ಪೊನ್ನಂಪೇಟೆ, ಜೂ. ೨೫: ಗೋಣಿಕೊಪ್ಪಲಿನ ಕಾವೇರಿ ಪದವಿಪೂರ್ವ ಕಾಲೇಜು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸಂಯುಕ್ತ ಆಶ್ರಯದಲ್ಲಿ ಕಾಲೇಜಿನ ಸಭಾಂಗಣದಲ್ಲಿ ಕಾನೂನು ಅರಿವು ಕಾರ್ಯಾಗಾರ ಆಯೋಜಿಸಲಾಗಿತ್ತು.
ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದ ಹಿರಿಯ ಸಿವಿಲ್ ನ್ಯಾಯಾಧೀಶರಾದ ಶುಭಾ ಅವರು ಮಕ್ಕಳ ರಕ್ಷಣೆ, ಪೋಕ್ಸೋ ಕಾಯ್ದೆ, ಬಾಲ್ಯ ವಿವಾಹ ನಿಷೇಧ ಹಾಗೂ ಯುವಜನರಲ್ಲಿ ಹೆಚ್ಚುತ್ತಿರುವ ಮಾದಕ ದ್ರವ್ಯ ಬಳಕೆಯ ದುಷ್ಪರಿಣಾಮಗಳ ಕುರಿತು ಜಾಗೃತಿ ಮೂಡಿಸಿದರು.
ಮಕ್ಕಳ ವಿರುದ್ಧದ ಲೈಂಗಿಕ ದೌರ್ಜನ್ಯ ಪ್ರಕರಣಗಳಲ್ಲಿ ಪೋಕ್ಸೋ ಕಾಯ್ದೆ ಅತ್ಯಂತ ಪ್ರಮುಖ ಪಾತ್ರ ವಹಿಸುತ್ತದೆ. ಯಾವುದೇ ರೀತಿಯ ದೌರ್ಜನ್ಯ ಅಥವಾ ಕಿರುಕುಳ ಕಂಡುಬAದಲ್ಲಿ ತಕ್ಷಣ ಸಂಬAಧಪಟ್ಟ ಅಧಿಕಾರಿಗಳಿಗೆ ದೂರು ನೀಡಬೇಕು. ಕಾನೂನುಗಳ ದುರುಪಯೋಗ ಮಾಡದೆ, ನೈಜ ಪ್ರಕರಣಗಳಲ್ಲಿ ಮಾತ್ರ ದೂರು ದಾಖಲಿಸಬೇಕು ಎಂದು ಸಲಹೆ ನೀಡಿದರು.
ಯುವಜನರಲ್ಲಿ ಹೆಚ್ಚುತ್ತಿರುವ ಮಾದಕ ದ್ರವ್ಯ ವ್ಯಸನದ ಕುರಿತು ಕಳವಳ ವ್ಯಕ್ತಪಡಿಸಿದ ಅವರು, ಡ್ರಗ್ಸ್ ಬಳಕೆಯು ವ್ಯಕ್ತಿಯ ಆರೋಗ್ಯ, ಕುಟುಂಬ ಹಾಗೂ ಸಮಾಜದ ಮೇಲೆ ಗಂಭೀರ ಪರಿಣಾಮ ಬೀರುತ್ತದೆ ಎಂದರು. ಎನ್ಡಿಪಿಎಸ್ ಕಾಯ್ದೆಯ ಪ್ರಮುಖ ಅಂಶಗಳನ್ನು ವಿವರಿಸಿದರು.
ಉತ್ತಮ ಆರೋಗ್ಯಕ್ಕಾಗಿ ದಿನಕ್ಕೆ ಕನಿಷ್ಟ ಎಂಟು ಗಂಟೆಗಳ ನಿದ್ರೆ, ಸಮತೋಲಿತ ಆಹಾರ, ನಿಯಮಿತ ವ್ಯಾಯಾಮ, ೪ಐದನೇ ಪುಟಕ್ಕೆ
(ಮೊದಲ ಪುಟದಿಂದ) ಯೋಗ ಮತ್ತು ಧ್ಯಾನವನ್ನು ಜೀವನದ ಭಾಗವಾಗಿಸಿಕೊಳ್ಳಬೇಕು ಎಂದು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು. ನಂತರ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿ ಪ್ರಶ್ನೆಗಳಿಗೆ ಉತ್ತರಿಸಿದರು. ಪ್ರಾಂಶುಪಾಲ ಪ್ರೊ. ಎಸ್.ಎಸ್. ಮಾದಯ್ಯ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಎನ್ಸಿಸಿ ಅಧಿಕಾರಿ ಡಾ. ಲೆಫ್ಟಿನೆಂಟ್ ಅಕ್ರಂ, ಎನ್ಎಸ್ಎಸ್ ಅಧಿಕಾರಿ ವಿಪ್ರಾ ನೀಲಮ್ಮ, ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.