ಮಡಿಕೇರಿ, ಜೂ. ೨೯ : ಸಮಾಜದ ಸ್ವಾಸ್ಥö್ಯ ಮತ್ತು ಸಾಮರಸ್ಯವನ್ನು ಕದಡುತ್ತಿರುವ ಮತಾಂತರ ಚಟುವಟಿಕೆ ಸಾಮಾಜಿಕ ಪಿಡುಗಾಗಿ ಮಾರ್ಪಟ್ಟಿದ್ದು, ಇದರ ನಿರ್ಮೂಲನೆಗೆ ಕೇಂದ್ರ ಸರಕಾರ ಕಠಿಣ ಕಾನೂನು ಜಾರಿಗೆ ತರಬೇಕೆಂದು ಬಿಜೆಪಿ ಎಸ್‌ಟಿ ಮೋರ್ಚಾದ ಕೊಡಗು ಜಿಲ್ಲಾಧ್ಯಕ್ಷ ಎಂ.ಎA.ಪರಮೇಶ್ವರ ಆಗ್ರಹಿಸಿದ್ದಾರೆ.

ಪತ್ರಿಕಾ ಪ್ರಕಟಣೆ ನೀಡಿರುವ ಅವರು ಕುಶಾಲನಗರ ವ್ಯಾಪ್ತಿಯಲ್ಲಿ ಮಹಿಳೆ ಹಾಗೂ ಆಕೆಯ ಪುತ್ರನನ್ನು ಮತಾಂತರ ಮಾಡಿರುವ ಪ್ರಕರಣ ಹೇಯ ಕೃತ್ಯವಾಗಿದ್ದು, ಇದನ್ನು ತೀವ್ರವಾಗಿ ಖಂಡಿಸುವುದಾಗಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.