ಮಡಿಕೇರಿ, ಜೂ. ೨೭ : ಆದರ್ಶ ಆಡಳಿತಗಾರ ನಾಡಪ್ರಭು ಕೆಂಪೇಗೌಡರು ಬೆಂಗಳೂರನ್ನು ಮಾದರಿ ನಗರವನ್ನಾಗಿ ನಿರ್ಮಿಸಿದ್ದರು, ಆದರೆ ಇಂದು ಬೆಂಗಳೂರು ಮಿತಿಮೀರಿ ಬೆಳೆದಿದ್ದು, ಸುಸ್ಥಿರ ಅಭಿವೃದ್ಧಿಗೆ ಮತ್ತಷ್ಟು ಒತ್ತು ನೀಡಬೇಕಿದೆ ಎಂದು ಮಡಿಕೇರಿ ಶಾಸಕ ಡಾ. ಮಂತರ್ ಗೌಡ ಅಭಿಪ್ರಾಯ ವ್ಯಕ್ತಪಡಿಸಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ನಗರದ ಗಾಂಧಿ ಭವನದಲ್ಲಿ ಶನಿವಾರ ನಡೆದ ಕೆಂಪೇಗೌಡರ ಜಯಂತಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಕೆಂಪೇಗೌಡರು ಅಂದಿನ ಆಡಳಿತ ಅವಧಿಯಲ್ಲಿ ಬೆಂಗಳೂರು ಪ್ರಾಂತ್ಯದಲ್ಲಿ ನೂರಾರು ಕೆರೆ-ಕಟ್ಟೆಗಳನ್ನು ನಿರ್ಮಿಸಿ ಕುಡಿಯುವ ನೀರಿನ ಸಮಸ್ಯೆ ಉಂಟಾಗದAತೆ ನೋಡಿಕೊಂಡಿದ್ದರು, ಆದರೆ ಇಂದು ಬೆಂಗಳೂರಿನಲ್ಲಿ ಹೆಚ್ಚಿನ ವೇಗದ ಬೆಳವಣಿಗೆಯಿಂದ ಸುಸ್ಥಿರ ಅಭಿವೃದ್ಧಿ ಆಗುತ್ತಿದೆಯೇ ಎಂಬ ಬಗ್ಗೆ ಯೋಚಿಸಬೇಕಿದೆ.

ರಾಜ್ಯದ ಮಲೆನಾಡು ಭಾಗದಲ್ಲಿ, ಅದರಲ್ಲೂ ಕೊಡಗು ಜಿಲ್ಲೆಯಲ್ಲಿ ಹೆಚ್ಚಿನ ಮಳೆಯಾದಲ್ಲಿ ಇಡೀ ನಾಡಿಗೆ ಹಾಗೂ ದಕ್ಷಿಣ ಭಾರತಕ್ಕೆ ಸುಭಿಕ್ಷೆ ಉಂಟಾಗಲಿದೆ. ಆದ್ದರಿಂದ ಬೆಂಗಳೂರಿನ ಅಭಿವೃದ್ಧಿಯಲ್ಲಿ ಶೇ.೧ ರಷ್ಟು ಪಾಲನ್ನು ಕೊಡಗು ಜಿಲ್ಲೆಗೆ ನೀಡುವಂತಾಗಬೇಕು. ಆ ನಿಟ್ಟಿನಲ್ಲಿ ಬೆಂಗಳೂರು ನಗರ ಅಭಿವೃದ್ಧಿ ಸಚಿವರ ಜೊತೆ ಚರ್ಚಿಸಲಾಗಿದೆ ಎಂದು ಶಾಸಕರು ವಿವರಿಸಿದರು. ಕೆಂಪೇಗೌಡರ ಜಯಂತಿಯನ್ನು ಒಕ್ಕಲಿಗರ ಸಂಘದಿAದ ತಾಲೂಕು ಮಟ್ಟದಲ್ಲಿಯೂ ಆಯೋಜಿಸುವಂತೆ ಶಾಸಕರು ಸಲಹೆ ನೀಡಿದರು.

ಜಿಲ್ಲಾ ಕೇಂದ್ರ ಮಡಿಕೇರಿ ಹಾಗೂ ತಾಲೂಕು ಕೇಂದ್ರ ಕುಶಾಲನಗರದಲ್ಲಿ ಒಕ್ಕಲಿಗರ ಸಂಘಕ್ಕೆ ಜಾಗ ಒದಗಿಸುವುದು ಮತ್ತು ಭವನ ನಿರ್ಮಾಣಕ್ಕೆ ಪ್ರಯತ್ನಿಸಲಾಗುವುದು, ಜೊತೆಗೆ ಸೋಮವಾರಪೇಟೆಯ ಒಕ್ಕಲಿಗರ ಸಂಘಕ್ಕೆ ೫೦ ಲಕ್ಷ ರೂ ಅನುದಾನ, ಕುವೆಂಪು ಶಾಲೆ ಅಭಿವೃದ್ಧಿಗೆ ಅಗತ್ಯ ಸಹಕಾರ ನೀಡಲಾಗುವುದು, ಕೊಡಗು ಗೌಡ ವಿದ್ಯಾ ಸಂಘಕ್ಕೆ ರೂ. ೨೫ ಲಕ್ಷ ಬಿಡುಗಡೆ ಮಾಡಿಸಲಾಗುವುದು, ಗುಡ್ಡೆಮನೆ ಅಪ್ಪಯ್ಯ ಗೌಡರ ಪ್ರತಿಮೆ ಬಳಿ ಉದ್ಯಾನವನ ಅಭಿವೃದ್ಧಿಗೆ ೪ಐದನೇ ಪುಟಕ್ಕೆ

(ಮೊದಲ ಪುಟದಿಂದ) ಅನುದಾನ ನೀಡಲಾಗುವುದು ಎಂದು ಡಾ. ಮಂತರ್ ಗೌಡ ಇದೇ ಸಂದರ್ಭದಲ್ಲಿ ತಿಳಿಸಿದರು.

ಕೊಡಗು ಜಿಲ್ಲಾ ಒಕ್ಕಲಿಗರ ಸಂಘದ ಅಧ್ಯಕ್ಷ ಎಸ್.ಎಂ. ಚಂಗಪ್ಪ ಮಾತನಾಡಿ ಆದರ್ಶ ಆಡಳಿತಗಾರ ಕೆಂಪೇಗೌಡರAತೆ ಪ್ರತಿಯೊಬ್ಬರಲ್ಲಿಯೂ ದೂರದೃಷ್ಟಿ ಇರಬೇಕು. ಈಗ ಗ್ರೇಟರ್ ಬೆಂಗಳೂರು ವ್ಯಾಪ್ತಿಯಲ್ಲಿ ೩೨ ಶಾಸಕರು, ಹಲವರು ಎಂ.ಪಿಗಳು ಇದ್ದು ಅವರು ಬೆಂಗಳೂರು ಅಭಿವೃದ್ದಿಗೆ ಶ್ರಮಿಸಲಿದ್ದಾರೆ. ಸದ್ಯ ಶ್ರೀರಂಗಪಟ್ಟಣ-ಗುಡ್ಡೆ ಹೊಸೂರು ರಾಷ್ಟಿçÃಯ ಮಾರ್ಗದಲ್ಲಿ ಹೆದ್ದಾರಿ ಕೆಲಸ ನಡೆಯುತ್ತಿದ್ದು, ಗುಡ್ಡೆ ಹೊಸೂರಿನಿಂದ ಮಡಿಕೇರಿವರೆಗೆ ವಾಹನ ದಟ್ಟಣೆ  ಹೆಚ್ಚಾಗಿ ಸಮಸ್ಯೆಗಳು ಸೃಷ್ಟಿಯಾಗುವ ಸಾಧ್ಯತೆ ಇದ್ದು, ಈ ಬಗ್ಗೆ ಚರ್ಚಿಸಬೇಕಿದೆ ಎಂದರು.

ಅರಣ್ಯವೂ ಉಳಿಯಬೇಕು, ಅಭಿವೃದ್ಧಿಯೂ ಆಗಬೇಕು. ಆ ನಿಟ್ಟಿನಲ್ಲಿ ಚಿಂತಿಸಬೇಕು ಎಂದರು.

ಕೊಡಗು ಗೌಡ ಸಮಾಜಗಳ ಒಕ್ಕೂಟದ ಅಧ್ಯಕ್ಷ ಆನಂದ್ ಕರಂದ್ಲಾಜೆ ಮಾತನಾಡಿ ಕೆಂಪೇಗೌಡರು ತಮ್ಮ ಆಡಳಿತ ಅವಧಿಯಲ್ಲಿ ನಾಡನ್ನು ಕಟ್ಟಲು ಶ್ರಮಿಸಿದ್ದಾರೆ. ಇವರ ಪ್ರತಿಮೆಯನ್ನು ಮಡಿಕೇರಿ ಅಥವಾ ಕುಶಾಲನಗರದಲ್ಲಿ ನಿರ್ಮಿಸುವಂತಾಗಬೇಕು ಎಂದು ಕೋರಿದರು.

ರಾಜ್ಯ ಒಕ್ಕಲಿಗರ ಸಂಘದ ನಿರ್ದೇಶಕ ಹರಪಳ್ಳಿ ರವೀಂದ್ರ ಮಾತನಾಡಿ ನಾಡಪ್ರಭು ಕೆಂಪೇಗೌಡರು ಬೆಂಗಳೂರು ಅಭಿವೃದ್ಧಿಗೆ ತಮ್ಮದೇ ಆದ ಕೊಡುಗೆ ನೀಡಿದ್ದು, ೬೩ ಪೇಟೆಗಳು, ೩೦೦ಕ್ಕೂ ಹೆಚ್ಚು ಕೆರೆಗಳನ್ನು ನಿರ್ಮಿಸಿದ್ದರು ಎಂದು ತಿಳಿಸಿದರು.

ಉಪ ವಿಭಾಗಾಧಿಕಾರಿ ನಿತಿನ್ ಚಕ್ಕಿ ಮಾತನಾಡಿ ಹಲವು ಅಭಿವೃದ್ಧಿ ಹೊಂದಿದ ನಗರಗಳು ನದಿ ಹಾಗೂ ಸಮುದ್ರದ ಬಳಿ ಇವೆ. ಆದರೆ ಬೆಂಗಳೂರು ನದಿ, ಸಮುದ್ರದ ಬಳಿ ಇಲ್ಲದೆಯೂ ಕೆಂಪೇಗೌಡರು ಕಟ್ಟಿದ ಕೆರೆ ಕಟ್ಟೆಗಳಿಂದ ಅಭಿವೃದ್ಧಿ ಹೊಂದಿದೆ ಎಂದರೆ ಅತಿಶಯೋಕ್ತಿಯಲ್ಲ ಎಂದರು.

ನಿವೃತ್ತ ಪ್ರಾಂಶುಪಾಲ ಸಿ.ಬಿ. ರಾಮಚಂದ್ರ ಮಾತನಾಡಿ ಕೆಂಪೇಗೌಡರ ಶಿಸ್ತು, ಸಮಯ ಪ್ರಜ್ಞೆ ಮತ್ತು ದೂರದೃಷ್ಟಿಯಿಂದ ಬೆಂಗಳೂರು ನಗರ ವಿಶ್ವ ಮಟ್ಟದಲ್ಲಿ ಅಭಿವೃದ್ಧಿ ಕಂಡಿದೆ ಎಂದರು.

ಕೊಡಗು ಗೌಡ ಸಮಾಜದ ಮಡಿಕೇರಿ ತಾಲೂಕು ಅಧ್ಯಕ್ಷ ಡಿ.ಎಸ್. ಆನಂದ ಮಾತನಾಡಿ ಕೆಂಪೇಗೌಡರAತೆ ಮುಂದಾಲೋಚನೆ ಇರಬೇಕು. ಕೆರೆಕಟ್ಟೆಗಳನ್ನು ಉಳಿಸಬೇಕು, ಗಿಡ ಮರಗಳನ್ನು ಬೆಳೆಸಬೇಕು ಎಂದು ಹೇಳಿದರು.

ಮಡಿಕೇರಿ ತಾಲೂಕು ಒಕ್ಕಲಿಗರ ಸಂಘದ ಅಧ್ಯಕ್ಷ ವಿ.ಜಿ. ಮೋಹನ್ ಮಾತನಾಡಿ ಆದರ್ಶ ಆಡಳಿತಗಾರ ಕೆಂಪೇಗೌಡರು ಕನ್ನಡ ಭಾಷೆ ಬೆಳವಣಿಗೆಗೆ ಶ್ರಮಿಸಿದ್ದಾರೆ ಎಂದರು.

ಕೊಡಗು ಗೌಡ ವಿದ್ಯಾ ಸಂಘದ ಅಧ್ಯಕ್ಷ ಅಂಬೆಕಲ್ಲು ನವೀನ್ ಮಾತನಾಡಿದರು.

ನಾಡಪ್ರಭು ಕೆಂಪೇಗೌಡರ ಜೀವನ ಚರಿತ್ರೆ ಕುರಿತು ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಗೆ ಏರ್ಪಡಿಸಲಾಗಿದ್ದ ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪತ್ರವನ್ನು ಶಾಸಕರು ವಿತರಿಸಿದರು.

ಸರ್ವೋದಯ ಸಮಿತಿ ಅಧ್ಯಕ್ಷ ಅಂಬೆಕಲ್ಲು ಕುಶಾಲಪ್ಪ, ಪ್ರಮುಖರಾದ ಶಾಂತಳ್ಳಿ ಲೋಕೇಶ್, ಸೂರ್ತಲೆ ಸೋಮಣ್ಣ, ಗಣಿ ಪ್ರಸಾದ್, ವಿ.ಪಿ.ಸುರೇಶ್, ಅನಿಲ್ ಎಚ್.ಟಿ, ಶಿರಸ್ತೆದಾರರಾದ ದೇವರಾಜು ಇತರರು ಇದ್ದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಕುಮಾರ ಸ್ವಾಗತಿಸಿದರು, ಬ್ಲಾಸಂ ಶಾಲೆಯ ವಿದ್ಯಾರ್ಥಿನಿಯರು ನಾಡಗೀತೆ ಹಾಡಿದರು, ಮಣಜೂರು ಮಂಜುನಾಥ್ ನಿರೂಪಿಸಿ, ವಂದಿಸಿದರು.