ಕೂಡಿಗೆ, ಜೂ. ೨೯: ಕುಶಾಲನಗರ ಗ್ರಾಮಾಂತರ ಪೊಲೀಸ್ ಠಾಣೆಯ ವತಿಯಿಂದ ಕೂಡಿಗೆ ಸರ್ಕಾರಿ ಪದವಿಪೂರ್ವ ಕಾಲೇಜಿನ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಸಭಾಂಗಣದಲ್ಲಿ ಅಂತರರಾಷ್ಟಿçÃಯ ಮಾದಕ ದ್ರವ್ಯ ವಿರೋಧಿ ದಿನಾಚರಣೆ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮದಲ್ಲಿ ಕುಶಾಲನಗರ ಗ್ರಾಮಾಂತರ ಠಾಣಾಧಿಕಾರಿ ರಾಮಚಂದ್ರ ಅವರು ಮಾದಕ ದ್ರವ್ಯದಿಂದಾಗುವ ದುಷ್ಪರಿಣಾಮ, ಅನಾಹುತಗಳ ಬಗ್ಗೆ ಯುವಕರು ಎಚ್ಚರಿಕೆಯಿಂದ ಇದ್ದು ಉನ್ನತ ಮಟ್ಟದ ಶಿಕ್ಷಣ ಪಡೆದು ಉತ್ತಮ ಬದುಕನ್ನು ಕಟ್ಟಿಕೊಳ್ಳಬೇಕು ಎಂದರು. ಈ ಸಂದರ್ಭ ಠಾಣೆಯ ಅಪರಾಧ ವಿಭಾಗದ ಠಾಣಾಧಿಕಾರಿ ಸ್ವಾಮಿ, ಪ್ರಾಂಶುಪಾಲ ಹಂಡ್ರAಗಿ ನಾಗರಾಜ್, ಉಪನ್ಯಾಸಕರಾದ ಹೇಮರಾಜ್, ರವೀಶ್, ಸೇರಿದಂತೆ ವಿದ್ಯಾರ್ಥಿಗಳು ಹಾಜರಿದ್ದರು.