ಕುಶಾಲನಗರ, ಜೂ. ೨೬: ಕುಶಾಲನಗರ ತಾಲೂಕು ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯಿಂದ ಪ್ರಗತಿ ಪರಿಶೀಲನಾ ಸಭೆ ನಡೆಯಿತು. ಕುಶಾಲನಗರ ಪುರಸಭೆ ಸಭಾಂಗಣದಲ್ಲಿ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ವಿ.ಪಿ. ಶಶಿಧರ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಆಹಾರ ಇಲಾಖೆ ಮತ್ತು ಸಾರಿಗೆ ಇಲಾಖೆಯ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಲಾಯಿತು.
ಹಿಂದಿನ ಸಭೆಯಲ್ಲಿ ಚರ್ಚಿಸಲಾದ ವಿಷಯಗಳು ಮತ್ತು ಅನುಪಾಲನಾ ವರದಿಗಳ ಬಗ್ಗೆ ಮಾಹಿತಿಯನ್ನು ಪಡೆದ ವಿ.ಪಿ. ಶಶಿಧರ್ ಅಧಿಕಾರಿಗಳಿಗೆ ಹಲವು ಸಲಹೆ ಸೂಚನೆಗಳನ್ನು ನೀಡಿದರು.
ಅಂಗನವಾಡಿ ಕಾರ್ಯಕರ್ತರ ಸಹಾಯಕಿಯರ ಆಯ್ಕೆ ಸಂಬAಧಿಸಿದAತೆ ಅಧಿಕಾರಿಗಳಿಂದ ಮಾಹಿತಿ ಪಡೆಯಲಾಯಿತು. ಕುಶಾಲನಗರ ನೂತನ ಬಸ್ ಡಿಪೋ ನಿರ್ಮಾಣ ಕಾಮಗಾರಿ ಪ್ರಗತಿ ಬಗ್ಗೆ ಚರ್ಚಿಸಲಾಯಿತು.
ಕೂಡುಮಂಗಳೂರು ಗ್ರಾಮದ ಬಡಾವಣೆ ಯೊಂದರಲ್ಲಿ ಚರಂಡಿ ಮೇಲೆ ೧೧ ಕೆವಿ ವಿದ್ಯುತ್ ಲೈನ್ ಹೋಗಿರುವ ಬಗ್ಗೆ ಮತ್ತು ಶುಂಠಿಕೊಪ್ಪ ವ್ಯಾಪ್ತಿಯ ಪೊಲೀಸ್ ಠಾಣೆ ಬಳಿ ಎಲ್ಟಿ ಲೈನ್ಗೆ ಕೇಬಲ್ ಅಳವಡಿಸುವ ಬಗ್ಗೆ Zರ್ಚೆ ನಡೆಯಿತು.
ಕುಶಾಲನಗರ ಸಮೀಪ ಗುಮ್ಮನಕೊಲ್ಲಿ ಗ್ರಾಮದಲ್ಲಿ ೧೧ ಕೆವಿ ವಿದ್ಯುತ್ ಲೈನ್ ತಗುಲಿ ಬಾಲಕಿ ಆಸ್ಪತ್ರೆಗೆ ಸೇರಿರುವ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಸಂಗ್ರಹಿಸಲಾಯಿತು. ಈ ಬಗ್ಗೆ ಮಾಹಿತಿ ನೀಡಿದ ಸೆಸ್ಕಾಂ ಇಲಾಖೆ ಸಹಾಯಕ ಕಾರ್ಯ ಪಾಲಕ ಅಭಿಯಂತರ ಮಂಜುನಾಥ್ ಬಾಲಕಿಯ ಚಿಕಿತ್ಸೆಗೆ ಇಲಾಖೆ ವತಿಯಿಂದ ಈಗಾಗಲೇ ೩.೭೫ ಲಕ್ಷ ರೂಗಳನ್ನು ನೀಡಲಾಗಿದೆ ಅಲ್ಲದೆ ಪ್ರಕರಣಕ್ಕೆ ಸಂಬAಧಿಸಿದAತೆ ಅಧಿಕಾರಿಗಳಿಗೆ ಕಾರಣ ಕೇಳಿ ನೋಟಿಸ್ ಜಾರಿಗೊಳಿಸಲಾಗಿದೆ. ಗಾಯಗೊಂಡಿರುವ ಬಾಲಕಿಯ ಆರೋಗ್ಯ ಚೇತರಿಕೆ ಕಾಣುತ್ತಿದೆ ಎಂದು ತಿಳಿಸಿದರು. ಸಭೆಯಲ್ಲಿ ಜಿಲ್ಲಾ ಗ್ಯಾರಂಟಿ ಸಮಿತಿಯ ಉಪಾಧ್ಯಕ್ಷ ಕೆ.ಸಿ. ಶಶಿ ಭೀಮಯ್ಯ, ಮುಸ್ತಫ, ಸದಸ್ಯರಾದ ಅಣ್ಣಯ್ಯ, ಬಿ.ಸಿ. ಮಲ್ಲಿಕಾರ್ಜುನ, ಫಿಲೋಮಿನಾ, ಸುಹಾದ ಅಶ್ರಫ್, ಎಸ್.ಎ. ಶ್ರೀನಿವಾಸ್, ಎನ್. ಶ್ರೀನಿವಾಸ್ ಕುಮಾರ್, ಯು.ಎಂ. ಕಿಶೋರ್. ಹೆಚ್.ಯು. ರಫೀಕ್ ಖಾನ್, ಅಧಿಕಾರಿಗಳಾದ ಲೋಕೇಶ್, ರಾಕೇಶ್ ಮತ್ತಿತರರು ಇದ್ದರು.
ಸಭೆ ನಡೆಯುತ್ತಿದ್ದ ಸಂದರ್ಭ ಜಿಲ್ಲಾ ಮಟ್ಟದ ಅಧಿಕಾರಿಯೊಬ್ಬರು ಮೊಬೈಲ್ನಲ್ಲಿ ಗೇಮ್ ವೀಕ್ಷಣೆ ಮಾಡುತ್ತಿದ್ದ ಬಗ್ಗೆ ಗಮನಕ್ಕೆ ಬಂದ ಸಂದರ್ಭ ಅಧ್ಯಕ್ಷರು ಅವರನ್ನು ತರಾಟೆಗೆ ತೆಗೆದುಕೊಂಡ ಘಟನೆ ನಡೆಯಿತು.