ಸುಂಟಿಕೊಪ್ಪ, ಜೂ. ೨೯: ಕೊಡಗು ಪತ್ರಕರ್ತರ ಸಂಘದ ಕುಶಾಲನಗರ ತಾಲೂಕು ಘಟಕದಲ್ಲಿ ಹಿರಿಯ ಪತ್ರಕರ್ತರಿಗೆ ಪುಲಿಯಂಡ ರಾಮ್ ದೇವಯ್ಯ ಅವರು ಜ್ಞಾನಗಂಗಾ ಶಾಲೆಯ ಹೆಸರಿನಲ್ಲಿ ಸ್ಥಾಪಿಸಿರುವ ವಾರ್ಷಿಕ ದತ್ತಿ ಪ್ರಶಸ್ತಿಗೆ ಸುಂಟಿಕೊಪ್ಪದ ವರದಿಗಾರ ಎಂ.ಬಿ. ವಿನ್ಸೆಂಟ್ ಭಾಜನರಾಗಿದ್ದಾರೆ.
ಕುಶಾಲನಗರ ತಾಲೂಕು ಪತ್ರಕರ್ತರ ಸಂಘದಿAದ, ಗುಡ್ಡೆಹೊಸೂರಿನ ಐಶ್ವರ್ಯ ಪಬ್ಲಿಕ್ ಶಾಲೆಯಲ್ಲಿ ಜು. ೪ರಂದು ಪೂರ್ವಾಹ್ನ ೧೧ ಗಂಟೆಗೆ ನಡೆಯುವ ಪತ್ರಿಕಾ ದಿನಾಚರಣೆ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ.
ಪತ್ರಿಕಾ ದಿನಾಚರಣೆ ಕಾರ್ಯಕ್ರಮವನ್ನು ಐಶ್ಬರ್ಯ ವಿದ್ಯಾಸಂಸ್ಥೆಯ ಅಧ್ಯಕ್ಷ ಪುಲಿಯಂಡ ರಾಮ್ ದೇವಯ್ಯ ಉದ್ಘಾಟಿಸಲಿದ್ದು, ಸಂಘದ ಅಧ್ಯಕ್ಷ ಬಿ.ಸಿ.ದಿನೇಶ್ ಅವರು ಅಧ್ಯಕ್ಷತೆ ವಹಿಸಲಿದ್ದಾರೆ. ಕೊಡಗು ಪತ್ರಕರ್ತರ ಸಂಘದ ಅಧ್ಯಕ್ಷ ಅನಿಲ್ ಎಚ್.ಟಿ. ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದು, ಕೊಡಗು ಪತ್ರಿಕಾಭವನ ಟ್ರಸ್ಟ್ನ ಪ್ರಧಾನ ಕಾರ್ಯದರ್ಶಿ, ಎಸ್.ಜಿ. ಉಮೇಶ್ ದಿನದ ಮಹತ್ವದ ಕುರಿತು ಮಾತನಾಡಲಿದ್ದಾರೆ.
ಗುಡ್ಡೆಹೊಸೂರು ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಎಂ.ಆರ್.ಸುಮೇಶ್, ಐಶ್ವರ್ಯ ಪಬ್ಲಿಕ್ ಶಾಲೆಯ ಪ್ರಾಂಶುಪಾಲ ಅಮ್ಮಾಟಂಡ ಎ. ಜೋಯಪ್ಪ, ಸುಂಟಿಕೊಪ್ಪ ನಾಡ ಕಚೇರಿ ಕಂದಾಯ ಪರಿವೀಕ್ಷಕ ಎಂ.ಎಚ್.ಪ್ರಶಾAತ್ ಅವರುಗಳು ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ ಎಂದು ಸಂಘದ ಪ್ರಕಟಣೆ ತಿಳಿಸಿದೆ.