ಕುಶಾಲನಗರ, ಜೂ. ೨೯: ಅರಣ್ಯ ಇಲಾಖೆ ಮತ್ತು ಕುಶಾಲನಗರ ಕಾವೇರಿ ಪರಿಸರ ರಕ್ಷಣಾ ಬಳಗ ಆಶ್ರಯದಲ್ಲಿ ತಾ. ೩೦ ರಂದು (ಇಂದು) ವೃಕ್ಷಮಾತೆ ಡಾ. ಸಾಲುಮರ ತಿಮ್ಮಕ್ಕ ಸ್ಮರಣೆ ಮತ್ತು ಪರಿಸರ ಜಾಗೃತಿ ಮಾಹಿತಿ ಕಾರ್ಯಕ್ರಮ ನಡೆಯಲಿದೆ.
ಕುಶಾಲನಗರ ಕೊಪ್ಪ ಗಡಿಭಾಗದ ಕಾವೇರಿ ರೋಟರಿ ಉದ್ಯಾನದಲ್ಲಿ ಬೆಳಿಗ್ಗೆ ೧೧ ಗಂಟೆಗೆ ನಡೆಯುವ ಕಾರ್ಯಕ್ರಮಕ್ಕೆ ಮಡಿಕೇರಿ ವಿಭಾಗದ ಅರಣ್ಯ ಉಪ ಸಂರಕ್ಷಣಾಧಿಕಾರಿ ಅಭಿಷೇಕ್ ವಿ ಅವರು ಚಾಲನೆ ನೀಡುವರು. ಪರಿಸರ ತಜ್ಞ ಭಜನ್ ಬೋಪಣ್ಣ ಪ್ರಕೃತಿ ಸಂರಕ್ಷಣೆಯಲ್ಲಿ ಯುವ ಪೀಳಿಗೆಯ ಪಾತ್ರ ಕುರಿತು ವಿದ್ಯಾರ್ಥಿಗಳೊಂದಿಗೆ ಸಂವಾದ ಕಾರ್ಯಕ್ರಮ ನಡೆಸಲಿದ್ದಾರೆ.
ಕಾವೇರಿ ಪರಿಸರ ರಕ್ಷಣಾ ಬಳಗದ ಸಂಚಾಲಕ ಎಂಎನ್ ಚಂದ್ರಮೋಹನ್ ವೃಕ್ಷ ಮಾತೆ ಡಾ. ಸಾಲುಮರ ತಿಮ್ಮಕ್ಕ ಅವರ ಬಗ್ಗೆ ಉಪನ್ಯಾಸ ನೀಡಲಿದ್ದಾರೆ. ಕಾರ್ಯಕ್ರಮದಲ್ಲಿ ಕುಶಾಲನಗರ ಅರಣ್ಯ ವಲಯ ಅಧಿಕಾರಿ ರಕ್ಷಿತ್, ಪೊಲೀಸ್ ವೃತ್ತ ನಿರೀಕ್ಷಕರಾದ ದಿನೇಶ್ ಕುಮಾರ್, ಕೊಪ್ಪ ಭಾರತ ಮಾತಾ ಕಾಲೇಜು ಪ್ರಾಂಶುಪಾಲರಾದ ಟಿಟ್ಟೋ ಥಾಮಸ್ ಅವರುಗಳು ಪಾಲ್ಗೊಳ್ಳಲಿದ್ದಾರೆ ಎಂದು ಕಾರ್ಯಕ್ರಮ ಸಂಯೋಜಕರಾದ ವನಿತಾ ಚಂದ್ರಮೋಹನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.