ಮಡಿಕೇರಿ, ಜೂ. ೨೫: ಜಿಲ್ಲಾ ಪೊಲೀಸ್ ಇಲಾಖೆಯ ವತಿಯಿಂದ ಮಡಿಕೇರಿಯ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಅಂತರಾಷ್ಟಿçÃಯ ಮಾದಕ ದ್ರವ್ಯ ದುರುಪಯೋಗ ಮತ್ತು ಅಕ್ರಮ ಸಾಗಾಟ ವಿರೋಧಿ ದಿನದ ಅಂಗವಾಗಿ ವಿದ್ಯಾರ್ಥಿಗಳಿಗೆ ಜಾಗೃತಿ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿಂದುಮಣಿ, ವಿದ್ಯಾರ್ಥಿಗಳು ಇತ್ತೀಚಿನ ದಿನಗಳಲ್ಲಿ ಹೆಚ್ಚಾಗಿ ಮಾದಕ ವಸ್ತುಗಳ ಜಾಲಕ್ಕೆ ಬಲಿಯಾಗುತ್ತಿದ್ದಾರೆ. ಸರಿ-ತಪ್ಪುಗಳ ಅರಿವು ಪೂರ್ಣವಾಗಿ ಮೂಡದ ಚಂಚಲ ಮನಸ್ಸಿನ ಮಕ್ಕಳು ಮತ್ತು ಯುವಕರು ಇದಕ್ಕೆ ಅತಿ ಬೇಗ ಒಳಗಾಗುತ್ತಿದ್ದಾರೆ. ಡ್ರಗ್ಸ್ ಬಳಸುವುದು ಮಾತ್ರವಲ್ಲದೆ, ಅದನ್ನು ಇತರರಿಗೆ ಪೂರೈಸುವ ಮೂಲಕ ಕೊನೆಗೆ ಕಾನೂನಿನ ಕಣ್ಣಿಗೆ ಬಿದ್ದು ಆರೋಪಿಗಳಾಗಿ ಜೈಲು ಸೇರುವ ಪರಿಸ್ಥಿತಿಯೂ ಉಂಟಾಗುತ್ತದೆ. ಇದರೊಂದಿಗೆ ಕುಟುಂಬದೊAದಿಗೆ ಇರುವ ಬಾಂಧವ್ಯ ಹಾಳಾಗುವುದಲ್ಲದೆ, ಭವಿಷ್ಯವೂ ಕತ್ತಲೆಯಾಗುತ್ತದೆ. ಗಾಂಜಾ ಸೇರಿದಂತೆ ಯಾವುದೇ ಮಾದಕ ವಸ್ತುಗಳ ಬಳಕೆಯಿಂದ ಯಾರಿಗೂ ಒಳ್ಳೆಯದಾಗಿಲ್ಲ, ಮುಂದೆಯೂ ಒಳ್ಳೆಯದಾಗುವುದಿಲ್ಲ. ಈ ಹಿನ್ನೆಲೆ ಯುವಜನತೆ ಮಾದಕ ವ್ಯಸನದಿಂದ ದೂರವಿದ್ದು, ಆರೋಗ್ಯಕರ ಹಾಗೂ ಉತ್ತಮ ಜೀವನದತ್ತ ಗಮನ ಹರಿಸುವುದು ಅಗತ್ಯವಾಗಿದೆ ಎಂದು ಕರೆ ನೀಡಿದರು.

ಕಾನೂನಾತ್ಮಕ ಹಾಗೂ ೪ಐದನೇ ಪುಟಕ್ಕೆ

(ಮೊದಲ ಪುಟದಿಂದ) ಅಕ್ರಮವಾಗಿ ಬಳಸುವ ಡ್ರಗ್ಸ್ಗಳು ಹಾಗೂ ಮಾದಕ ವ್ಯಸನದಿಂದ ಉಂಟಾಗುವ ದುಷ್ಪರಿಣಾಮಗಳ ಕುರಿತು ಆರೋಗ್ಯಾಧಿಕಾರಿ ಡಾ.ಉಮೇಶ್‌ಬಾಬು ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು. ಮಾದಕ ವಸ್ತುಗಳ ಬಳಕೆಯಿಂದ ಮೆದುಳಿನ ಕಾರ್ಯಕ್ಷಮತೆಯ ಮೇಲೆ ಗಂಭೀರ ಪರಿಣಾಮ ಉಂಟಾಗುತ್ತದೆ. ವ್ಯಸನಕ್ಕೆ ಒಳಗಾದವರಲ್ಲಿ ಮಾನಸಿಕ ಹಾಗೂ ದೈಹಿಕ ಆರೋಗ್ಯ ಸಮಸ್ಯೆಗಳು ಹೆಚ್ಚಾಗುತ್ತವೆ. ಇತ್ತೀಚಿನ ದಿನಗಳಲ್ಲಿ ಮಾದಕ ವಸ್ತುಗಳಿಗೆ ಸಂಬAಧಿಸಿದ ಪ್ರಕರಣಗಳ ಸಂಖ್ಯೆಯೂ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ. ಡ್ರಗ್ಸ್ ಬಳಕೆಯಿಂದ ವ್ಯಕ್ತಿಯ ಜೀವನ, ಆರೋಗ್ಯ, ಶಿಕ್ಷಣ ಹಾಗೂ ಭವಿಷ್ಯದ ಮೇಲೆ ದುಷ್ಪರಿಣಾಮ ಉಂಟಾಗುವುದಲ್ಲದೆ, ಕುಟುಂಬ ಮತ್ತು ಸಮಾಜದ ಮೇಲೆಯೂ ಕೆಟ್ಟ ಪರಿಣಾಮ ಬೀರುತ್ತದೆ. ಆದ್ದರಿಂದ ಯುವಜನತೆ ಮಾದಕ ವಸ್ತುಗಳಿಂದ ದೂರವಿರುವುದು ಅತ್ಯಗತ್ಯ ಎಂದರು.

ಮಡಿಕೇರಿ ಗ್ರಾಮಾಂತರ ಠಾಣೆಯ ಪೊಲೀಸ್ ಇನ್ಸ್ಪೆಕ್ಟರ್ ಚಂದ್ರಶೇಖರ್ ಮಾತನಾಡಿ, ವಿದ್ಯಾರ್ಥಿಗಳೇ ದೇಶದ ಭವಿಷ್ಯವಾಗಿದ್ದು, ಮಾದಕ ವ್ಯಸನಕ್ಕೆ ಒಳಗಾಗಿ ತಮ್ಮ ಜೀವನವನ್ನು ಹಾಳು ಮಾಡಿಕೊಳ್ಳಬಾರದು. ಮಾನಸಿಕ ಹಾಗೂ ದೈಹಿಕವಾಗಿ ಸದೃಢರಾಗಿದ್ದರೆ ಮಾತ್ರ ಆರೋಗ್ಯವಂತ ಮತ್ತು ಸುಸ್ಥಿರ ಸಮಾಜವನ್ನು ನಿರ್ಮಿಸಲು ಸಾಧ್ಯ. ಯುವಜನರನ್ನು ಮಾದಕ ವ್ಯಸನದಿಂದ ಮುಕ್ತಗೊಳಿಸುವ ಉದ್ದೇಶದಿಂದ ಕೇಂದ್ರ ಸರ್ಕಾರ ನಶಾಮುಕ್ತ ಭಾರತ ಅಭಿಯಾನವನ್ನು ಹಮ್ಮಿಕೊಂಡಿದೆ ಎಂದು ತಿಳಿಸಿದರು.

ಇದೇ ಸಂದರ್ಭ ರಸ್ತೆ ಸುರಕ್ಷತೆ, ಡ್ರಗ್ಸ್ ಸೇವನೆಯ ದುಷ್ಪರಿಣಾಮಗಳು, ಸೈಬರ್ ಅಪರಾಧಗಳು ಹಾಗೂ ಇತರ ಕಾನೂನು ಸಂಬAಧಿತ ವಿಷಯಗಳ ಕುರಿತು ವಿದ್ಯಾರ್ಥಿಗಳಿಗೆ ಪ್ರಶ್ನೆಗಳನ್ನು ಕೇಳಲಾಯಿತು. ಸರಿಯಾದ ಉತ್ತರ ನೀಡಿದ ವಿದ್ಯಾರ್ಥಿಗಳಿಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿಂದುಮಣಿ ಅವರು ಪೆನ್‌ಗಳನ್ನು ಉಡುಗೊರೆಯಾಗಿ ನೀಡಿ ಪ್ರೋತ್ಸಾಹಿಸಿದರು. ಕಾರ್ಯಕ್ರಮದಲ್ಲಿ ಮಡಿಕೇರಿ ಡಿವೈಎಸ್‌ಪಿ ಸೂರಜ್, ಅಧಿಕಾರಿಗಳಾದ ಸಚಿನ್, ಶ್ರೀನಿವಾಸ್, ಕಾಲೇಜು ಪ್ರಾಂಶುಪಾಲÀ ವಿಜಯ್, ನಗರ ಠಾಣೆಯ ಎಸ್‌ಐ ಅನ್ನಪೂರ್ಣ ಸೇರಿದಂತೆ ವಿದ್ಯಾರ್ಥಿಗಳು, ಶಿಕ್ಷಕ ವೃಂದದವರು ಉಪಸ್ಥಿತರಿದ್ದರು.