ಕೂಡಿಗೆ, ಜೂ.೨೯ : ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ನ ರಾಜ್ಯ ಸಂಸ್ಥೆಯ ವತಿಯಿಂದ ಉಡುಪಿಯಲ್ಲಿ ಎಸ್ಸೆಸ್ಸೆಲ್ಸಿ ಪ್ರತಿಭಾನ್ವಿತ ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳಿಗೆ ರಾಜ್ಯ ಪುರಸ್ಕಾರ ಪ್ರಶಸ್ತಿ ಪ್ರಧಾನ ಮಾಡಲಾಯಿತು.

ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ರಾಜ್ಯದಲ್ಲಿ ಶೇ.೯೦ ಕ್ಕಿಂತ ಹೆಚ್ಚು ಅಂಕಗಳನ್ನು ಪಡೆದ ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳಿಗೆ ನೀಡಲ್ಪಟ್ಟ ರಾಜ್ಯ ಪುರಸ್ಕಾರಕ್ಕೆ ಕೊಡಗು ಜಿಲ್ಲೆಯಿಂದ ಭಾಜನರಾದ ಕೂಡುಮಂಗಳೂರು ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿನಿ ಬಿ. ದಿಶಾಳಿಗೆ ಸಂಸ್ಥೆಯ ರಾಜ್ಯ ಆಯುಕ್ತರಾದ ಪಿ.ಜಿ.ಆರ್. ಸಿಂಧ್ಯಾ ಅವರು ರಾಜ್ಯ ಪುರಸ್ಕಾರ ನೀಡಿ ಪ್ರಶಸ್ತಿ ಪತ್ರ ವಿತರಿಸಿದರು.

ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ದಿಶಾ ಶೇ.೯೫.೩೬ ರಷ್ಟು ಅಂಕಗಳಿಸಿ ರಾಜ್ಯ ಪ್ರತಿಭಾ ಪುರಸ್ಕಾರದಲ್ಲಿ ಪ್ರಶಸ್ತಿ ಗಳಿಸಿರುವುದಾಗಿ ಶಾಲಾ ಮುಖ್ಯೋಪಾಧ್ಯಾಯ ಟಿ.ಜಿ. ಪ್ರೇಮಕುಮಾರ್ ತಿಳಿಸಿದ್ದಾರೆ.