಜಿಲ್ಲೆಯಲ್ಲಿ ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿಯನ್ನು ಸ್ಥಾಪಿಸಲಾಗಿದೆ. ಅದರಂತೆ, ವಿರಾಜಪೇಟೆ ಹಾಗೂ ಪೊನ್ನಂಪೇಟೆ ತಾಲೂಕುಗಳಲ್ಲಿ, ೨೦೧೭ ರಿಂದ ಇಲ್ಲಿಯವರೆಗೆ ೧,೦೨೬ ತಪಾಸಣೆಗಳನ್ನು ಕೈಗೊಂಡು, ೨೦ ಬಾಲಕಾರ್ಮಿಕರು ಹಾಗೂ ೧೬ ಕಿಶೋರ ಕಾರ್ಮಿಕರು ಕಂಡುಬAದಿದ್ದು, ಇವರಲ್ಲಿ ಪೈಕಿ ೨೫ ಮಕ್ಕಳನ್ನು ಮಕ್ಕಳ ಕಲ್ಯಾಣ ಸಮಿತಿಯ ಮೂಲಕ ಸರ್ಕಾರಿ ಬಾಲಮಂದಿರಗಳಲ್ಲಿ ಪುನರ್ವಸತಿಗೊಳಿಸಲಾಗಿದ್ದು, ಇನ್ನುಳಿದ ೧೧ ಮಕ್ಕಳನ್ನು ಪೋಷಕರ ವಶಕ್ಕೆ ಒಪ್ಪಿಸಲಾಗಿದೆ.

ಪ್ರಸ್ತುತ ೨೦೨೫-೨೬ ನೇ ಸಾಲಿನಲ್ಲಿ ಇದುವರೆಗೆ ೧೧೯ ತಪಾಸಣೆಗಳನ್ನು ಕೈಗೊಂಡು ೧ ಬಾಲಕಾರ್ಮಿಕ ಹಾಗೂ ೫ ಕಿಶೋರ ಕಾರ್ಮಿಕರು ಕಂಡುಬAದಿದ್ದು, ಜೆ.ಎಂ.ಎಫ್.ಸಿ ನಾಯಾಲಯದಲ್ಲಿ ಪ್ರಕರಣ ಹೂಡಲಾಗಿದೆ. ಹಾಗೂ ೨೦೨೫-೨೬ ನೇ ಸಾಲಿನಲ್ಲಿ ೧೭ ವಿಶೇಷ ಕಾನೂನು ಅರಿವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ೨೦೨೬-೨೭ ನೇ ಸಾಲಿನ ಪ್ರಸ್ತುತ ಮಾಹೆಯವರೆಗೆ ೩ ಸಂಸ್ಥೆಗಳಲ್ಲಿ ೧ ಬಾಲಕಾರ್ಮಿಕ ಹಾಗೂ ೫ ಕಿಶೋರಕಾರ್ಮಿಕರು ಕಂಡುಬAದಿದ್ದು, ತಪ್ಪಿತಸ್ಥ ಮಾಲೀಕರ ವಿರುದ್ಧ ಜೆ.ಎಂ.ಎಫ್.ಸಿ ನ್ಯಾಯಾಲಯದಲ್ಲಿ ಪ್ರಕರಣ ಹೂಡಲಾಗಿದೆ. ಎಂದು ಮಾಹಿತಿ ನೀಡಿದರು.

ವೀರಾಜಪೇಟೆ ಕಾರ್ಮಿಕ ನಿರೀಕ್ಷಕ ಎಂ.ಸಿ. ಮಾದಪ್ಪ, ಮಾತನಾಡಿ, ಅಂತರರಾಷ್ಟಿçÃಯ ಕಾರ್ಮಿಕ ಸಂಸ್ಥೆ (ಐ.ಎಲ್.ಓ) ೨೦೦೨ ರಲ್ಲಿ ಘೋಷಿಸಿರುವಂತೆ, ವಿಶ್ವ ಸಂಸ್ಥೆಯ ಎಲ್ಲಾ ಮಿತ್ರ ರಾಷ್ಟçಗಳು ಪ್ರತಿ ವರ್ಷ ಜೂನ್ ೧೨ ರಂದು ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನವನ್ನಾಗಿ ಆಚರಿಸಲಾಗುತ್ತದೆ. ಕರ್ನಾಟಕ ಸರ್ಕಾರ ರಾಜ್ಯದ ಪ್ರತಿ ಜಿಲ್ಲೆಗಳಲ್ಲಿ ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನವನ್ನಾಗಿ ಜಿಲ್ಲಾ ಮಟ್ಟದಲ್ಲಿ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ತಾಲ್ಲೂಕು ಮಟ್ಟದಲ್ಲಿ ಟಾಸ್ಕ್ಫೋರ್ಸ್ ವಿಶೇಷ ತಂಡಗಳನ್ನು ರಚಿಸಿ, ತಾಲೂಕಿನಲ್ಲಿ ಅಂಗಡಿ, ಹೊಟೇಲ್, ಗ್ಯಾರೇಜ್, ಕಲ್ಲುಕ್ವಾರೆ, ಕ್ವಾರೆ, ತೋಟಗಳು, ಮನೆ ಹಾಗೂ ವಿವಿಧ ವಾಣಿಜ್ಯ ಸಂಸ್ಥೆಗಳಲ್ಲಿ ತಪಾಸಣೆಗಳನ್ನು ಕೈಗೊಳ್ಳಲಾಗುತ್ತಿದ್ದು, ವಿಶೇಷ ಅರಿವು ಕಾರ್ಯಕ್ರಮ ಹಾಗೂ ಕಾರ್ಯಾಗಾರಗಳ ಮೂಲಕ ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗಾಗಿ ಜನರಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ ಎಂದರು.

ವೇದಿಕೆಯಲ್ಲಿ ಕ್ಷೇತ್ರ ಸಂಪನ್ಮೂಲ ಸಮನ್ವಯಾಧಿಕಾರಿ ಮಹೇಶ್ ಕೆ.ಪಿ.,ಶಿಶು ಯೋಜನಾ ಅಭಿವೃದ್ಧಿ ಅಧಿಕಾರಿ ರೀತಾ, ಸರಕಾರಿ ಮಾದರಿ ಶಾಲೆಯ ಮುಖ್ಯೋಪಾಧ್ಯಾಯಿನಿ ಪಿ.ಡಿ. ಅನ್ನಮ್ಮ, ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿಯ ಯೋಜನಾ ನಿರ್ದೇಶಕ ಆರ್. ಶಿರಾಝ್ ಅಹ್ಮದ್, ಶಿಕ್ಷಕರಾದ ವಾಮನ, ದಿವ್ಯ, ಉಪಸ್ಥಿತರಿದ್ದರು. ಶಾಲಾ ವಿದ್ಯಾರ್ಥಿಗಳ ಪ್ರಾರ್ಥನೆ ಮತ್ತು ನಾಡಗೀತೆಯೊಂದಿಗೆ ಆರಂಭವಾದ ಕಾರ್ಯಕ್ರಮದಲ್ಲಿ ಅಧಿಕಾರಿಗಳು ಹಾಗೂ ವಕೀಲರು ಬಾಲಕಾರ್ಮಿಕ ಕಾಯ್ದೆಯ ವಿವಿಧ ಆಯಾಮಗಳ ಕುರಿತು ಮಾಹಿತಿ ನೀಡಿದರು.