ಮಡಿಕೇರಿ, ಜೂ. ೨೮: ಕೊಡಗು ಜಿಲ್ಲೆಯ ಹಿಂದುಳಿದ ವರ್ಗಗಳಿಗೆ ಸೇರಿದ ಅರ್ಹ ಕಾನೂನು ಪದವೀಧರರಿಗೆ ೨೦೨೬-೨೭ನೇ ಸಾಲಿಗೆ ನ್ಯಾಯಾಂಗ ಆಡಳಿತದಲ್ಲಿ ತರಬೇತಿ ನೀಡಲು ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಈ ನಿಬಂಧನೆಗೊಳಪಟ್ಟಿರಬೇಕು.
ಕಾನೂನು ತರಬೇತಿ ಪಡೆಯಲು ಇರಬೇಕಾದ ಅರ್ಹತೆ ಹಾಗೂ ನಿಬಂಧನೆಗಳು: ಸರ್ಕಾರದ ಆದೇಶದಂತೆ ಅಭ್ಯರ್ಥಿಗಳು ವರ್ಗ- ೧ ಮತ್ತು ಪ್ರವರ್ಗ-೨ಎ, ೩ಎ, ೩ಬಿ ಗೆ ಸೇರಿದವರಾಗಿರಬೇಕು. ಕುಟುಂಬದ ವಾರ್ಷಿಕ ಆದಾಯದ ಮಿತಿ ಪ್ರವರ್ಗ-೧ರ ಅಭ್ಯರ್ಥಿಗಳಿಗೆ ರೂ. ೩.೫೦ ಲಕ್ಷ ಹಾಗೂ ಪ್ರವರ್ಗ-೨ಎ, ೩ಎ, ೩ಬಿ ಗೆ ಸೇರಿದ ಅಭ್ಯರ್ಥಿಗಳಿಗೆ ರೂ. ೨.೫೦ ಲಕ್ಷ ಒಳಪಟ್ಟಿರಬೇಕು. ಪ್ರವರ್ಗ-೧ ರ ಅಭ್ಯರ್ಥಿಗಳಿಗೆ ಪ್ರಥಮ ಆದ್ಯತೆ ನೀಡಲಾಗುವುದು. ಪ್ರವರ್ಗ-೧ರ ಅಭ್ಯರ್ಥಿಗಳ ಕೊರತೆ ಇದ್ದಲ್ಲಿ ಸರ್ಕಾರದ ಆದೇಶದನ್ವಯ ನಿಯಮಾನುಸಾರ ಇತರೆ ವರ್ಗಗಳಲ್ಲಿ ಆಯ್ಕೆ ಮಾಡಲಾಗುವುದು. ಅರ್ಜಿಯನ್ನು ಸ್ವೀಕರಿಸುವ ಕೊನೆಯ ದಿನಾಂಕಕ್ಕೆ ಅಭ್ಯರ್ಥಿಯು ಕಾನೂನು ಪದವಿ ಪಡೆದು ೨ ವರ್ಷದ ಒಳಗಿರಬೇಕು. ಅರ್ಜಿ ಸಲ್ಲಿಸುವ ಕೊನೆಯ ದಿನಾಂಕಕ್ಕೆ ಅರ್ಜಿದಾರರ ವಯಸ್ಸು ಪ್ರವರ್ಗ-೧ರ ಅಭ್ಯರ್ಥಿಗಳಿಗೆ ೪೦ ವರ್ಷದೊಳಗಿರಬೇಕು, ಪ್ರವರ್ಗ ೨ಎ, ೩ಎ, ೩ಬಿ ರ ಅಭ್ಯರ್ಥಿಗಳಿಗೆ ೩೮ ವರ್ಷದೊಳಗಿರಬೇಕು.
ಅಭ್ಯರ್ಥಿಯು ತನ್ನ ಹೆಸರನ್ನು ಬಾರ್ ಕೌನ್ಸಿಲ್‌ನಲ್ಲಿ ನೋಂದಾಯಿಸಿರಬೇಕು. ಕಾನೂನು ತರಬೇತಿಯು ೪ ವರ್ಷಗಳ ಅವಧಿಯಾಗಿದ್ದು ಮಾಸಿಕ ರೂ. ೪ ಸಾವಿರದಂತೆ ಶಿಷ್ಯವೇತನ ನೀಡಲಾಗುತ್ತದೆ. ಕಾನೂನು ತರಬೇತಿಯನ್ನು ಕೊಡಗು ಜಿಲ್ಲೆಯಿಂದ ಹಿಂದುಳಿದ ವರ್ಗಗಳ ೧೦ ಅಭ್ಯರ್ಥಿಗಳಿಗೆ ನೀಡಲು ಅವಕಾಶವಿದೆ.
ಆಯ್ಕೆಯಾದ ಅಭ್ಯರ್ಥಿಯು ವಕೀಲ ತರಬೇತಿಗೆ ಹೋಗುವ ಮುನ್ನ, ತರಬೇತಿಯನ್ನು ಮಧ್ಯದಲ್ಲಿ ಬಿಟ್ಟಲ್ಲಿ ತರಬೇತಿ ವೆಚ್ಚಕ್ಕೆ ಶೇ. ೧೦ ರಂತೆ ಬಡ್ಡಿ ಸೇರಿಸಿ ಸರ್ಕಾರಕ್ಕೆ ಪಾವತಿ ಮಾಡುತ್ತೇನೆಂದು ರೂ. ೧೦೦/-ರ ಛಾಪಾ ಕಾಗದದಲ್ಲಿ ಬರೆದುಕೊಡತಕ್ಕದ್ದು.
ಅರ್ಜಿ ನಮೂನೆಯನ್ನು ಸಹಿದಾರರ ಕಚೇರಿಯಿಂದ ಪಡೆದು ಜುಲೈ ೨೧ ರೊಳಗಾಗಿ ಕಚೇರಿ ವೇಳೆಯಲ್ಲಿ ಸಲ್ಲಿಸುವುದು. ಹೆಚ್ಚಿನ ಮಾಹಿತಿಗೆ ಜಿಲ್ಲಾ ಅಧಿಕಾರಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ದೇವರಾಜ ಅರಸು ಭವನ, ಜನರಲ್ ತಿಮ್ಮಯ್ಯ ಕ್ರೀಡಾಂಗಣ, ಮ್ಯಾನ್ಸ್ ಕಾಂಪೌAಡ್ ಹತ್ತಿರ, ಮಡಿಕೇರಿ ಇವರನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದಾಗಿದೆ. ದೂರವಾಣಿ ಸಂಖ್ಯೆ: ೦೮೨೭೨-೨೯೫೬೨೮ನ್ನು ಸಂಪರ್ಕಿಸಬಹುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ದೀಪಕ್ ತಿಳಿಸಿದ್ದಾರೆ.
ಸಿಬ್ಬಂದಿಯ ನೇಮಕಾತಿಗಾಗಿ ತಾತ್ಕಾಲಿಕವಾಗಿ ಭರ್ತಿ ಮಾಡಲು
ಕುಶಾಲನಗರದ ಸರ್ಕಾರಿ ಮಾದರಿ ಪ್ರಾಥಮಿಕ (ಪಿಎಂಶ್ರೀ) ಶಾಲೆಗೆ ೨೦೨೬-೨೭ನೇ ಸಾಲಿಗೆ ಕಂಪ್ಯೂಟರ್ ಶಿಕ್ಷಕರು, ಯೋಗ ಮತ್ತು ಕರಾಟೆ ಶಿಕ್ಷಕರು, ಸಂಗೀತ ಮತ್ತು ನೃತ್ಯ ಶಿಕ್ಷಕರು ಹಾಗೂ ಭದ್ರತಾ ಸಿಬ್ಬಂದಿಯ ನೇಮಕಾತಿಗಾಗಿ ತಾತ್ಕಾಲಿಕವಾಗಿ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಕಂಪ್ಯೂಟರ್ ಶಿಕ್ಷಕರ ವಿದ್ಯಾರ್ಹತೆ ಬಿಸಿಎ/ಬಿಎಸ್‌ಸಿ, ಬಿಟೆಕ್/ಬಿಇ(ಐಟಿ/ಸಿಎಸ್/ಡಿಪ್ಲೋಮಾ) ಹೊಂದಿರಬೇಕು, ಯೋಗ, ಕರಾಟೆ, ಸಂಗೀತ ಮತ್ತು ನೃತ್ಯ ಶಿಕ್ಷಕರು ಮಾನ್ಯತೆ ಪಡೆದ ಸಂಸ್ಥೆಗಳಿAದ ತರಬೇತಿ ಹೊಂದಿರಬೇಕು.
ಆಸಕ್ತ ಅಭ್ಯರ್ಥಿಗಳು ತಮ್ಮ ವಿದ್ಯಾರ್ಹತೆಯ ಮೂಲ ದಾಖಲೆಗಳೊಂದಿಗೆ ಶಾಲಾ ಕಚೇರಿಗೆ ಖುದ್ದಾಗಿ ಭೇಟಿ ನೀಡಬೇಕು. ಆಯ್ಕೆಯಾದ ಅಭ್ಯರ್ಥಿಗಳಿಗೆ ಸರ್ಕಾರದ ನಿಯಮಾನುಸಾರ ಗೌರವ ಧನವನ್ನು ನೀಡಲಾಗುವುದು. ಅರ್ಜಿ ಸಲ್ಲಿಸಲು ಜುಲೈ ೧ ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗೆ ಮುಖ್ಯ ಶಿಕ್ಷಕರು, ಪಿ.ಎಂ.ಶ್ರೀ ಶಾಲೆ, ಕುಶಾಲನಗರ ಸಂಪರ್ಕಿಸಬಹುದಾಗಿದೆ ಎಂದು ಕುಶಾಲನಗರ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯಿನಿ ಭಾಗ್ಯಮ್ಮ ಕೆ. ತಿಳಿಸಿದ್ದಾರೆ.
ತಾತ್ಕಾಲಿಕವಾಗಿ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ
ಮೂರ್ನಾಡು ಪಿ.ಎಂ.ಶ್ರೀ ಕರ್ನಾಟಕ ಪಬ್ಲಿಕ್ ಶಾಲೆಗೆ ೨೦೨೬-೨೭ನೇ ಸಾಲಿಗೆ ಪೂರ್ವ ಪ್ರಾರ್ಥಮಿಕ ಶಿಕ್ಷಕರು, ಕಂಪ್ಯೂಟರ್ ಶಿಕ್ಷಕರು, ಯೋಗ ಮತ್ತು ಕರಾಟೆ ಶಿಕ್ಷಕರು, ಸಂಗೀತ ಮತ್ತು ನೃತ್ಯ ಶಿಕ್ಷಕರು ಹಾಗೂ ಭದ್ರತಾ ಸಿಬ್ಬಂದಿಯ ನೇಮಕಾತಿಗಾಗಿ ತಾತ್ಕಾಲಿಕವಾಗಿ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಪೂರ್ವ ಪ್ರಾರ್ಥಮಿಕ ಶಿಕ್ಷಕರ ವಿದ್ಯಾರ್ಹತೆ ಮೊಂಟೆಸರಿ/ಡಿಇಡಿ ವಿದ್ಯಾರ್ಹತೆ ಎಸ್‌ಎಸ್‌ಎಲ್‌ಸಿ ಉತ್ತೀರ್ಣ ಹೊಂದಿರಬೇಕು, ಕಂಪ್ಯೂಟರ್ ಶಿಕ್ಷಕರ ವಿದ್ಯಾರ್ಹತೆ ಬಿಸಿಎ/ಬಿಎಸ್‌ಸಿ/ಬಿಟೆಕ್/ಬಿಇ(ಐಟಿ/ಸಿಎಸ್/ಡಿಪ್ಲೋಮ), ಯೋಗ, ಕರಾಟೆ, ಸಂಗೀತ ಮತ್ತು ನೃತ್ಯ ಶಿಕ್ಷಕರು ಮಾನ್ಯತೆ ಪಡೆದ ಸಂಸ್ಥೆಗಳಿAದ ತರಬೇತಿ ಹೊಂದಿರಬೇಕು.
ಆಸಕ್ತ ಅಭ್ಯರ್ಥಿಗಳು ತಮ್ಮ ವಿದ್ಯಾರ್ಹತೆಯ ಮೂಲ ದಾಖಲೆಗಳೊಂದಿಗೆ ಶಾಲಾ ಕಚೇರಿಗೆ ಖುದ್ದಾಗಿ ಭೇಟಿ ನೀಡಬೇಕು. ಆಯ್ಕೆಯಾದ ಅಭ್ಯರ್ಥಿಗಳಿಗೆ ಸರ್ಕಾರದ ನಿಯಮಾನುಸಾರ ಗೌರವಧನ ನೀಡಲಾಗುವುದು. ಅರ್ಜಿ ಸಲ್ಲಿಸಲು ಜುಲೈ ೨, ೨೦೨೬ ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗಾಗಿ ಮುಖ್ಯ ಶಿಕ್ಷಕರು, ಪಿ.ಎಂ.ಶ್ರೀ ಕರ್ನಾಟಕ ಪಬ್ಲಿಕ್ ಶಾಲೆ, ಮೂರ್ನಾಡು ಸಂಪರ್ಕಿಸಬಹುದು ಎಂದು ಮೂರ್ನಾಡು ಪಿ.ಎಂ.ಶ್ರೀ ಕರ್ನಾಟಕ ಪಬ್ಲಿಕ್ ಶಾಲೆಯ ಪ್ರಕಟಣೆ ತಿಳಿಸಿದೆ.