ಶ್ರೀಮಂಗಲ, ಜೂ. ೨೯: ಶ್ರೀಮಂಗಲ ಪಟ್ಟಣದಲ್ಲಿ ಕಸ ವಿಲೇವಾರಿ ಸಮರ್ಪಕವಾಗಿ ನಡೆಯದ ಕಾರಣ ಸಾರ್ವಜನಿಕರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಪಟ್ಟಣದ ವಿವಿಧೆಡೆ ತ್ಯಾಜ್ಯ ರಾಶಿಗಳು ಬಿದ್ದಿದ್ದು, ಚರಂಡಿಗಳು ಕಸದಿಂದ ತುಂಬಿ ದುರ್ವಾಸನೆ ಬೀರುತ್ತಿರುವುದರಿಂದ ಸಾಂಕ್ರಾಮಿಕ ರೋಗಗಳ ಭೀತಿ ಎದುರಾಗಿದೆ ಎಂದು ನಾಗರಿಕರು ಆರೋಪಿಸಿದ್ದಾರೆ.

ಗ್ರಾಮ ಪಂಚಾಯಿತಿಯಿAದ ಪ್ರತಿದಿನ ನಿಯಮಿತವಾಗಿ ಸ್ವಚ್ಛತಾ ಕಾರ್ಯ ನಡೆಸಲಾಗುತ್ತಿಲ್ಲ ಎಂದು ಸ್ಥಳೀಯರು ದೂರಿದ್ದಾರೆ. ಗ್ರಾಮ ಪಂಚಾಯಿತಿ ಕಚೇರಿ ಮುಂಭಾಗ, ಬಸ್ ನಿಲ್ದಾಣದ ಎದುರು ಹಾಗೂ ಪಟ್ಟಣದ ಪ್ರಮುಖ ಚರಂಡಿಗಳಲ್ಲಿ ತ್ಯಾಜ್ಯ ತುಂಬಿಕೊAಡಿದ್ದು, ಹಲವು ಬಾರಿ ದೂರು ನೀಡಿದರೂ ಅಧಿಕಾರಿಗಳು ಯಾವುದೇ ಕ್ರಮ ಕೈಗೊಂಡಿಲ್ಲದ ಬಗ್ಗೆ ಸಾರ್ವಜನಿಕ ವಲಯದಲ್ಲಿ ಆಕ್ರೋಶಕ್ಕೆ ಕಾರಣವಾಗಿದೆ. ಈ ಕುರಿತು ಪ್ರತಿಕ್ರಿಯಿಸಿದ ಶ್ರೀಮಂಗಲ ಚೇಂಬರ್ ಆಫ್ ಕಾಮರ್ಸ್ ಅಧ್ಯಕ್ಷ ಮಾಣಿರ ಮುತ್ತಪ್ಪ ಅವರು, ಬಸ್ ನಿಲ್ದಾಣದ ಸಮೀಪದಲ್ಲಿರುವ ಚರಂಡಿಗಳು ಕಸ ಹಾಗೂ ಸಾವಿರಾರು ಪ್ಲಾಸ್ಟಿಕ್ ಬಾಟಲಿಗಳಿಂದ ತುಂಬಿಕೊAಡಿವೆ. ಈ ಬಗ್ಗೆ ಹಲವು ಬಾರಿ ಗಮನ ಸೆಳೆದರೂ ಗ್ರಾಮ ಪಂಚಾಯಿತಿ ಅಧಿಕಾರಿಗಳು ಸ್ಪಂದಿಸಿಲ್ಲ ಎಂದು ಆರೋಪಿಸಿದರು. ಪಟ್ಟಣದಲ್ಲಿ ಸಮರ್ಪಕವಾಗಿ ಸ್ವಚ್ಛತಾ ಕಾರ್ಯ ನಡೆಯದ ಕಾರಣ ಪರಿಸರ ಮಾಲಿನ್ಯ ಹೆಚ್ಚುತ್ತಿದ್ದು, ಸಾರ್ವಜನಿಕ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವ ಸಾಧ್ಯತೆ ಇದೆ. ಮಳೆಗಾಲದಲ್ಲಿ ಚರಂಡಿಗಳು ಮುಚ್ಚಿಹೋಗುವುದರಿಂದ ನೀರು ಸರಾಗವಾಗಿ ಹರಿಯದೆ ಸಮಸ್ಯೆ ಮತ್ತಷ್ಟು ಗಂಭೀರವಾಗುವ ಆತಂಕವಿದೆ ಎಂದು ಅವರು ಹೇಳಿದರು.

ಕೂಡಲೇ ಸಂಬAಧಪಟ್ಟ ಅಧಿಕಾರಿಗಳು ಪಟ್ಟಣದಾದ್ಯಂತ ಸ್ವಚ್ಛತಾ ಕಾರ್ಯ ಕೈಗೊಂಡು ಸಂಗ್ರಹವಾಗಿರುವ ತ್ಯಾಜ್ಯವನ್ನು ಸೂಕ್ತ ಸ್ಥಳಕ್ಕೆ ವಿಲೇವಾರಿ ಮಾಡಬೇಕು ಎಂದು ನಾಗರಿಕರು ಒತ್ತಾಯಿಸಿದ್ದಾರೆ.