ಮಡಿಕೇರಿ, ಜೂ. ೨೬: ಅಂತರರಾಷ್ಟಿçÃಯ ಮಾದಕದ್ರವ್ಯ ದುರುಪಯೋಗ ಹಾಗೂ ಅಕ್ರಮ ಸಾಗಾಟ ವಿರೋಧಿ ದಿನದ ಅಂಗವಾಗಿ ಕೊಡಗು ಜಿಲ್ಲಾ ಪೊಲೀಸ್ ಹಾಗೂ ವಿವಿಧ ಸಂಘ ಸಂಸ್ಥೆಗಳ ಆಶ್ರಯದಲ್ಲಿ ಮಡಿಕೇರಿಯಲ್ಲಿ ಸೈಕಲ್ ಜಾಥಾ ಹಮ್ಮಿಕೊಳ್ಳಲಾಯಿತು.
ನಗರದ ಫೀಲ್ಡ್ ಮಾರ್ಷಲ್ ಕೆ.ಎಂ ಕಾರ್ಯಪ್ಪ ವೃತ್ತದಿಂದ ಜನರಲ್ ತಿಮ್ಮಯ್ಯ ವೃತ್ತ, ಅಜ್ಜಮಾಡ ದೇವಯ್ಯ ವೃತ್ತ, ಇಂದಿರಾ ಗಾಂಧಿ ವೃತ್ತದಿಂದ ಸಾಗಿದ ಜಾಥಾ, ಕಾಲೇಜು ರಸ್ತೆ, ಕಾನ್ವೆಂಟ್ ರಸ್ತೆ ಮೂಲಕ ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ ಸಮಾಪ್ತಿಗೊಂಡಿತು. ಜಾಥಾದಲ್ಲಿ ವಿವಿಧ ಶಾಲಾ ಮಕ್ಕಳು, ಮಡಿಕೇರಿ ಸಾಯಿ ತರಬೇತಿ ಕೇಂದ್ರದ ಕ್ರೀಡಾಪಟುಗಳು, ಮೂರ್ನಾಡಿನ ಕ್ಲೀನ್ ಕೂರ್ಗ್ ಇನಿಷಿಯೇಟಿವ್‌ನ ಸದಸ್ಯರು, ಮಾರ್ನಿಂಗ್ ಸ್ಟಾರ್ಸ್ ಸಂಘದ ಸದಸ್ಯರು ಸೇರಿದಂತೆ ಇತರ ಸಾರ್ವಜನಿಕರು ಭಾಗವಹಿಸಿದ್ದರು.
ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ಜಿಲ್ಲಾಧಿಕಾರಿ ಸೋಮಶೇಖರ್ ಅವರು, ಮಳೆಯ ನಡುವೆಯೂ ಜಾಥಾದಲ್ಲಿ ಹೆಚ್ಚು ಜನ ಪಾಲ್ಗೊಂಡಿರುವುದು ಉತ್ತಮ ಬೆಳವಣಿಗೆ. ಮಾದಕವಸ್ತು ಬಗ್ಗೆ ಸಮಾಜದಲ್ಲಿ ಜಾಗೃತಿ ಮೂಡಿಸುವುದು ಅತಿಮುಖ್ಯ ಎಂದರು. ಜಿಲ್ಲಾ ಪಂಚಾಯಿತಿ ಮೂಲಕ ‘ಡ್ರಗ್ಸ್ ಫ್ರೀ ಗ್ರಾಮ ಪಂಚಾಯಿತಿ’ ಎಂಬ ಯೋಜನೆ ರೂಪಿಸಿ ಪ್ರತಿ ಗ್ರಾಮಗಳ ಮಟ್ಟದಲ್ಲಿ ಮಾದಕವ್ಯಸನವನ್ನು ಸಂಪೂರ್ಣವಾಗಿ ಇಲ್ಲವಾಗಿಸಬೇಕೆಂದು ಈ ಸಂದರ್ಭ ಕರೆ ನೀಡಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿಂದುಮಣಿ ಅವರು ಮಾತನಾಡಿ, ಕೊಡಗಿನಲ್ಲಿ ಪೊಲೀಸ್ ಇಲಾಖೆಯ ಕಾರ್ಯಕ್ರಮಗಳಲ್ಲಿ ಬಹುತೇಕ ಎಲ್ಲಾ ಸಂಘ-ಸAಸ್ಥೆಗಳು ಭಾಗಿಯಾಗುತ್ತಿರುವುದು ಉತ್ತಮ ಬೆಳವಣಿಗೆ. ಎಲ್ಲರೂ ಕಿರಿಯರಂತೆ ಉತ್ಸಾಹದಿಂದ ಸೈಕಲ್ ಮಾಡುವುದರೊಂದಿಗೆ ಇಲಾಖೆಯ ಎಲ್ಲಾ ಕಾರ್ಯಕ್ರಮಗಳಲ್ಲಿ ಭಾಗವಹಿಸುತ್ತಿರುವುದು ಕೊಡಗಿನ ಜನತೆಯ ವಿಶೇಷತೆ ಎಂದು ಶ್ಲಾಘನೆ ವ್ಯಕ್ತಪಡಿಸಿದರು.
ಮಾದಕ ದ್ರವ್ಯದ ದುಷ್ಪರಿಣಾಮದ ಬಗ್ಗೆ ಈ ವಾರವಿಡೀ ವಿವಿಧ ಶಾಲಾ ಕಾಲೇಜುಗಳಲ್ಲಿ ಇಲಾಖೆಯ ವತಿಯಿಂದ ಜಾಗೃತಿ ಮೂಡಿಸುತ್ತಿದ್ದು, ಇದಕ್ಕೆಯೂ ಒಳ್ಳೆಯ ಪ್ರತಿಕ್ರಿಯೆ ಇದೆ. ವೈದ್ಯರು ಹಾಗೂ ಕೌನ್ಸಿಲರ್‌ಗಳು ಭಾಗಿಯಾಗಿ ಜಾಗೃತಿ ಅಭಿಯಾನಕ್ಕೆ ಸ್ಪಂದಿಸುತ್ತಿದ್ದಾರೆ ಎಂದರು.
ಜಿಲ್ಲಾ ಪಂಚಾಯಿತಿ ಸಿ.ಇ.ಒ ಆನಂದ್ ಪ್ರಕಾಶ್ ಮೀನಾ ಅವರು ಮಾತನಾಡಿ, ಪ್ರತಿನಿತ್ಯ ಮಾದಕ ದ್ರವ್ಯದ ದುಷ್ಪರಿಣಾಮ ಕುರಿತು ಸುದ್ದಿ ಕೇಳುತ್ತಲೇ ಇರುತ್ತೇವೆ. ಜಾಗೃತಿ ಕಾರ್ಯಕ್ರಮಗಳ ಮೂಲಕ ಡ್ರಗ್ಸ್ ಅನ್ನು ಸಂಪೂರ್ಣವಾಗಿ ನಿಷೇಧಿಸುವಂತಾಗಬೇಕೆAದರು.
ಮಡಿಕೇರಿ ವಲಯ ಅರಣ್ಯ ಸಂರಕ್ಷಣಾಧಿಕಾರಿ ಅಭಿಷೇಕ್ ಅವರು ಮಾತನಾಡಿ, ಮಳೆಯಲ್ಲಿಯೂ ಅಧಿಕ ಸಂಖ್ಯೆಯಲ್ಲಿ ಸಾರ್ವಜನಿಕರು ಜಾಥಾದಲ್ಲಿ ಭಾಗಿಯಾಗಿರುವುದು ಉತ್ತಮ. ಜಿಲ್ಲೆಯಲ್ಲಿ ಡ್ರಗ್ಸ್ ಉತ್ಪಾದನೆ ಹಾಗೂ ಸರಬರಾಜು ನಿಲ್ಲಿಸಲು ಪೊಲೀಸ್ ಇಲಾಖೆ ಶ್ರಮಪಡುತ್ತಿದೆ. ಎಲ್ಲರೂ ಇದಕ್ಕೆ ಸಹಕಾರ ನೀಡಬೇಕು ಎಂದರು.
ಶಕ್ತಿ ಪತ್ರಿಕೆಯ ಸಲಹಾ ಸಂಪಾದಕ ಬಿ.ಜಿ ಅನಂತಶಯನ ಅವರು ಮಾತನಾಡಿ, ಸಾರ್ವಜನಿಕರೊಂದಿಗೆ ಸೇರಿ ಈ ರೀತಿ ಕಾರ್ಯಕ್ರಮ ಮಾಡಿದರೆ ಅರ್ಥಪೂರ್ಣವಾಗಲಿದೆ. ನಿಮಗೆ ಪರಿಚಯವಿರುವವರು ಮಾದಕ ವ್ಯಸನದಲ್ಲಿ ತೊಡಗಿದ್ದರೆ ಬುದ್ಧಿವಾದ ಹೇಳಿ ಸರಿದಾರಿ ತೋರಬೇಕು, ವ್ಯಸನದಿಂದ ದೂರ ಇರಬೇಕು ಎಂದು ಕರೆಕೊಟ್ಟರು.
ಕ್ಲೀನ್ ಕೂರ್ಗ್ನ ಅರುಣ್ ಅಪ್ಪಚ್ಚು ಮಾತನಾಡಿ, ಜಾಥಾದಲ್ಲಿ ಈ ವರ್ಷ ಅತಿ ಹೆಚ್ಚು ಮಂದಿ ಸೇರಿರುವುದು ಉತ್ತಮ ಬೆಳವಣಿಗೆ. ಮಾದಕ ವ್ಯಸನ ತಡೆಗೆ ಪೊಲೀಸ್ ಇಲಾಖೆ ಹಮ್ಮಿಕೊಂಡಿರುವ ೪ಐದನೇ ಪುಟಕ್ಕೆ
ಈ ಜಾಥಾ ಅರ್ಥಪೂರ್ಣ ಎಂದರು. ಕೊಡಗು ಜಿಲ್ಲೆ ಸುಂದರವಾದ ಜಿಲ್ಲೆಯಾಗಿದ್ದು, ಇಲ್ಲಿನ ಸ್ವಚ್ಛತೆ ಕಾಪಾಡಲು ಎಲ್ಲರೂ ಕೈಜೋಡಿಸಬೇಕೆಂದರು. ಹಾಗೆಯೇ ಟ್ರಾಫಿಕ್, ಪಾರ್ಕಿಂಗ್ ಸಮಸ್ಯೆ ಬಗೆಹರಿಸಲು ಯುವಕರು ಸೈಕಲ್ ಅನ್ನು ಉಪಯೋಗಿಸಿವಂತೆ ಕರೆ ನೀಡಿದರು.
ಕಾರ್ಯಕ್ರಮವನ್ನು ಹರ್ಷಿತಾ ಶೆಟ್ಟಿ ನಿರೂಪಿಸಿದರು. ಮಡಿಕೇರಿ ಗ್ರಾಮಾಂತರ ಠಾಣೆ ಇನ್ಸ್ಪೆಕ್ಟರ್ ಚಂದ್ರಶೇಖರ್ ವಂದಿಸಿದರು. ಪುಟಾಣಿ ನಿಶ್ಮಾ ಖಲೀಲ್ ಡ್ರಗ್ಸ್ ದುಷ್ಪರಿಣಾಮದ ಬಗ್ಗೆ ಭಿತ್ತಿಪತ್ರ ಹಿಡಿದು ನಂತರ ಜಾಗೃತಿ ಮೂಡಿಸಿ ಗಮನ ಸೆಳೆದಳು.