ಸಿದ್ದಾಪುರ, ಜೂ. ೨೯ : ಸಿದ್ದಾಪುರ ಪೊಲೀಸ್ ಠಾಣೆಯ ವತಿಯಿಂದ ಸಿದ್ದಾಪುರದ ವಿವಿಧ ಭಾಗದಲ್ಲಿ ಮಾದಕ ವಸ್ತುಗಳ ದುರುಪಯೋಗ ಮತ್ತು ಅಕ್ರಮ ಸಾಗಾಣೆ ವಿರುದ್ಧದ ಅಂತರರಾಷ್ಟ್ರೀಯ ದಿನವನ್ನು ಆಚರಿಸಿ, ಜನರಲ್ಲಿ ಜಾಗೃತಿ ಮೂಡಿಸಲಾಯಿತು.
ಸಿದ್ದಾಪುರದ ಬಸ್ಸ್ ನಿಲ್ದಾಣ, ನೆಲ್ಯಹುದಿಕೇರಿ ಪಟ್ಟಣ, ಸಿದ್ದಾಪುರ ಹಾಗೂ ಹಾಲುಗುಂದ ಶಾಲೆಗಳಿಗೆ ತೆರಳಿ ಮಾದಕ ವಸ್ತುಗಳ ವಿರುದ್ಧ ಜಾಗೃತಿ ಮೂಡಿಲಾಯಿತು. ಇದೇ ಸಂದರ್ಭ ಮಾದಕ ವಸ್ತುಗಳ ಸೇವನೆಯಿಂದ ಉಂಟಾಗುವ ಆರೋಗ್ಯ ಹಾಗೂ ಸಾಮಾಜಿಕ ಸಮಸ್ಯೆಗಳ ಬಗ್ಗೆ ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಲಾಯಿತು. ಮಾದಕ ವಸ್ತುಗಳ ಬಳಕೆ ಅಥವಾ ಮಾರಾಟ ಕಂಡುಬAದಲ್ಲಿ ಪೊಲೀಸ್ ಠಾಣೆಗೆ ಮಾಹಿತಿ ನೀಡುವಂತೆ ಮನವಿ ಮಾಡಲಾಯಿತು. ಈ ಸಂದರ್ಭ ಸಿದ್ದಾಪುರ ಠಾಣೆಯ ಎ.ಎಸ್.ಐ ರಾಜೇಶ್ ಹಾಗೂ ಸಿಬ್ಬಂದಿಗಳು, ವಿವಿಧ ಶಾಲೆಗಳ ಮುಖ್ಯೋಪಾಧ್ಯಾಯರು, ವಿವಿಧ ಸಂಘಟನೆಗಳ ಪ್ರಮುಖರು ಹಾಜರಿದ್ದರು.