ಸಿದ್ದಾಪುರ, ಜೂ. ೩೦: ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಸಿಪಿಐಎಂ ಪಕ್ಷದ ವತಿಯಿಂದ ಸಿದ್ದಾಪುರ ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ವಿಚಾರ ಸಂಕಿರಣ ನಡೆಯಿತು.

ಕಾರ್ಯಕ್ರಮದಲ್ಲಿ ಹಾಸನ ಜಿಲ್ಲಾ ಸಿಪಿಐಎಂ ಕಾರ್ಯದರ್ಶಿ ಎಚ್.ಆರ್. ನವೀನ್ ಕುಮಾರ್ ಮಾತನಾಡಿ, ಎಸ್‌ಐಆರ್ ವಿಶೇಷ ಸಮಗ್ರ ಪರಿಷ್ಕರಣೆ ಕುರಿತು ಪ್ರತಿಯೊಬ್ಬ ಮತದಾರರು ಜಾಗೃತರಾಗಿರಬೇಕು. ಈ ಪ್ರಕ್ರಿಯೆಗೆ ಸಂಬAಧಿಸಿದ ಮಾಹಿತಿಯನ್ನು ಸಂಬAಧ ಪಟ್ಟ ಇಲಾಖೆಯಿಂದ ಪಡೆದುಕೊಳ್ಳುವುದರೊಂದಿಗೆ ಅಗತ್ಯವಿದ್ದಲ್ಲಿ ಸಿಪಿಐಎಂ ಪಕ್ಷದ ಮುಖಂಡರನ್ನು ಸಂಪರ್ಕಿಸಿ ಮಾಹಿತಿ ಪಡೆಯಬೇಕು ಎಂದು ಸಲಹೆ ನೀಡಿದರು. ಮತದಾರರ ಪಟ್ಟಿಗೆ ಸಂಬAಧಿಸಿದ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆಯಲ್ಲಿ ಯಾವುದೇ ಲೋಪದೋಷಗಳಾಗದಂತೆ ಸಾರ್ವಜನಿಕರು ಹೆಚ್ಚಿನ ಗಮನಹರಿಸಿ ತಮ್ಮ ಹಕ್ಕುಗಳನ್ನು ಸಮರ್ಪಕವಾಗಿ ಬಳಸಿಕೊಳ್ಳಬೇಕು ಎಂದು ಅವರು ಕರೆ ನೀಡಿದರು. ಕಾರ್ಯಕ್ರಮದಲ್ಲಿ ಸಿಪಿಐಎಂ ಜಿಲ್ಲಾ ಕಾರ್ಯದರ್ಶಿ ಹೆಚ್.ಬಿ. ರಮೇಶ್, ಎನ್.ಪಿ.ಆರ್. ಭರತ್, ಡಿ. ಕುಟ್ಟಪ್ಪನ್, ಬೈಜು, ಪದ್ಮಿನಿ ಶ್ರೀಧರ, ಜೆ.ಆರ್. ಪ್ರೇಮ್ ಸೇರಿದಂತೆ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.