ಗುಡ್ಡೆಹೊಸೂರು, ಜೂ.೨೯: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ ಟ್ರಸ್ಟ್ ಸೋಮವಾರಪೇಟೆ ತಾಲೂಕು-ಕುಶಾಲನಗರ ವಲಯದ ಒಕ್ಕೂಟ ಪದಾಧಿಕಾರಿಗಳ ತರಬೇತಿಯನ್ನು ಜಿಲ್ಲಾ ಕಛೇರಿ ಸಭಾಂಗಣದಲ್ಲಿ ಇತ್ತೀಚೆಗೆ ನಡೆಸಲಾಯಿತು.

ಜಿಲ್ಲಾ ನಿರ್ದೇಶಕರಾದ ವಿಠಲ ಸಾಲ್ಯಾನ್ ಅವರು ಮಾತನಾಡಿ, ಶ್ರೀ ಕ್ಷೇತ್ರ ಧರ್ಮಸ್ಥಳದ ಹಿನ್ನೆಲೆ ಮತ್ತು ಪೂಜ್ಯರ ಆಶಯ, ಒಕ್ಕೂಟದ ಪದಾಧಿಕಾರಿಗಳ ನಾಯಕತ್ವ ಗುಣ, ಯೋಜನೆಯ ಕಾರ್ಯಕ್ರಮಗಳ ಅನುಷ್ಠಾನದಲ್ಲಿ ಪದಾಧಿಕಾರಿಗಳ ಭಾಗವಹಿಸುವಿಕೆ, ಯೋಜನೆಯಿಂದ ದೊರೆಯುವ ಪ್ರಯೋಜನಗಳ ಬಗ್ಗೆ ವಿವರಿಸಿದರು.

ತಾಲೂಕು ಯೋಜನಾಧಿಕಾರಿ ಹನುಮಂತಪ್ಪ ಅಂಗಡಿ ಅವರು ನಾಯಕರಲ್ಲಿ ಇರಬೇಕಾದ ಗುಣ, ಇತ್ಯಾದಿಗಳ ಬಗ್ಗೆ ತಿಳಿಸಿದರು.

ಜಿಲ್ಲಾ ಒIS ಯೋಜನಾಧಿಕಾರಿ ಪ್ರವೀಣ್ ಅವರು ಬ್ಯಾಂಕಿAಗ್ ಸೇವೆಗಳ ಬಗ್ಗೆÀ, ಸಾಲ ವಿತರಣೆ, ಉಳಿತಾಯ, ಬಡ್ಡಿ ದರ ಲೆಕ್ಕಾಚಾರ, ಸಾಲ ಮರುಪಾವತಿ ಚೀಟಿ ನಿರ್ವಹಣೆ ಬಗ್ಗೆ ಮಾಹಿತಿ ನೀಡಿದರು. ಮೇಲ್ವಿಚಾರಕರಾದ ಪವಿತ್ರಾಕ್ಷಿ ಅವರು, ಒಕ್ಕೂಟ ಸಭೆಯ ನಿರ್ವಹಣೆ ಮಾಡುವುದರ ಬಗ್ಗೆ ಪ್ರಾತ್ಯಕ್ಷಿಕೆ ನೀಡಿದರು.

ಲೆಕ್ಕಪರಿಶೋಧಕರಾದ ರೂಪ, ಸಂಘಗಳ ಗ್ರೇಡಿಂಗ್ ನಿರ್ವಹಣೆ ಬಗ್ಗೆ ಮಾಹಿತಿ ನೀಡಿದರು. ಒಕ್ಕೂಟದ ದಾಖಲಾತಿ ನಿರ್ವಹಣೆಯ ಬಗ್ಗೆ ಸಿ.ಎಸ್.ಸಿ ಮಾಹಿತಿ ನೀಡಿದರು. ಕೃಷಿ ಮೇಲ್ವಿಚಾರಕರಾದ ಸ್ವಾಮಿ ಅವರು ಯಂತ್ರಶ್ರೀ ಕಾರ್ಯಕ್ರಮ ಹಾಗೂ ಪರಿಸರ ಮಾಹಿತಿ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ನೀಡಿದರು.

ಕುಶಾಲನಗರ ವಲಯ ಮೇಲ್ವಿಚಾರಕರಾದ ಸುಧೀರ್ ನೆಕ್ರಾಜೆ ಕಾರ್ಯಕ್ರಮ ನಿರೂಪಿಸಿದರು. ವಲಯದ ಎಲ್ಲಾ ಸೇವಾ ಪ್ರತಿನಿಧಿಗಳು ಹಾಗೂ ಒಕ್ಕೂಟದ ಪದಾಧಿಕಾರಿಗಳು ತರಬೇತಿಯಲ್ಲಿ ಭಾಗವಹಿಸಿದ್ದರು.