ಮುಳ್ಳೂರು, ಜು. ೧ : ಸಮೀಪದ ಆಲೂರು-ಸಿದ್ದಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕಕಣಗಾಲು ಗ್ರಾಮದಲ್ಲಿ ರೂ. ೨೦ ಲಕ್ಷ ವೆಚ್ಚದಲ್ಲಿ ಕೊಡಗು ನಿರ್ಮಿತಿ ಕೇಂದ್ರದ ವತಿಯಿಂದ ನಿರ್ಮಾಣಗೊಳ್ಳಲಿರುವ ಅಂಬೇಡ್ಕರ್ ಭವನದ ಕಾಮಗಾರಿಗೆ ಮಡಿಕೇರಿ ಶಾಸಕ ಡಾ. ಮಂತರ್ ಗೌಡ ಭೂಮಿಪೂಜೆ ನೆರವೇರಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಶಾಸಕರು, ಅಂಬೇಡ್ಕರ್ ಭವನವು ಗ್ರಾಮಸ್ಥರ ಸಾಮಾಜಿಕ ಹಾಗೂ ಸಾರ್ವಜನಿಕ ಚಟುವಟಿಕೆಗಳಿಗೆ ಉಪಯುಕ್ತ ಕೇಂದ್ರವಾಗಲಿದ್ದು, ಕಾಮಗಾರಿಯನ್ನು ಉತ್ತಮ ಗುಣಮಟ್ಟದಲ್ಲಿ ಹಾಗೂ ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸುವಂತೆ ಗ್ರಾಮಸ್ಥರು ಮತ್ತು ಸಂಬAಧಪಟ್ಟವರು ಗಮನಹರಿಸಬೇಕು ಎಂದರು.

ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಎಂ.ವಿ. ಅಶೋಕ್, ಮಾಜಿ ಸದಸ್ಯೆ ಲೀಲಾವತಿ, ಸೋಮವಾರಪೇಟೆ ತಾಲೂಕು ಯೂತ್ ಕಾಂಗ್ರೆಸ್ ಅಧ್ಯಕ್ಷ ಡಿ.ಯು. ಕಿರಣ್, ಪ್ರಮುಖರಾದ ಶಿವಣ್ಣ, ರಂಗ, ಪ್ರೇಮ್ ಕುಮಾರ್, ಕಾಶಿ, ಚೇತನ್ ಸೇರಿದಂತೆ ಗ್ರಾಮಸ್ಥರು ಉಪಸ್ಥಿತರಿದ್ದರು.