ವೀರಾಜಪೇಟೆ, ಜೂ. ೨೮: ವಿದ್ಯಾರ್ಥಿಗಳು ದುಶ್ಚಟಗಳಿಗೆ ಬಲಿಯಾಗದೆ ಆರೋಗ್ಯವಂತ ಸಮಾಜವನ್ನು ನಿರ್ಮಿಸಬೇಕು. ಅದಕ್ಕಾಗಿ ಮಾದಕ ದ್ರವ್ಯಗಳ ವಿರುದ್ಧ ಯುದ್ಧ ಸಾರಬೇಕಿದೆ ಎಂದು ವೀರಾಜಪೇಟೆ ಉಪವಿಭಾಗದ ಡಿವೈಎಸ್ಪಿ ಮಹೇಶ್ ಕುಮಾರ್ ಹೇಳಿದರು.
ಕೊಡಗು ಜಿಲ್ಲಾ ಪೊಲೀಸ್ ಇಲಾಖೆ, ವೀರಾಜಪೇಟೆ ಪೊಲೀಸ್ ಠಾಣೆ ಹಾಗೂ ಸಂತ ಅನ್ನಮ್ಮ ಪದವಿಪೂರ್ವ ಕಾಲೇಜಿನ ಸಹಯೋಗದಲ್ಲಿ ಕಾಲೇಜಿನ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಮಾದಕ ವಸ್ತುಗಳ ಸೇವನೆಯ ಕುರಿತ ಜಾಗೃತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಉತ್ತಮ ಹವ್ಯಾಸಗಳನ್ನು ಬೆಳೆಸಿಕೊಳ್ಳಲು ವಿದ್ಯಾರ್ಥಿಗಳು ಉತ್ತಮ ಸ್ನೇಹಿತರ ಗೆಳೆತನವನ್ನು ಮಾಡಬೇಕು ಎಂದು ಹೇಳಿದರು.
ಪೊಲೀಸ್ ಇಲಾಖೆಯ ವತಿಯಿಂದ ಸನ್ಮಿತ್ರ ಕಾರ್ಯಯೋಜನೆಯನ್ನು ಹಮ್ಮಿಕೊಂಡಿದ್ದು ಡ್ರಗ್ಸ್ ನಿರ್ಮೂಲನೆಗೆ ಸಹಕಾರಿಯಾಗಿದೆ ಎಂದರು. ಜಿಲ್ಲಾ ಪೊಲೀಸ್ ಇಲಾಖೆಯ ಕ್ರೆöÊಂ ವಿಭಾಗದ ಅಧಿಕಾರಿ ಸಚಿನ್ ಮಾತನಾಡಿ, ಡ್ರಗ್ಸ್ ಸೇವನೆಯು ಒಂದು ಪಿಡುಗಾಗಿದ್ದು ಅದನ್ನು ನಿಯಂತ್ರಣ ಮಾಡದಿದ್ದರೆ ಸಮಾಜ ಹಾಗೂ ರಾಷ್ಟçಕ್ಕೆ ಆಪತ್ತು ಎಂದು ಹೇಳಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸಂತ ಅನ್ನಮ್ಮ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಮದಲೈ ಮುತ್ತು ಮಾತನಾಡಿ, ಯುವಜನರು ಮಾದಕ ವಸ್ತುಗಳ ಸೇವನೆಗೆ ಬಲಿಯಾಗದೆ ಸ್ವಾಸ್ತö್ಯ ಸಮಾಜವನ್ನು ನಿರ್ಮಾಣ ಮಾಡಬೇಕು. ಆರೋಗ್ಯವನ್ನು ಕಾಪಾಡಿಕೊಳ್ಳುವುದರ ಜೊತೆಗೆ ದೈಹಿಕವಾಗಿ ಹಾಗೂ ಮಾನಸಿಕವಾಗಿ ಸದೃಢರಾಗಿ ಎಂದು ಹೇಳಿದರು. ಪೊಲೀಸ್ ಇಲಾಖೆಯ ವತಿಯಿಂದ ಇಂದು ಆಯೋಜಿಸಲಾದ ಜಾಗೃತಿ ಕಾರ್ಯಕ್ರಮವು ಅತ್ಯಂತ ಮಹತ್ವದ್ದಾಗಿದ್ದು ವಿದ್ಯಾರ್ಥಿಗಳು ಅದನ್ನು ಅರಿತು ಇತರರಲ್ಲಿಯೂ ಜಾಗೃತಿ ಮೂಡಿಸಿ ಎಂದು ಕರೆ ನೀಡಿದರು.
ಈ ಸಂದರ್ಭ ಡ್ರಗ್ಸ್ ಜಾಗೃತಿಯ ಘೋಷಣಾ ಫಲಕಗಳನ್ನು ಹಿಡಿದು ವಿದ್ಯಾರ್ಥಿಗಳು ಡ್ರಗ್ಸ್ ಮುಕ್ತ ಸಮಾಜ ನಿರ್ಮಿಸುವುದಾಗಿ ಘೋಷಣೆಯನ್ನು ಮಾಡಿದರು. ವೇದಿಕೆಯಲ್ಲಿ ವೀರಾಜಪೇಟೆ ಪೊಲೀಸ್ ವೃತ್ತ ನಿರೀಕ್ಷಕ ಪಿ. ಅನೂಪ್ ಮಾದಪ್ಪ, ನಗರ ಪೊಲೀಸ್ ಠಾಣಾಧಿಕಾರಿ ಪ್ರಮೋದ್, ಅಪರಾಧ ವಿಭಾಗದ ಠಾಣಾಧಿಕಾರಿ ಕಾವೇರಪ್ಪ, ಗ್ರಾಮಾಂತರ ಪೊಲೀಸ್ ಠಾಣಾಧಿಕಾರಿ ಲತಾ ಉಪಸ್ಥಿತರಿದ್ದರು. ಉಪನ್ಯಾಸಕ ವಿವೇಕ್ ಸ್ವಾಗತಿಸಿ, ನಿರೂಪಿಸಿದರು. ಈ ಸಂದರ್ಭ ಉಪನ್ಯಾಸಕರು, ಪೊಲೀಸ್ ಇಲಾಖೆಯ ಸಿಬ್ಬಂದಿಗಳು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.